ದೇಶದ 70ನೇ ಸ್ವಾತಂತ್ರ್ಯ ಸಂಭ್ರಮ ಶ್ರೀಲಂಕಾದಲ್ಲಿ ತ್ರಿಕೋನ ಸರಣಿ
Team Udayavani, Nov 19, 2017, 6:25 AM IST
ಕೊಲಂಬೊ: ದೇಶದ 70ನೇ ಸ್ವಾತಂತ್ರ್ಯ ಸಂಭ್ರಮದ ಅಂಗವಾಗಿ ಮುಂದಿನ ವರ್ಷದ ಮಾರ್ಚ್ ತಿಂಗಳಲ್ಲಿ ಶ್ರೀಲಂಕಾ ತ್ರಿಕೋನ ಕ್ರಿಕೆಟ್ ಸರಣಿಯೊಂದನ್ನು ಆಯೋಜಿಸಲು ತೀರ್ಮಾನಿಸಿದೆ. ಆತಿಥೇಯ ಲಂಕಾದ ಜತೆ ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಪಾಲ್ಗೊಳ್ಳುತ್ತಿರುವುದಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ಪ್ರಕಟನೆ ತಿಳಿಸಿದೆ.
ಮಾ. 8ರಿಂದ 20ರ ತನಕ ನಡೆಯಲಿರುವ ಈ ಪಂದ್ಯಾವಳಿಯಲ್ಲಿ ಒಟ್ಟು 7 ಪಂದ್ಯಗಳನ್ನು ಆಡಲಾಗುವುದು. ಪ್ರತಿಯೊಂದು ತಂಡ ಉಳಿದೆರಡು ತಂಡಗಳ ವಿರುದ್ಧ 2 ಪಂದ್ಯಗಳನ್ನಾಡಿದ ಬಳಿಕ ಫೈನಲ್ ನಡೆಯಲಿದೆ.
ಇದಕ್ಕೆ “ನಿದಹಾಸ್ ಟ್ರೋಫಿ’ ಎಂದು ಹೆಸರಿಡಲಾಗಿದೆ. 1988ರಲ್ಲಿ ಶ್ರೀಲಂಕಾ ಸ್ವಾತಂತ್ರ್ಯ ಸಂಭ್ರಮದ 50ನೇ ವರ್ಷಾಚರಣೆಯ ವೇಳೆಯೂ “ನಿದಹಾಸ್ ಟ್ರೋಫಿ’ ತ್ರಿಕೋನ ಸರಣಿಯೊಂದನ್ನು ನಡೆಸಲಾಗಿತ್ತು. ಅಂದು ಶ್ರೀಲಂಕಾ ಜತೆ ಪಾಲ್ಗೊಂಡ ಉಳಿದೆರಡು ತಂಡಗಳೆಂದರೆ ಭಾರತ ಮತ್ತು ನ್ಯೂಜಿಲ್ಯಾಂಡ್. ಇದರಲ್ಲಿ ಭಾರತ ಚಾಂಪಿಯನ್ ಆಗಿತ್ತು.
“ಮುಂದಿನ ವರ್ಷ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 70 ವರ್ಷವಾಗಲಿದೆ. ಇದೊಂದು ಸುದೀರ್ಘ ಪಯಣ, ಸಂಭ್ರಮದ ಗಳಿಗೆ. ನಮ್ಮ ನೆರೆಯ ರಾಷ್ಟ್ರಗಳೂ ಹೆಚ್ಚು-ಕಡಿಮೆ ಸ್ವಾತಂತ್ರ್ಯ ಪಡೆದು ಇಷ್ಟೇ ವರ್ಷವಾಗುತ್ತದೆ. ನಮ್ಮ ಖುಷಿಯಲ್ಲಿ ಇವರೂ ಭಾಗಿಯಾಗಲಿ ಎಂದುದು ದೇಶವಾಸಿಗಳ ಆಶಯ’ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ ಅಧ್ಯಕ್ಷ ತಿಲಂಗ ಸುಮತಿಪಾಲ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ
ಕೊಹ್ಲಿ-ರೋಹಿತ್ ಬಳಿಕ ಜಡೇಜಾ ಸ್ಥಾನಕ್ಕೂ ಕುತ್ತು: ಕಠಿಣ ನಿರ್ಧಾರ ಕೈಗೊಂಡ ಬಿಸಿಸಿಐ
Divorce: ಚಾಹಲ್ ಬಳಿಕ ಇದೀಗ ಮನೀಶ್ ಪಾಂಡೆ ವಿಚ್ಛೇದನ? ಏನಿದು ವರದಿ
BPL;ಅಂತಿಮ ಓವರಿನಲ್ಲಿ 30 ರನ್ ಸಿಡಿಸಿದ ನುರುಲ್
MUST WATCH
ಹೊಸ ಸೇರ್ಪಡೆ
Shivamogga; ಕಾರು ಹಳ್ಳಕ್ಕೆ ಉರುಳಿ ಮೂವರಿಗೆ ಗಾಯ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.