ICC ODI Rankings: ಏಷ್ಯಾಕಪ್ ನಲ್ಲಿ ಅಮೋಘ ಬೌಲಿಂಗ್; ನಂ.1 ಏಕದಿನ ಬೌಲರ್ ಆದ ಸಿರಾಜ್
Team Udayavani, Sep 20, 2023, 3:29 PM IST
ನವದೆಹಲಿ: ಏಷ್ಯಾಕಪ್ ಟೂರ್ನಿಯಲ್ಲಿನ ಅಮೋಘ ಪ್ರದರ್ಶನದಿಂದ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಏಕದಿನ ಬೌಲಿಂಗ್ ಶ್ರೇಯಾಂಕದಲ್ಲಿ ನಂ.1 ಬೌಲರ್ ಆಗಿ ಹೊರಹೊಮ್ಮಿದ್ದಾರೆ.
ಟೀಮ್ ಇಂಡಿಯಾ ಏಷ್ಯಾಕಪ್ ಫೈನಲ್ ನಲ್ಲಿ ಲಂಕಾವನ್ನು 50 ರನ್ ಗಳಿಗೆ ಆಲ್ ಔಟ್ ಮಾಡಿ, ಸುಲಭ ಜಯಸಾಧಿಸಿ, ಏಷ್ಯಾ ಚಾಂಪಿಯನ್ ಆಗಿದ್ದಾರೆ. ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಗಮನ ಸೆಳೆದ ಪ್ರಮುಖ ಅಂಶವೆಂದರೆ ಅದು ಸಿರಾಜ್ ಅವರ ಅಮೋಘ ಬೌಲಿಂಗ್ ಪ್ರದರ್ಶನ. ಸಿರಾಜ್ ಕೇವಲ 7 ಓವರ್‌ಗಳಲ್ಲಿ 6 ವಿಕೆಟ್ ಪಡೆದಿದ್ದರು. 21 ರನ್ ಕೊಟ್ಟು 6 ವಿಕೆಟ್ ಪಡೆದು ಲಂಕಾದ ಪ್ರಮುಖ ವಿಕೆಟ್ ಗಳನ್ನು ಪಡೆದಿದ್ದರು.
ಈ ಸಾಧನೆ ಅವರ ರ‍್ಯಾಂಕಿಂಗ್ ನಲ್ಲಿ ದೊಡ್ಡ ಬದಲಾವಣೆಯನ್ನು ತಂದಿದೆ. ಐಸಿಸಿ ನೂತನ ಏಕದಿನ ಬೌಲಿಂಗ್ ರ‍್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ನಂ.1 ಏಕದಿನ ಬೌಲರ್ ಆಗಿ ಸಿರಾಜ್ ಹೊರಹೊಮ್ಮಿದ್ದಾರೆ.
ಏಷ್ಯಾಕಪ್ ಫೈನಲ್ ಪಂದ್ಯಕ್ಕೂ ಮುನ್ನ ಸಿರಾಜ್ 637 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದ್ದರು. ಫೈನಲ್ ಪಂದ್ಯದಲ್ಲಿನ ಅವರ ಶ್ರೇಷ್ಠಮಟ್ಟದ ಬೌಲಿಂಗ್ ನಿಂದ ಅವರು 694 ಅಂಕಗಳನ್ನು ಪಡೆದು ನಂ.1 ಬೌಲರ್ ಆಗಿದ್ದಾರೆ. 678 ಅಂಕದೊಂದಿಗೆ ದ್ವಿತೀಯ ಸ್ಥಾನದಲ್ಲಿ ಆಸ್ಟ್ರೇಲಿಯದ ಜೋಶ್ ಹ್ಯಾಜಲ್ ವುಡ್ ಇದ್ದಾರೆ.
2023ರ ಜನವರಿಯಲ್ಲಿ ಶ್ರೀಲಂಕಾ ವಿರುದ್ಧದ ತವರಿನ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿ ಸಿರಾಜ್ ನಂ.1 ಬೌಲರ್ ಆಗಿದ್ದರು.
ಐಸಿಸಿ ಏಕದಿನ ಬೌಲಿಂಗ್ ರ‍್ಯಾಂಕಿಂಗ್:
- ಮೊಹಮ್ಮದ್ ಸಿರಾಜ್ – 694
- ಜೋಶ್ ಹ್ಯಾಜಲ್‌ವುಡ್ – 678
- ಟ್ರೆಂಟ್ ಬೋಲ್ಟ್ – 677
- ಮುಜೀಬ್ ಉರ್ ರೆಹಮಾನ್ – 657
- ರಶೀದ್ ಖಾನ್ – 655
ಏಕದಿನ ಬ್ಯಾಟಿಂಗ್ ರ‍್ಯಾಂಕಿಂಗ್: ಇನ್ನು ಏಕದಿನ ಬ್ಯಾಟಿಂಗ್ ರ‍್ಯಾಂಕಿಂಗ್ ನಲ್ಲೂ ಟೀಮ್ ಇಂಡಿಯಾದ ಬ್ಯಾಟರ್ ಗಳು ಉತ್ತಮ ಅಂಕಗಳಿಸಿದ್ದಾರೆ. ಏಷ್ಯಾಕಪ್ ನಲ್ಲಿನ ಶತಕ ಸೇರಿದಂತೆ ಅಮೋಘ ಪ್ರದರ್ಶನದಿಂದ ವಿರಾಟ್ ಕೊಹ್ಲಿ ನಂ.8 ಬ್ಯಾಟರ್ ಆಗಿ ಹೊರಹೊಮ್ಮಿದ್ದಾರೆ. ಶುಭ್ಮನ್ ಗಿಲ್ ಮತ್ತೆ ನಂ.2 ಸ್ಥಾನಕ್ಕೆ ಮರಳಿದ್ದಾರೆ. ಮೂರು ಅರ್ಧ ಶತಕಗಳನ್ನು ಬಾರಿಸಿದ ನಾಯಕ ರೋಹಿತ್ ಶರ್ಮಾ 10ನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.
ಇನ್ನು ಆಲ್‌ರೌಂಡರ್ ವಿಭಾಗದಲ್ಲಿ ಹಾರ್ದಿಕ್ ಪಾಂಡ್ಯಾ ಏಷ್ಯಾಕಪ್ ನಲ್ಲಿನ ಉತ್ತಮ ಆಟದಿಂದ 6ನೇ ಸ್ಥಾನಕ್ಕೇರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
IPL Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.