ಹಲವು ವಿಶೇಷತೆಗಳ ಮೊಹಾಲಿ ಟೆಸ್ಟ್: ಹೀಗಿರಬಹುದು ಟೀಂ ಇಂಡಿಯಾ ಆಡುವ ಬಳಗ
Team Udayavani, Mar 3, 2022, 12:39 PM IST
ಮೊಹಾಲಿ: ಹಲವು ವಿಶೇಷತೆಗಳ ಲಂಕಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯ ಶುಕ್ರವಾರ ಆರಂಭವಾಗಲಿದೆ. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಶನ್ ಮೈದಾನದಲ್ಲಿ ಟೆಸ್ಟ್ ಪಂದ್ಯ ನಡೆಯಲಿದೆ.
ಮಾಜಿ ನಾಯಕ ವಿರಾಟ್ ಕೊಹ್ಲಿಯ ನೂರನೇ ಟೆಸ್ಟ್ ಪಂದ್ಯ ಇದಾಗಿರಲಿದೆ. ಮೊಹಾಲಿ ಟೆಸ್ಟ್ ಮೂಲಕ ನೂರು ಟೆಸ್ಟ್ ಪಂದ್ಯವಾಡಿದ ಭಾರತದ 12ನೇ ಆಟಗಾರ ಎಂಬ ಖ್ಯಾತಿಗೆ ವಿರಾಟ್ ಪಾತ್ರರಾಗಲಿದ್ದಾರೆ. ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್, ಸುನಿಲ್ ಗವಾಸ್ಕರ್, ವೀರೇಂದ್ರ ಸೆಹ್ವಾಗ್, ವಿವಿಎಸ್ ಲಕ್ಷ್ಮಣ್, ಅನಿಲ್ ಕುಂಬ್ಳೆ, ಕಪಿಲ್ ದೇವ್, ಸೌರವ್ ಗಂಗೂಲಿ, ದಿಲೀಪ್ ವೆಂಗ್‌ಸರ್ಕರ್, ಹರ್ಭಜನ್ ಸಿಂಗ್ ಮತ್ತು ಇಶಾಂತ್ ಶರ್ಮಾ ಇದುವರೆಗೆ ಭಾರತದ ಪರ ನೂರು ಟೆಸ್ಟ್ ಪಂದ್ಯವಾಡಿದ್ದಾರೆ.
ಇದನ್ನೂ ಓದಿ:ಎರಡು ಸ್ಥಾನಕ್ಕೆ ಮೂವರ ಸ್ಪರ್ಧೆ: ಟೆಸ್ಟ್ ತಂಡದಲ್ಲಿ ಪೂಜಾರ- ರಹಾನೆ ಸ್ಥಾನ ತುಂಬುವವರು ಯಾರು?
ಅಲ್ಲದೆ ರೋಹಿತ್ ಶರ್ಮಾ ಅವರು ಮೊದಲ ಬಾರಿಗೆ ಟೆಸ್ಟ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಯ ಬಳಿಕ ವಿರಾಟ್ ಕೊಹ್ಲಿ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ರೋಹಿತ್ ಶರ್ಮಾ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಲಾಗಿತ್ತು.
ಸಂಭಾವ್ಯ ತಂಡ
ಮೊಹಾಲಿ ಪಂದ್ಯದಲ್ಲಿ ಆರಂಭಿಕರಾಗಿ ನಾಯಕ ರೋಹಿತ್ ಮತ್ತು ಕನ್ನಡಿಗ ಮಯಾಂಕ್ ಅಗರ್ವಾಲ್ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಮೂರನೇ ಕ್ರಮಾಂಕದಲ್ಲಿ ಶುಭ್ಮನ್ ಗಿಲ್ ಅಥವಾ ಹನುಮ ವಿಹಾರಿ ಆಡುವ ಸಾಧ್ಯತೆಯಿದೆ. ನಾಲ್ಕನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಆಡಿದರೆ, ಐದನೇ ಕ್ರಮಾಂಕಕ್ಕೆ ಶ್ರೇಯಸ್ ಅಯ್ಯರ್ ಆಯ್ಕೆ ಬಹುತೇಕ ಖಚಿತ.
ಆರನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ರಿಷಭ್ ಪಂತ್, ಆಲ್ ರೌಂಡರ್ ಕೋಟಾದಲ್ಲಿ ಆರ್.ಅಶ್ವಿನ್ ಮತ್ತು ರವೀಂದ್ರ ಜಡೇಜಾ ಆಡಲಿದ್ದಾರೆ. ವೇಗದ ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಆಡುವುದು ಬಹುತೇಕ ಖಚಿತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.