![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Dec 26, 2021, 1:05 PM IST
ಸೆಂಚೂರಿಯನ್: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಇಂದಿನಿಂದ ಆರಂಭವಾಗುತ್ತಿದೆ. ಸೆಂಚೂರಿಯನ್ ನ ಸೂಪರ್ ಸ್ಪೋರ್ಟ್ ಪಾರ್ಕ್ ನಲ್ಲಿ ಆರಂಭವಾಗಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ನಾಯಕ ವಿರಾಟ್ ಕೊಹ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.
ದಕ್ಷಿಣ ಆಫ್ರಿಕಾ ನೆಲದಲ್ಲಿ ಇದುವರೆಗೆ ಟೆಸ್ಟ್ ಸರಣಿ ಗೆಲ್ಲದ ಭಾರತ ತಂಡ ಈ ಬಾರಿ ಐತಿಹಾಸಿಕ ಸಾಧನೆ ಮಾಡಲು ಸಜ್ಜಾಗಿದೆ. 2010ರಲ್ಲಿ ಧೋನಿ ಪಡೆ ಸರಣಿಯನ್ನು 1-1ರಿಂದ ಡ್ರಾಗೊಳಿಸಿದ್ದೇ ನಮ್ಮವರ ಅತ್ಯುತ್ತಮ ಸಾಧನೆ. ಕಳೆದ ಸಲ ಕೊಹ್ಲಿ ಪಡೆ 1-0 ಮುನ್ನಡೆ ಸಾಧಿಸಿತಾದರೂ ಉಳಿದೆರಡು ಟೆಸ್ಟ್‌ಗಳನ್ನು ಸೋತು ಸರಣಿಯನ್ನು ಒಪ್ಪಿಸಿ ಬಂದಿತ್ತು. ಇದಕ್ಕೂ ಮಿಗಿಲಾದ ಸಾಧನೆಗೈಯಬೇಕಾದ ಸವಾಲು ಈ ಬಾರಿ ಭಾರತದ ಮುಂದಿದೆ.
ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಅಜಿಂಕ್ಯ ರಹಾನೆ ಅವರು ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ. ಹೀಗಾಗಿ ಶ್ರೇಯಸ್ ಅಯ್ಯರ್ ಮತ್ತು ಹನುಮ ವಿಹಾರಿ ಬೆಂಚ್ ಕಾಯಬೇಕಾಗಿದೆ.
ಇದನ್ನೂ ಓದಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಹಾವು ಕಡಿತ
ಭಾರತ ಇಂದು ಮೂವರು ವೇಗಿಗಳು ( ಮೊಹಮ್ಮದ್ ಶಮಿ, ಜಸ್‌ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್) ಒಬ್ಬ ಆಲ್ ರೌಂಡರ್ ( ಶಾರ್ದೂಲ್) ಮತ್ತು ಒಬ್ಬ ಸ್ಪಿನ್ನರ್ ( ಅಶ್ವಿನ್) ಕಾಂಬಿನೇಶನ್ ನಲ್ಲಿ ಕಣಕ್ಕಿಳಿದಿದೆ.
ಭಾರತ: ಕೆ.ಎಲ್. ರಾಹುಲ್, ಮಾಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್, ಆರ್. ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್‌ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ದಕ್ಷಿಣ ಆಫ್ರಿಕಾ: ಡೀನ್ ಎಲ್ಗರ್ (ನಾ), ಐಡೆನ್ ಮಾರ್ಕ್ರಾಮ್, ಕೀಗನ್ ಪೀಟರ್ಸನ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಟೆಂಬಾ ಬವುಮಾ, ಕ್ವಿಂಟನ್ ಡಿ ಕಾಕ್ (ವಿ,ಕೀ), ವಿಯಾನ್ ಮುಲ್ಡರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್ಗಿಡಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್ ಅಭಿಮಾನಿಗಳು ಕರೆ
You seem to have an Ad Blocker on.
To continue reading, please turn it off or whitelist Udayavani.