INDvsBAN; ಅʼಸ್ಪಿನ್ʼಗೆ ಬಾಂಗ್ಲಾ ತತ್ತರ: ಚೆನ್ನೈ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲುವು
Team Udayavani, Sep 22, 2024, 11:27 AM IST
ಚೆನ್ನೈ: ಬಾಂಗ್ಲಾದೇಶದ ವಿರುದ್ದದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು (Team India) ಅಧಿಕಾರಯುತ ಗೆಲುವು ಸಾಧಿಸಿದೆ. ಚೆನ್ನೈನಲ್ಲಿ (Chennai) ನಡೆದ ಪಂದ್ಯದ ನಾಲ್ಕನೇ ದಿನದಾಟದಲ್ಲೇ ಬಾಂಗ್ಲಾ ತಂಡವು 280 ರನ್ ಅಂತರದಿಂದ ಶರಣಾಗಿದೆ. ಇದರೊಂದಿಗೆ ಭಾರತವು ಎರಡು ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ.
ಗೆಲುವಿಗೆ 515 ರನ್ ಗುರಿ ಪಡೆದಿದ್ದ ಬಾಂಗ್ಲಾದೇಶ ತಂಡವು 234 ರನ್ ಗಳಿಗೆ ಆಲೌಟಾಯಿತು. ಲೋಕಲ್ ಬಾಯ್ ಅಶ್ವಿನ್ ಅದ್ಭುತ ಬೌಲಿಂಗ್ ನಡೆಸಿ ಆರು ವಿಕೆಟ್ ಪಡೆದರು.
ಮೂರನೇ ದಿನದಾಟದ ಅಂತ್ಯಕ್ಕೆ ನಾಲ್ಕು ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿದ್ದ ಬಾಂಗ್ಲಾಗೆ ಇಂದು ನಾಯಕ ನಜ್ಮುಲ್ ಹುಸೇನ್ ಶಾಂಟೋ ಸ್ವಲ್ಪ ಮಟ್ಟಿಗೆ ಆಧಾರ ನೀಡಿದರು. ಅವರು 82 ರನ್ ಗಳಿಸಿದರು. ಉಳಿದಂತೆ ಶಕೀಬ್ ಅಲ್ ಹಸನ್ 25 ರನ್ ಮಾಡಿದರು.
ಶಕೀಬ್ ಔಟಾದೊಡನೆ ತರಗೆಲೆ ಉರುಳಿದಂತೆ ವಿಕೆಟ್ ಬೀಳಲು ಆರಂಭವಾಯಿತು. ಅಶ್ವಿನ್-ಜಡೇಜಾ ಸ್ಪಿನ್ ಜಾಲಕ್ಕೆ ಸಿಲುಕಿದ ಬ್ಯಾಟರ್ ಗಳು ರನ್ ಗಳಿಸಲು ಪರದಾಡಿದರು.
ರವಿಚಂದ್ರನ್ ಅಶ್ವಿನ್ ಆರು ವಿಕೆಟ್ ಕಿತ್ತರೆ, ರವೀಂದ್ರ ಜಡೇಜಾ ಮೂರು ವಿಕೆಟ್ ಪಡೆದರು. ಒಂದು ವಿಕೆಟ್ ಬುಮ್ರಾ ಪಾಲಾಯಿತು.
ಸಂಕ್ಷಿಪ್ತ ಸ್ಕೋರ್
ಭಾರತ ಮೊದಲ ಇನ್ನಿಂಗ್ಸ್: 376
ಬಾಂಗ್ಲಾ ಮೊದಲ ಇನ್ನಿಂಗ್ಸ್: 149
ಭಾರತ ಎರಡನೇ ಇನ್ನಿಂಗ್ಸ್: 287-4 ಡಿ
ಬಾಂಗ್ಲಾ ಎರಡನೇ ಇನ್ನಿಂಗ್ಸ್: 234
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.