ಭಾರತ-ಆಸ್ಟ್ರೇಲಿಯ ಕ್ರಿಕೆಟ್ ಸರಣಿ ವೇಳಾಪಟ್ಟಿ ಅಂತಿಮ
Team Udayavani, May 27, 2020, 11:24 PM IST
ಸಾಂದರ್ಭಿಕ ಚಿತ್ರ
ಮೆಲ್ಬರ್ನ್: ವರ್ಷಾಂತ್ಯದ ಭಾರತ-ಆಸ್ಟ್ರೇಲಿಯ ನಡುವಿನ ಕ್ರಿಕೆಟ್ ಸರಣಿಯ ವೇಳಾಪಟ್ಟಿಯೊಂದನ್ನು ಸ್ಥಳೀಯ ಮಾಧ್ಯಮವೊಂದು ಪ್ರಕಟಿಸಿದೆ. ಅದರಂತೆ ಡಿ. 3ರಿಂದ ಬ್ರಿಸ್ಬೇನ್‌ನಲ್ಲಿ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ. “ಕ್ರಿಕೆಟ್ ಆಸ್ಟ್ರೇಲಿಯ’ದ ಸಿಎಒ ಕೆವಿನ್ ರಾಬರ್ಟ್ಸ್ ಇದನ್ನು ಶುಕ್ರವಾರ ಅಧಿಕೃತವಾಗಿ ಪ್ರಕಟಿಸಲಿದ್ದಾರೆ .
ಈ ಸರಣಿಯಲ್ಲಿ 4 ಟೆಸ್ಟ್ ಪಂದ್ಯಗಳನ್ನು ಆಡಲಾಗುವುದು. ದ್ವಿತೀಯ ಟೆಸ್ಟ್ ಡಿ. 11ರಿಂದ ಅಡಿಲೇಡ್‌ನಲ್ಲಿ ನಡೆಯಲಿದೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಪ್ರಕಾರ ಇದು ಹಗಲು-ರಾತ್ರಿ ಪಂದ್ಯವಾಗುವ ಸಾಧ್ಯತೆ ಇದೆ. ಸಂಪ್ರದಾಯದಂತೆ ಮೆಲ್ಬರ್ನ್ನಲ್ಲಿ ಡಿ. 26ರಿಂದ ಬಾಕ್ಸಿಂಗ್ ಡೇ ಟೆಸ್ಟ್ ಆರಂಭವಾದರೆ, ನ್ಯೂ ಇಯರ್ ಟೆಸ್ಟ್ ಪಂದ್ಯ ಜ. 3ರಿಂದ ಸಿಡ್ನಿಯಲ್ಲಿ ಶುರುವಾಗಲಿದೆ.
ಆಸ್ಟ್ರೇಲಿಯಕ್ಕೆ ತೆರಳಿದ ಬಳಿಕ ಭಾರತದ ಸದಸ್ಯರಿಗೆ ಯಾವುದೇ ಕ್ವಾರಂಟೈನ್ ಇಲ್ಲ ಎಂಬುದಾಗಿ ಕ್ರಿಕೆಟ್ ಆಸ್ಟ್ರೇಲಿಯ ಸ್ಪಷ್ಟಪಡಿಸಿದೆ. ಹಾಗೆಯೇ “ಜೈವಿಕ ಸುರಕ್ಷತಾ ಸ್ಟೇಡಿಯಂ’ಗಳ ಪ್ರಸ್ತಾವವನ್ನೂ ಮಾಡಲಾಗಿಲ್ಲ. ಎಷ್ಟು ಮಂದಿ ವೀಕ್ಷಕರಿಗೆ ಅವಕಾಶ ನೀಡಬೇಕೆಂಬುದನ್ನು ಇನ್ನಷ್ಟೇ ನಿರ್ಧರಿಸಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
IPL Mega Auction: ಬಟ್ಲರ್ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.