ICC ODI Ranking: ಆಸ್ಟ್ರೇಲಿಯಾ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಪಾಕಿಸ್ತಾನ
Team Udayavani, Aug 27, 2023, 3:27 PM IST
ದುಬೈ: ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯನ್ನು 3-0 ಅಂತರದಿಂದ ಗೆದ್ದುಕೊಂಡ ಪಾಕಿಸ್ತಾನವು ಐಸಿಸಿ ಏಕದಿನ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನಕ್ಕೇರಿದೆ. ಮೊದಲ ಸ್ಥಾನದಲ್ಲಿದ್ದ ಆಸ್ಟ್ರೇಲಿಯಾವನ್ನು ಹಿಂದಿಕ್ಕಿದ ಬಾಬರ್ ಅಜಂ ಪಡೆ ಇದೀಗ ಆ ಸ್ಥಾನ ಪಡೆದಿದೆ.
ಅಫ್ಘಾನಿಸ್ತಾನದ ಸರಣಿಯ ಮೊದಲು, ಆಸ್ಟ್ರೇಲಿಯಾವು ನಂ. 1 ಸ್ಥಾನದಲ್ಲಿತ್ತು. ಪಾಕಿಸ್ತಾನವು 115.8 ರೇಟಿಂಗ್ ಪಾಯಿಂಟ್ ಗಳೊಂದಿಗೆ ಎರಡನೇ ಸ್ಥಾನದಲ್ಲಿತ್ತು. ಆದರೆ ಅಫ್ಘಾನಿಸ್ತಾನ ವಿರುದ್ಧದ ಸರಣಿ ಗೆಲುವು ಬಾಬರ್ ಅಜಂ ನೇತೃತ್ವದ ತಂಡವು 118.48 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಮೊದಲ ಸ್ಥಾನಕ್ಕೇರಿದೆ. ಇತ್ತೀಚೆಗಷ್ಟೇ ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿಯಲ್ಲಿ 2-1 ಅಂತರದಲ್ಲಿ ಜಯ ಸಾಧಿಸಿದ್ದ ಭಾರತ ತಂಡ ಶ್ರೇಯಾಂಕದಲ್ಲಿ ಮೂರನೇ ಸ್ಥಾನದಲ್ಲಿದೆ.
ಭಾರತ ತಂಡವು ಸದ್ಯ 113 ರೇಟಿಂಗ್ ಪಾಯಿಂಟ್ ಹೊಂದಿದೆ. ನ್ಯೂಜಿಲ್ಯಾಂಡ್, ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಕ್ರಮವಾಗಿ ನಾಲ್ಕು, ಐದು ಮತ್ತು ಆರನೇ ಸ್ಥಾನದಲ್ಲಿದೆ.
ಇದನ್ನೂ ಓದಿ:Wedding; ತುಮಕೂರು: ತಾಳಿ ಕಟ್ಟುವ ವೇಳೆ ಮದುವೆ ಬೇಡವೆಂದು ಹಸೆಮಣೆಯಿಂದ ಮೇಲೆದ್ದ ವಧು
ಟಿ20 ರ್ಯಾಂಕಿಂಗ್ ನಲ್ಲಿ ಭಾರತವು ಅಗ್ರಸ್ಥಾನದಲ್ಲಿ ಮುಂದುವರಿದಿದೆ. ಇಂಗ್ಲೆಂಡ್ ಮತ್ತು ನ್ಯೂಜಿಲ್ಯಾಂಡ್ ತಂಡಗಳು ನಂತರದ ಎರಡು ಸ್ಥಾನದಲ್ಲಿದೆ.
ಟೆಸ್ಟ್ ರ್ಯಾಂಕಿಂಗ್ ನಲ್ಲಿಯೂ ಭಾರತವೇ ಅಧಿಪತ್ಯ ಸಾಧಿಸಿದೆ. ಇತ್ತೀಚೆಗೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಗೆದ್ದ ಆಸ್ಟ್ರೇಲಿಯಾ ಎರಡನೇ ಸ್ಥಾನದಲ್ಲಿ ಮುಂದುವರಿದಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.