ವೀಕ್ಷಕರಿಗೆ ತೆರೆಯಲಿದೆ ಭಾರತ-ಆಸ್ಟ್ರೇಲಿಯ ಸರಣಿ
Team Udayavani, Nov 11, 2020, 2:16 AM IST
ಅಡಿಲೇಡ್: ಕ್ರಿಕೆಟ್ ಪ್ರೇಮಿಗಳಿಗೆ, ಅದರಲ್ಲೂ ಆಸ್ಟ್ರೇಲಿಯದ ಕ್ರಿಕೆಟ್ ವೀಕ್ಷಕರ ಪಾಲಿಗೆ ಸಿಹಿ ಸುದ್ದಿಯೊಂದು ಬಿತ್ತರಗೊಂಡಿದೆ. ಮುಂಬರುವ ಭಾರತ ಪ್ರವಾಸದ ವೇಳೆ ನಡೆಯುವ ಟೆಸ್ಟ್ ಪಂದ್ಯಗಳಿಗೆ ಸೀಮಿತ ಸಂಖ್ಯೆಯ ವೀಕ್ಷಕರಿಗೆ ಅವಕಾಶ ನೀಡಲು “ಕ್ರಿಕೆಟ್ ಆಸ್ಟ್ರೇಲಿಯ’ ನಿರ್ಧರಿಸಿದೆ. ಆಸ್ಟ್ರೇಲಿಯ ಸರಕಾರ ಹಾಗೂ ರಾಜ್ಯ ಸರಕಾರಗಳ ನಿಯಮಾನುಸಾರ ಈ ನಿರ್ಧಾರಕ್ಕೆ ಬರಲಾಗಿದೆ.
ಭಾರತ-ಆಸ್ಟ್ರೇಲಿಯ ನಡುವಿನ ಮೊದಲ ಟೆಸ್ಟ್ ಅಡಿಲೇಡ್‌ನಲ್ಲಿ ನಡೆಯಲಿದ್ದು, ದಿನಕ್ಕೆ 27 ಸಾವಿರ ವೀಕ್ಷಕರನ್ನು ಸ್ಟೇಡಿಯಂಗೆ ಬಿಡಲಾಗುವುದು. ಇದು ಕ್ರೀಡಾಂಗಣದ ಒಟ್ಟು ಸಾಮರ್ಥ್ಯದ ಅರ್ಧದಷ್ಟಾಗಿರುತ್ತದೆ. ಬಾಕ್ಸಿಂಗ್ ಡೇ ಟೆಸ್ಟ್ ಮೆಲ್ಬರ್ನ್ನಲ್ಲೇ ನಡೆಯುವುದು ಬಹುತೇಕ ಖಾತ್ರಿಯಾಗಿದ್ದು, ವಿಕ್ಟೋರಿಯಾ ಸರಕಾರ ದಿನಕ್ಕೆ 25 ಸಾವಿರ ವೀಕ್ಷಕರ ಪ್ರವೇಶಕ್ಕೆ ಅನುಮತಿ ನೀಡಿದೆ.
ಸಿಡ್ನಿಯಲ್ಲಿ ಸಾಗುವ ನ್ಯೂ ಇಯರ್ ಟೆಸ್ಟ್ ಪಂದ್ಯದ ವೇಳೆಯೂ ಅರ್ಧದಷ್ಟು ಪ್ರೇಕ್ಷಕರು ಪಂದ್ಯ ವೀಕ್ಷಿಸಬಹುದಾಗಿದೆ. ಆಗ ದಿನಂಪ್ರತಿ 23 ಸಾವಿರ ಮಂದಿ ಸ್ಟೇಡಿಯಂನಲ್ಲಿ ಉಪಸ್ಥಿತರಿರುತ್ತಾರೆ.
ಬ್ರಿಸ್ಬೇನ್‌ನಲ್ಲಿ ನಡೆಯುವ ಅಂತಿಮ ಟೆಸ್ಟ್ ಪಂದ್ಯದ ವೇಳೆ ದಿನಕ್ಕೆ 30 ಸಾವಿರ ಅಥವಾ “ಗಾಬಾ ಸ್ಟೇಡಿಯಂ’ ಸಾಮರ್ಥ್ಯದ ಶೇ. 75ರಷ್ಟು ವೀಕ್ಷಕರನ್ನು ಒಳಬಿಡಲಾಗುವುದು.
ನ. 20ರಿಂದ ಟಿಕೆಟ್ ಮಾರಾಟ
ಮೊದಲು ನ. 19ರಿಂದ ಆಸ್ಟ್ರೇಲಿಯದ ಕ್ರಿಕೆಟ್ ಕುಟುಂಬದವರಿಗೆ ಟಿಕೆಟ್ ವಿತರಿಸಲಾಗುವುದು. 24 ಗಂಟೆಗಳ ಬಳಿಕ ಸಾರ್ವಜನಿಕರಿಗೆ ಟಿಕೆಟ್ ಕೌಂಟರ್ ತೆರೆಯಲಿದೆ. ಟಿಕೆಟ್ ದರದಲ್ಲಿ ಯಾವುದೇ ಏರಿಕೆ ಇಲ್ಲ. ದೊಡ್ಡವರಿಗೆ 30 ಡಾಲರ್, ಮಕ್ಕಳಿಗೆ 10 ಡಾಲರ್ ನಿಗದಿಗೊಳಿಸಲಾಗಿದೆ ಎಂದು “ಕ್ರಿಕೆಟ್ ಆಸ್ಟ್ರೇಲಿಯ’ ಪ್ರಕಟನೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.