ಮಹಿಳಾ ವಿಶ್ವಕಪ್ ಕ್ರಿಕೆಟ್ ಪ್ರಶಸ್ತಿ;12.87 ಕೋ.ರೂ.ಗೇರಿಸಿದ ಐಸಿಸಿ
Team Udayavani, May 6, 2017, 2:56 PM IST
ನವದೆಹಲಿ: ಪ್ರಸಕ್ತ ವರ್ಷ ನಡೆಯಲಿರುವ ಮಹಿಳಾ ವಿಶ್ವಕಪ್ ಕ್ರಿಕೆಟ್‌ನ ಪ್ರಶಸ್ತಿ ಮೊತ್ತವನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) 12.87 ಕೋಟಿ ರೂ.ಗೆ ಏರಿಸಿದೆ. ಭಾರತದಲ್ಲಿ ನಡೆದ ಹಿಂದಿನ ವಿಶ್ವಕಪ್‌ಗೆ ಹೋಲಿಸಿದರೆ ಇದು 10 ಪಟ್ಟು ಏರಿಕೆಯಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಐಸಿಸಿ ಪ್ರಧಾನ ಕಾರ್ಯದರ್ಶಿ ಡೇವಿಡ್ ರಿಚಡ್ಸìನ್, ಮಹಿಳಾ ಕ್ರಿಕೆಟ್‌ಗೆ ಹೆಚ್ಚಿನ ಸಮಾನತೆ ಮತ್ತು ಮನ್ನಣೆ ನೀಡುವ ದೃಷ್ಟಿಯಿಂದ ಪ್ರಶಸ್ತಿ ಮೊತ್ತವನ್ನು ಹೆಚ್ಚಿಸಲಾಗಿದೆ. ಬದಲಾವಣೆ ಅನ್ನುವುದು ರಾತ್ರಿ ಬೆಳಗಾಗುವುದರೊಳಗೆ ಆಗುವುದಲ್ಲ.
ಹಂತ ಹಂತವಾಗಿ ಆ ಕೆಲಸವನ್ನು ಮಾಡಬೇಕಾಗಿದೆ. ಜಾಗತಿಕವಾಗಿ ಮಹಿಳಾ ಕ್ರಿಕೆಟ್ ಖ್ಯಾತಿ ಪಡೆಯುತ್ತಿದೆ, ವೀಕ್ಷಕರ ಸಂಖ್ಯೆಯೂ ಹೆಚ್ಚಾಗಿದೆ ಎಂದು ತಿಳಿಸಿದರು. ಇಂಗ್ಲೆಂಡ್‌ನಲ್ಲಿ ಜೂನ್ 24ರಿಂದ ಜುಲೈ 23ರವರೆಗೆ ವಿಶ್ವಕಪ್ ನಡೆಯಲಿದೆ. ಒಟ್ಟು 8 ತಂಡಗಳು ಪಾಲ್ಗೊಳ್ಳಲಿವೆ. ಅದರಲ್ಲಿ ಅಗ್ರ 4 ಶ್ರೇಯಾಂಕಿತ ತಂಡಗಳು ನೇರವಾಗಿ ಪ್ರವೇಶಿಸಿದರೆ, ಉಳಿದ 4 ತಂಡಗಳು ಅರ್ಹತಾ ಸುತ್ತಿನ ಪಂದ್ಯಗಳನ್ನು ಆಡಿ ಪ್ರವೇಶಿಸಿವೆ. ಇದೇ ಮೊದಲ ಬಾರಿಗೆ ಮಹಿಳಾ ಕ್ರಿಕೆಟ್‌ನಲ್ಲಿ ಡಿಆರ್‌ಎಸ್ ಅಳವಡಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.