ಕ್ರೀಡಾಪಟುಗಳ ನೋವಿಗೆ ಸ್ಪಂದಿಸಿದ ಕ್ರೀಡಾ ಸಚಿವರು
Team Udayavani, Feb 1, 2017, 3:45 AM IST
ಬೆಂಗಳೂರು: ಅಂತಾರಾಷ್ಟ್ರೀಯ, ರಾಷ್ಟ್ರೀಯ ಮಟ್ಟದ ವಿವಿಧ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ಗೆದ್ದಿರುವ ರಾಜ್ಯದ ಕ್ರೀಡಾಪಟುಗಳಿಗೊಂದು ಸಿಹಿ ಸುದ್ದಿ. ಕಳೆದ 3 ವರ್ಷಗಳಿಂದ ಸಿಗದಿರುವ ನಗದು ಪುರಸ್ಕಾರ ಇನ್ನೆರಡು ತಿಂಗಳಲ್ಲಿ ನಿಮ್ಮ ಕೈ ಸೇರಲಿದೆ.
“ಪದಕ ಗೆದ್ದರೂ ರಾಜ್ಯದ ಕ್ರೀಡಾಪಟುಗಳಿಗೆ ಸಿಕ್ಕಿಲ್ಲ ಕಾಸು!’ ಎನ್ನುವ ಶೀರ್ಷಿಕೆಯಡಿ ಉದಯವಾಣಿ ಪ್ರಕಟಿಸಿದ್ದ ವಿಶೇಷ ವರದಿಗೆ ರಾಜ್ಯ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಕ್ಷಿಪ್ರಗತಿಯಲ್ಲಿ ಸ್ಪಂದಿಸಿದ್ದು, ಹಣ ಬಿಡುಗಡೆ ಕುರಿತಂತೆ ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐ.ಎನ್.ಎಸ್. ಪ್ರಸಾದ್ ಜತೆಗೆ ತುರ್ತು ಸಭೆ ನಡೆಸಿದ್ದಾರೆ.
ಕ್ರೀಡಾಪಟುಗಳಿಗೆ ಬಾಕಿ ಉಳಿದಿರುವ ಕೋಟ್ಯಂತರ ರೂ. ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆಗೆ ಸಚಿವರು ಮನವಿ ಮಾಡಿದ್ದು, ಇದಕ್ಕೆ ಸ್ಪಂದಿಸಿರುವ ಐ.ಎನ್.ಎಸ್. ಪ್ರಸಾದ್ ಅವರು, ಕ್ರೀಡಾಪಟುಗಳಿಗೆ ನೀಡಬೇಕಿರುವ ಹಣವನ್ನು ಮುಂದಿನ ಎರಡು ತಿಂಗಳೊಳಗೆ ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ.
ಕ್ರೀಡಾಳುಗಳ ಪಟ್ಟಿ ಹಣಕಾಸು ಇಲಾಖೆಗೆ
ಈ ಹಿನ್ನೆಲೆಯಲ್ಲಿ ಪದಕ ವಿಜೇತ ಕ್ರೀಡಾಪಟುಗಳ ಪಟ್ಟಿಯನ್ನು ಎರಡು ದಿನಗಳಲ್ಲಿ ಹಣಕಾಸು ಇಲಾಖೆಗೆ ಕ್ರೀಡಾ ಇಲಾಖೆ ಕಳುಹಿಸಿ ಕೊಡಲಿದೆ. ಪಟ್ಟಿಯಲ್ಲಿರುವ ಅರ್ಹ ಕ್ರೀಡಾಪಟುಗಳ ಸಾಧನೆಯನ್ನು ಹಣಕಾಸು ಇಲಾಖೆ ಪರಿಶೀಲನೆ ನಡೆಸಲಿದೆ. ಬಳಿಕ ಫೆಬ್ರವರಿಯಲ್ಲಿ ಅನುದಾನ ನೀಡುವ ಕುರಿತು ಹಣಕಾಸು ಇಲಾಖೆ ಕ್ರಮ ಕೈಗೊಳ್ಳಲಿದೆ. ಈ ಬಗ್ಗೆ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಅವರು ಉದಯವಾಣಿಗೆ ಮಾಹಿತಿ ನೀಡಿದ್ದು, ಮುಂದಿನ ಎರಡು ತಿಂಗಳ ಒಳಗೆ ಹಣ ಬಿಡುಗಡೆಯಾಗುವುದು ಖಚಿತ ಎಂದಿದ್ದಾರೆ.
ಬಾಕಿ ಇರುವುದು 14.50 ಕೋಟಿ ರೂ.
2014ನೇ ಸಾಲಿನಿಂದ ಅಂತಾರಾಷ್ಟ್ರೀಯ, ರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದ ರಾಜ್ಯದ ಕ್ರೀಡಾಪಟುಗಳಿಗೆ ನಗದು ಪುರಸ್ಕಾರ ಕ್ರೀಡಾ ಇಲಾಖೆ ಯಿಂದ ಸಿಕ್ಕಿರಲಿಲ್ಲ. ಅಷ್ಟೊಂದು ದೊಡ್ಡ ಮೊತ್ತವನ್ನು ನೀಡಲು ಇಲಾಖೆ ಬಳಿ ಅನುದಾನ ಇರಲಿಲ್ಲ. ಈ ಬಗ್ಗೆ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಕಳೆದ ವರ್ಷವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಚರ್ಚೆ ನಡೆಸಿದ್ದರು. ಮುಖ್ಯಮಂತ್ರಿಗಳು ಅನುದಾನ ಬಿಡುಗಡೆ ಮಾಡಲು ಹಣಕಾಸು ಇಲಾಖೆಗೆ ಸೂಚಿಸಿದ್ದರು. ಆದರೆ ಅದು ಪ್ರಗತಿಯಲ್ಲಿ ಇರಲಿಲ್ಲ. ಇದರಿಂದ ಸಾಕಷ್ಟು ಅಥ್ಲೀಟ್‌ಗಳ ಅಭ್ಯಾಸಕ್ಕೆ ತೊಡಕಾಗಿತ್ತು.
ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಜತೆ ತುರ್ತು ಸಭೆ ನಡೆಸಿ ಕ್ರೀಡಾಪಟುಗಳಿಗೆ ನೀಡಲು ಬಾಕಿ ಇರುವ 14.50 ಕೋಟಿ ರೂ. ಶೀಘ್ರದಲ್ಲೇ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೇನೆ. ಅವರೂ ಮನವಿಗೆ ಸ್ಪಂದಿಸಿದ್ದು, ಕ್ರೀಡಾ ಇಲಾಖೆಯಿಂದ ಪದಕ ವಿಜೇತ ಅಥ್ಲೀಟ್‌ಗಳ ಪಟ್ಟಿಯನ್ನು ಎರಡು ದಿನಗಳ ಒಳಗಾಗಿ ಕಳುಹಿಸಿಕೊಡುವಂತೆ ಸೂಚಿಸಿದ್ದಾರೆ. ಮುಂದಿನ ಎರಡು ತಿಂಗಳ ಒಳಗಾಗಿ ಸಮಸ್ಯೆ ಬಗೆಹರಿಯಲಿದೆ.
ಪ್ರಮೋದ್ ಮಧ್ವರಾಜ್, ಯುವಜನ ಮತ್ತು ಕ್ರೀಡಾ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australian Open: ಗಾಯಾಳಾಗಿ ಹೊರಬಿದ್ದ ಡಿಮಿಟ್ರೋವ್
Devajit Saikia : ಬಿಸಿಸಿಐ ಕಾಯದರ್ಶಿ; ಸೈಕಿಯಾ ಅರ್ಜಿ
SA vs Pak, 2nd Test: ರಿಕಲ್ಟನ್ ದ್ವಿಶತಕ, ದಕ್ಷಿಣ ಆಫ್ರಿಕಾ ಬೃಹತ್ ಮೊತ್ತ
Divorce Rumours: ಚಹಾಲ್ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?
Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Election: ಆಪ್ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್ ಮೈತ್ರಿ: ಕೇಜ್ರಿವಾಲ್
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.