![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Dec 4, 2021, 3:39 PM IST
ಮುಂಬೈ: ಇಲ್ಲಿನ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಸರಣಿಯ ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಬೌಲರ್ ಗಳು ಭಾರಿ ಮೇಲುಗೈ ಸಾಧಿಸಿದ್ದಾರೆ. ಮೊದಲು ನ್ಯೂಜಿಲ್ಯಾಂಡ್ ಬೌಲರ್ ಅಜಾಜ್ ಪಟೇಲ್ ಹತ್ತು ವಿಕೆಟ್ ಪಡೆದು ದಾಖಲೆ ಮಾಡಿದರೆ, ನಂತರ ಭಾರತೀಯ ಬೌಲರ್ ಗಳ ದಾಳಿಗೆ ಬೆದರಿದ ಕಿವೀಸ್ ಕೇವಲ 62 ರನ್ ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿದೆ.
ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿದ ಕಿವೀಸ್ ಗೆ ಮೊದಲು ಸಿರಾಜ್ ಕಾಡಿದರು. ತಂಡದ ಮೊತ್ತ 17 ರನ್ ಆಗುವಷ್ಟರಲ್ಲಿ ಸಿರಾಜ್ ಮೂರು ವಿಕೆಟ್ ಕಿತ್ತಿದ್ದರು. ಬಳಿಕ ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಜಯಂತ್ ಯಾದವ್ ಸೇರಿ ಉಳಿದ ಕೆಲಸ ಮುಗಿಸಿದರು.
ಇದನ್ನೂ ಓದಿ:ಜಿಮ್ ಲೇಕರ್, ಕುಂಬ್ಳೆ ದಾಖಲೆ ಸರಿಗಟ್ಟಿದ ಮುಂಬೈ ಮೂಲದ ಅಜಾಜ್ ಪಟೇಲ್: ಕುಂಬ್ಳೆ ಪ್ರಶಂಸೆ
17 ರನ್ ಗಳಿಸಿದ ಕೈಲ್ ಜೇಮಿಸನ್ ರದ್ದೇ ಕಿವೀಸ್ ಪರ ಹೆಚ್ಚಿನ ಗಳಿಕೆ. ಉಳಿದಂತೆ ಟಾಮ್ ಲ್ಯಾಥಂ 10 ರನ್ ಗಳಿಸಿದರು.
ಭಾರತದ ಪರ ರವಿಚಂದ್ರನ್ ಅಶ್ವಿನ್ ನಾಲ್ಕು ವಿಕೆಟ್, ಮೊಹಮ್ಮದ್ ಸಿರಾಜ್ ಮೂರು ವಿಕೆಟ್ ಕಿತ್ತರೆ, ಅಕ್ಷರ್ ಪಟೇಲ್ ಎರಡು ವಿಕೆಟ್, ಜಯಂತ್ ಯಾದವ್ ಒಂದು ವಿಕೆಟ್ ಕಿತ್ತರು. ಭಾರತ ತಂಡ 263 ರನ್ ಗಳ ಬೃಹತ್ ಮುನ್ನಡೆ ಹೊಂದಿದೆ.
ಭಾರತ ತಂಡ ಮೊದಲ ಇನ್ನಿಂಗ್ಸ್ ನಲ್ಲಿ 325 ರನ್ ಗಳಿಸಿದೆ. ಮಯಾಂಕ್ ಅಗರ್ವಾಲ್ 150 ಮತ್ತು ಅಕ್ಷರ್ ಪಟೇಲ್ 52 ರನ್ ಗಳಿಸಿ ಮಿಂಚಿದರು.
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್ ಅಭಿಮಾನಿಗಳು ಕರೆ
You seem to have an Ad Blocker on.
To continue reading, please turn it off or whitelist Udayavani.