ಇಂಡಿಪೆಂಡೆನ್ಸ್ ಕಪ್ ಫುಟ್ಬಾಲ್: ಅಲೋಶಿಯಸ್,ಯೇನಪೊಯ ಕಾಲೇಜು ಪ್ರಥಮ
Team Udayavani, Aug 16, 2017, 11:14 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಆಶ್ರಯದಲ್ಲಿ ಮಂಗಳೂರಿನ ನೆಹರೂ ಮೈದಾನದ ಫುಟ್ಬಾಲ್ ಕ್ರೀಡಾಂಗಣದಲ್ಲಿ ಕಳೆದ ಒಂ ತಿಂಗಳಿನಿಂದ ನಡೆಯುತ್ತಿರುವ 21ನೇ ಇಂಡಿಪೆಂಡೆನ್ಸ್ ಕಪ್ ಫುಟ್ಬಾಲ್ ಪಂದ್ಯಾವಳಿಯ ಪೈನಲ್ ಪಂದ್ಯಾಟ ಮಂಗಳವಾರ ನಡೆಯಿತು.
ಹೈಸ್ಕೂಲ್ ವಿಭಾಗದಲ್ಲಿ ಲೂರ್ಡ್ ಸೆಂಟ್ರಲ್ ಸ್ಕೂಲ್ ತಂಡವು ಸ್ವಾಮಿ ಸದಾನಂದ ಸರಸ್ವತಿ ಶಾಲಾ ತಂಡವನ್ನು 4-3 ಗೋಲುಗಳ ಅಂತರ ದಿಂದ ಸೋಲಿಸಿ ವಿಜಯಿಯಾಯಿತು. ಕಾಲೇಜು ವಿಭಾಗದಲ್ಲಿ ಸೈಂಟ್ ಅಲೋಶಿಯಸ್ ತಂಡ ಯೇನಪೊಯ ಕಾಲೇಜು ತಂಡವನ್ನು 3-2 ಗೋಲುಗಳಿಂದ ಸೋಲಿಸಿತು. ಪಿಯು ವಿಭಾಗದಲ್ಲಿ ಯೇನಪೊಯ ಕಾಲೇಜು ಪ್ರಥಮ ಹಾಗೂ ಸೈಂಟ್ ಅಲೋಶಿಯಸ್ ಕಾಲೇಜು ದ್ವಿತೀಯ ಸ್ಥಾನ ಪಡೆದವು.
ಪ್ರಶಸ್ತಿ ಸಮಾರಂಭ
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಾಸಕ ಜೆ.ಆರ್. ಲೋಬೋ, ಶ್ರೀ ದೇವಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎ. ಸದಾನಂದ ಶೆಟ್ಟಿ, ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ರೀಜನಲ್ ಮ್ಯಾನೇ ಜರ್ ಧರ್ಮರಾಜ್, ರಾಜ್ಯ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಪ್ರಕೋಷ್ಠದ ಸಹ ಸಂಚಾಲಕ ಬದ್ರೀನಾಥ್ ಕಾಮತ್, ಯೂನಿಯನ್ ಬ್ಯಾಂಕ್‌ನ ಸೀನಿಯರ್ ಮ್ಯಾನೇ ಜರ್ ಪ್ರೀತಮ್ ಬಿ.ಆರ್., ಕರ್ನಾಟಕ ಪರ್ಸಿನ್ ಬೋಟ್ ಮೀನುಗಾರರ ಸಂಘದ ಅಧ್ಯಕ್ಷ ಮೋಹನ್ ಬೆಂಗ್ರೆ, ಪ್ರಮುಖರಾದ ಸತೀಶ್ ಕುಮಾರ್, ಆಸಿಫ್ ಮೊದಲಾದವರು ಮುಖ್ಯ ಅತಿಥಿಗಳಾಗಿದ್ದರು.
ದಕ್ಷಿಣ ಕನ್ನಡ ಜಿಲ್ಲಾ ಫುಟ್ಬಾಲ್ ಅಸೋ ಸಿಯೇಶನ್ ಅಧ್ಯಕ್ಷ ಡಿ.ಎಂ.ಅಸ್ಲಾಂ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಹುಸೇನ್ ಬೋಳಾರ್ ಕಾರ್ಯಕ್ರಮ ನಿರೂಪಿಸಿ, ಮನ್ಸೂರ್ ಕಾರ್ಯಕ್ರಮ ನಡೆಸಿಕೊಟ್ಟರು. ಸಂಸ್ಥೆಯ ಪದಾಧಿಕಾರಿಗಳಾದ ಅನಿಲ್ ಕುಮಾರ್ ಪಿ.ವಿ. ಯುವರಾಜ್, ಉಮೇಶ್ ಉಚ್ಚಿಲ್, ಲತೀಫ್ ಬೆಂಗ್ರೆ, ರಾಜ್ಯ ಸಂಸ್ಥೆಯ ಅಧ್ಯಕ್ಷ ವಿಜಯ್ ಸುವರ್ಣ, ಹರೀಶ್ಚಂದ್ರ ಬೆಂಗ್ರೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಆಸ್ಟ್ರೇಲಿಯ ಸೋಲಿಗಿಂತ ತವರಿನ ವೈಟ್‌ವಾಶ್ ಆಘಾತಕಾರಿ: ಯುವಿ
ICC Champions Trophy: ಅಫ್ಘಾನಿಸ್ಥಾನ ವಿರುದ್ಧದ ಪಂದ್ಯಕ್ಕೆ ಇಂಗ್ಲೆಂಡ್ ಬಹಿಷ್ಕಾರ?
Jasprit Bumrah: ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ರೇಸ್‌ನಲ್ಲಿ ಬುಮ್ರಾ
WTC “ಟೆಸ್ಟ್ ಫೈನಲ್’ಗೂ ಮುನ್ನ ಒಂದು ಟೆಸ್ಟ್ ಆಡಲು ದ. ಆಫ್ರಿಕಾ ಯೋಜನೆ
Team India; ದ್ರಾವಿಡ್ ಇದ್ದಾಗ ಎಲ್ಲ ಸರಿಯಿತ್ತು: ಹರ್ಭಜನ್
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.