ಆಸ್ಟ್ರೇಲಿಯ ಸರಣಿಗೆ ತಯಾರಾಗಲು ಅವಕಾಶ: ರಾಹುಲ್ ದ್ರಾವಿಡ್
Team Udayavani, Nov 14, 2018, 8:23 AM IST
ಹೊಸದಿಲ್ಲಿ: ಭಾರತ “ಎ’ ತಂಡದ ಮುಂಬರುವ ನ್ಯೂಜಿಲ್ಯಾಂಡ್ ಪ್ರವಾಸ ಹಿರಿಯ ಆಟಗಾರರಿಗೆ ಆಸ್ಟ್ರೇಲಿಯದ ವಿರುದ್ಧದ ಕಠಿನ ಸರಣಿಗೆ ಸಿದ್ಧರಾಗಲು ದೊರಕಿರುವ ಒಂದು ಉತ್ತಮ ಅವಕಾಶ ಎಂದು ಮಾಜಿ ನಾಯಕ ಹಾಗೂ ಸದ್ಯ ಭಾರತ “ಎ’ ತಂಡದ ಕೋಚ್ ರಾಹುಲ್ ದ್ರಾವಿಡ್ ಅಭಿಪ್ರಾಯಪಟ್ಟಿದ್ದಾರೆ.
ನವೆಂಬರ್ 16ರಂದ ಆರಂಭವಾಗಲಿರುವ ನ್ಯೂಜಿಲ್ಯಾಂಡ್ ವಿರುದ್ಧದ ಸರಣಿ ಯಲ್ಲಿ ಮುರಳಿ ವಿಜಯ್, ಪೃಥ್ವಿ ಶಾ, ಹನುಮ ವಿಹಾರಿ, ರೋಹಿತ್ ಶರ್ಮ ಹಾಗೂ ಅಜಿಂಕ್ಯ ರಹಾನೆ ಭಾರತ “ಎ’ ತಂಡದಲ್ಲಿ ಆಡಲಿದ್ದಾರೆ. “ಭಾರತ ತಂಡ ವಿದೇಶಿ ಸರಣಿಗೆ ತೆರಳುವ ಮುನ್ನ ಇಂತಹ ಪ್ರವಾಸವನ್ನಿಡುವುದು ಉತ್ತಮ ವಿಚಾರ. ಕೆಲವೊಂದು ಆಟಗಾರರು ಹಿರಿಯ ಆಟಗಾರರ ನಿರ್ವಹಣ ಮಂಡಳಿ ಬಳಿ ಬಂದು ಭಾರತ “ಎ’ ತಂಡದಲ್ಲಿ ಆಡಲು ಮನವಿ ಸಲ್ಲಿಸಿರುವುದರಿಂದ ಇದು ಅವರಿಗೆ ಸಿಕ್ಕಿರುವ ಒಂದು ಉತ್ತಮ ಅವಕಾಶವಾಗಿದೆ. ಆಸ್ಟ್ರೇಲಿಯ ಹಾಗೂ ನ್ಯೂಜಿಲ್ಯಾಂಡ್‌ನಲ್ಲಿ ಒಂದೇ ರೀತಿಯ ವಾತಾವರಣವಿಲ್ಲದಿದ್ದರೂ, ಸರಣಿಗೂ ಮುನ್ನ ಹೆಚ್ಚಿನ ಅನುಭವ ಪಡೆಯಲು ನೆರವಾಗಬಹುದು’ ಎಂದು ದ್ರಾವಿಡ್ ತಿಳಿಸಿದ್ದಾರೆ.
ಭಾರತ “ಎ’ ತಂಡ ನ್ಯೂಜಿಲ್ಯಾಂಡ್ ವಿರುದ್ಧ 3 ಏಕದಿನ ಹಾಗೂ 4 ದಿನಗಳ ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಮೊದಲ ಟೆಸ್ಟ್ ಪಂದ್ಯವನ್ನು ಭಾರತ ತಂಡದ ಉಪ ನಾಯಕ ಅಜಿಂಕ್ಯ ರಹಾನೆ ಹಾಗೂ ಕೆಲವೊಂದು ಟೆಸ್ಟ್ ಪಂದ್ಯದ ನಾಯಕತ್ವವನ್ನು ಕರುಣ್ ನಾಯರ್ ನಿರ್ವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Sydney: ಆಸ್ಟ್ರೇಲಿಯಾ ಪ್ರೇಕ್ಷಕರಿಗೆ ಸ್ಯಾಂಡ್‌ಪೇಪರ್ ಕೇಸ್ ನೆನಪು ಮಾಡಿದ ವಿರಾಟ್|Video
World Test Championship: ಭಾರತದ ಕನಸು ಛಿದ್ರ; ಆಸೀಸ್ ಫೈನಲ್ ಸ್ಥಾನ ಭದ್ರ
INDvAUS: ಸಿಡ್ನಿಯಲ್ಲಿ ಸೋಲು; ದಶಕದ ಬಳಿಕ ಬಾರ್ಡರ್ ಗಾವಸ್ಕರ್ ಟ್ರೋಫಿ ಸೋತ ಭಾರತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.