ಟೆಸ್ಟ್ ಶ್ರೇಯಾಂಕ: ರವೀಂದ್ರಜಡೇಜ ನಂ.1 ಬೌಲರ್
Team Udayavani, Aug 2, 2017, 12:14 PM IST
ದುಬೈ: ನೂತನ ಐಸಿಸಿ ಟೆಸ್ಟ್ ಶ್ರೇಯಾಂಕ ಪಟ್ಟಿ ಬಿಡುಗಡೆಯಾಗಿದೆ. ಬೌಲಿಂಗ್ ವಿಭಾಗದಲ್ಲಿ ಭಾರತೀಯ ಸ್ಪಿನ್ನರ್ ರವೀಂದ್ರ ಜಡೇಜ ನಂ.1ನೇ ಶ್ರೇಯಾಂಕ ಕಾಯ್ದುಕೊಂಡಿದ್ದಾರೆ. ಬ್ಯಾಟಿಂಗ್ ವಿಭಾಗದಲ್ಲಿ ವಿರಾಟ್ ಕೊಹ್ಲಿ 5ನೇ, ಚೇತೇಶ್ವರ ಪೂಜಾರ 4ನೇ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ಸ್ಪಿನ್ನರ್ ಜಡೇಜ ಒಟ್ಟು 897 ಅಂಕವನ್ನು ಹೊಂದಿದ್ದಾರೆ. ಭಾರತದ ಮತ್ತೂಬ್ಬ ಸ್ಪಿನ್ನರ್ ಆರ್.ಅಶ್ವಿನ್ 849 ಅಂಕವನ್ನು ಹೊಂದಿದ್ದು, ನಂ.2ನೇ ಸ್ಥಾನ ಕಾಯ್ದು ಕೊಂಡಿದ್ದಾರೆ.
5ನೇ ಸ್ಥಾನದಲ್ಲಿ ಕೊಹ್ಲಿ: ಭಾರತ ತಂಡದ ಯಶಸ್ವಿ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಲಂಕಾ ವಿರುದ್ಧ ಶತಕ ಸಿಡಿಸಿದರೂ ಅವರ ಶ್ರೇಯಾಂಕದಲ್ಲಿ ಏರಿಕೆಯಾಗಿಲ್ಲ. 826 ಅಂಕವನ್ನು ಹೊಂದಿದ್ದು, ನಂ.5ನೇ ಸ್ಥಾನ ಕಾಯ್ದುಕೊಂಡಿದ್ದಾರೆ. ಪೂಜಾರ 866 ಅಂಕವನ್ನು ಹೊಂದಿದ್ದು, 4ನೇ ಸ್ಥಾನದಲ್ಲಿದ್ದಾರೆ. ಉಳಿದಂತೆ ಆಸ್ಟ್ರೇಲಿಯಾದ ಸ್ಟೀವನ್ ಸ್ಪಿನ್ ನಂ.1ನೇ ಸ್ಥಾನ ಕಾಯ್ದು ಕೊಂಡಿದ್ದಾರೆ. ಇಂಗ್ಲೆಂಡ್ ಜೋ ರೂಟ್ ನಂ.2ನೇ ಸ್ಥಾನಕ್ಕೇರಿದ್ದರೆ, ನ್ಯೂಜಿಲೆಂಡ್ ನ ಕೇನ್ ವಿಲಿಯಮ್ಸನ್ ನಂ.3ನೇ ಸ್ಥಾನಕ್ಕೆ ಕುಸಿದಿದ್ದಾರೆ.
ಆಲ್ರೌಂಡರ್ ವಿಭಾಗದಲ್ಲಿ ಬಾಂಗ್ಲಾದ ಶಕೀಬ್ ಅಲ್ ಹಸನ್, ರವೀಂದ್ರ ಜಡೇಜ, ಆರ್.ಅಶ್ವಿನ್ ಕ್ರಮವಾಗಿ ಮೂರು ಸ್ಥಾನ ಕಾಯ್ದು ಕೊಂಡಿದ್ದಾರೆ. ತಂಡದ ವಿಭಾಗದಲ್ಲಿ ಭಾರತ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ಇಂಗ್ಲೆಂಡ್, ನ್ಯೂಜಿಲೆಂಡ್ ತಂಡಗಳು ಕ್ರಮವಾಗಿ ಮೊದಲ 5 ಸ್ಥಾನವನ್ನು
ಕಾಯ್ದುಕೊಂಡಿವೆ. ಇಂಗ್ಲೆಂಡ್ನ ಆಲ್ ರೌಂಡರ್ ಬೆನ್ ಸ್ಟೋಕ್ಸ್ ಬ್ಯಾಟಿಂಗ್ ವಿಭಾಗದಲ್ಲಿ 25ನೇ ಸ್ಥಾನ, ಬೌಲಿಂಗ್ ವಿಭಾಗದಲ್ಲಿ 19ನೇ ಸ್ಥಾನಕ್ಕೇರಿದ್ದಾರೆ. ಇದು ಸ್ಟೋಕ್ಸ್ ಅವರ ಜೀವನ ಶ್ರೇಷ್ಠ ಸಾಧನೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mahakumbh Mela: ಪ್ರಯಾಗ್ ರಾಜ್ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು ಬೆದರಿಕೆ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Daskath ಮೆಚ್ಚಿದ ಪ್ರೇಕ್ಷಕರಿಗೆ ಬಿಗ್ ನ್ಯೂಸ್ ಕೊಟ್ಟ ಚಿತ್ರತಂಡ
BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್; ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.