ಭಾರತ “ಎ’ ತಂಡ ಪ್ರಕಟ:ಅಜಿಂಕ್ಯ ರಹಾನೆ ನಾಯಕ
Team Udayavani, Jan 20, 2019, 12:30 AM IST
ಹೊಸದಿಲ್ಲಿ: ಮುಂದಿನ ವಾರ ಆರಂಭವಾಗಲಿರುವ ಇಂಗ್ಲೆಂಡ್ ಲಯನ್ಸ್ ವಿರುದ್ಧದ ಸರಣಿಗೆ ಬಿಸಿಸಿಐ ಭಾರತ “ಎ’ ತಂಡವನ್ನು ಪ್ರಕಟಿಸಿದ್ದು, ಭಾರತ ಟೆಸ್ಟ್ ತಂಡದ ಉಪನಾಯಕ ಅಜಿಂಕ್ಯ ರಹಾನೆ ಅವರನ್ನು ಮೊದಲ 3 ಏಕದಿನ ಪಂದ್ಯಗಳಿಗೆ ನಾಯಕನ್ನಾಗಿ ಆಯ್ಕೆ ಮಾಡಲಾಗಿದೆ.
ಭಾರತ “ಎ” ವಿರುದ್ಧದ ಸರಣಿಗಾಗಿ ಇಂಗ್ಲೆಂಡ್ ಲಯನ್ಸ್ ಆಗಮಿಸಲಿದ್ದು, 5 ಏಕದಿನ ಪಂದ್ಯ ಹಾಗೂ 3 ಚತುರ್ದಿನ ಪಂದ್ಯಗಳನ್ನು ಆಡಲಿದೆ. ಮೊದಲ 3 ಏಕದಿನ ಪಂದ್ಯಗಳಲ್ಲಿ ಭಾರತ ತಂಡವನ್ನು ಅಜಿಂಕ್ಯ ರಹಾನೆ ಮುನ್ನಡೆಸಿದರೆ, ಅನಂತರದ 2 ಪಂದ್ಯಗಳಲ್ಲಿ ಅಂಕಿತ್ ಬವೆ° ನಾಯಕನಾಗಿರಲಿದ್ದಾರೆ.
ಈ ಸರಣಿಯ ಮೊದಲ ಏಕದಿನ ಪಂದ್ಯ ಜ. 23ರಂದು ತಿರುವನಂತಪುರದಲ್ಲಿ ನಡೆಯಲಿದ್ದು, ಇದಕ್ಕೂ ಮುನ್ನ ಎರಡು ದಿನಗಳ ಅಭ್ಯಾಸ ಪಂದ್ಯ ನಡೆಯಲಿದೆ. ಇದಕ್ಕಾಗಿ ಬೋರ್ಡ್ ಪ್ರಸಿಡೆಂಟ್ ಇಲೆವನ್ ತಂಡವನ್ನು ಪ್ರಕಟಿಸಲಾಗಿದೆ. ಮೊದಲ ಚತುರ್ದಿನ ಪಂದ್ಯ ಫೆ. 3ರಿಂದ ವಯನಾಡ್‌ನಲ್ಲಿ ನಡೆಯಲಿದೆ.
ತಂಡಗಳ ಆಯ್ಕೆಯ ವೇಳೆ ರಣಜಿ ಟ್ರೋಫಿ ಸೆಮಿಫೈನಲ್ ಪ್ರವೇಶಿಸಿರುವ 4 ತಂಡಗಳ ಯಾವುದೇ ಆಟಗಾರರನ್ನು ಭಾರತ “ಎ’ ತಂಡಕ್ಕೆ ಆಯ್ಕೆ ಮಾಡಿಲ್ಲ.
ಭಾರತ “ಎ’ ತಂಡ
ಮೊದಲ 3 ಏಕದಿನ ಪಂದ್ಯಗಳಿಗೆ: ಅಜಿಂಕ್ಯ ರಹಾನೆ (ನಾಯಕ), ಅನ್ಮೋಲ್‌ಪ್ರೀತ್ ಸಿಂಗ್, ರಿತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಅಂಕಿತ್ ಬವೆ°, ಇಶಾನ್ ಕಿಶನ್ (ಕೀಪರ್), ಕೃಣಾಲ್ ಪಾಂಡ್ಯ, ಅಕ್ಷರ್ ಪಟೇಲ್, ಮಯಾಂಕ್ ಮಾರ್ಕಂಡೆ, ಜಯಂತ್ ಯಾದವ್, ಸಿದ್ಧಾರ್ಥ್ ಕೌಲ್, ಶಾದೂìಲ್ ಠಾಕೂರ್, ದೀಪಕ್ ಚಹರ್, ನವದೀಪ್ ಸೈನಿ.
4ನೇ ಹಾಗೂ 5ನೇ ಪಂದ್ಯಗಳಿಗೆ: ಅಂಕಿತ್ ಬವೆ° (ನಾಯಕ), ರಿತುರಾಜ್ ಗಾಯಕ್ವಾಡ್, ಅನ್ಮೋಲ್‌ಪ್ರೀತ್ ಸಿಂಗ್, ರಿಕ್ಕಿ ಭುಯಿ, ಸಿದ್ದೇಶ್ ಲಾಡ್, ಹಿಮ್ಮತ್ ಸಿಂಗ್, ರಿಷಬ್ ಪಂತ್ (ಕೀಪರ್), ದೀಪಕ್ ಹೂಡಾ, ಅಕ್ಷರ್ ಪಟೇಲ್, ರಾಹುಲ್ ಚಹರ್, ಜಯಂತ್ ಯಾದವ್, ನವದೀಪ್ ಸೈನಿ, ಅವೇಶ್ ಖಾನ್, ದೀಪಕ್ ಚಹರ್, ಶಾದೂìಲ್ ಠಾಕೂರ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.