T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್
ಅಚ್ಚರಿಯ ಆಯ್ಕೆಯಿಲ್ಲ; ಅನುಭವಕ್ಕೆ ಮಣೆ
Team Udayavani, Apr 30, 2024, 3:54 PM IST
ಅಹಮದಾಬಾದ್: ಕ್ರಿಕೆಟ್ ಲೋಕ ಕಾತರದಿಂದ ಕಾಯುತ್ತಿದ್ದ ಭಾರತದ ಟಿ20 ವಿಶ್ವಕಪ್ ತಂಡ ಪ್ರಕಟವಾಗಿದೆ. ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು 15 ಜನರ ತಂಡ ಮತ್ತು ನಾಲ್ಕು ಮೀಸಲು ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ರೋಹಿತ್ ಶರ್ಮಾ ಅವರು ತಂಡದ ನಾಯಕರಾಗಿ ಮುಂದುವರಿದ್ದು, ಹಾರ್ದಿಕ್ ಪಾಂಡ್ಯ ಉಪ ನಾಯಕರಾಗಿದ್ದಾರೆ. ಅತ್ಯಂತ ಚರ್ಚಿತ ವಿಕೆಟ್ ಕೀಪರ್ ಸ್ಥಾನದಲ್ಲಿ ರಿಷಭ್ ಪಂತ್ ಮತ್ತು ಸಂಜು ಸ್ಯಾಮ್ಸನ್ ಸ್ಥಾನ ಪಡೆದಿದ್ದಾರೆ.
ಆರಂಭಿಕ ಆಟಗಾರನ ಸ್ಥಾನದಲ್ಲಿ ಯಶಸ್ವಿ ಜೈಸ್ವಾಲ್ ಅವರಿದ್ದರೆ, ಅನಭವಿ ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ಬಲ ತುಂಬಿದ್ದಾರೆ.
ಆಲ್ ರೌಂಡರ್ ಗಳ ಕೋಟಾದದಲ್ಲಿ ಹಾರ್ದಿಕ್ ಜತೆಗೆ, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಇದ್ದಾರೆ. ಪ್ರಮುಖ ಸ್ಪಿನ್ನರ್ ಗಳಾಗಿ ಕುಲದೀಪ್ ಯಾದವ್ ಮತ್ತು ಯುಜಿ ಚಾಹಲ್ ಆಯ್ಕೆಯಾಗಿದ್ದಾರೆ.
ವೇಗಿಗಳ ವಿಭಾಗದಲ್ಲಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಅರ್ಶದೀಪ್ ಸಿಂಗ್ ಸ್ಥಾನ ಪಡೆದಿದ್ದಾರೆ.
ಮೀಸಲು ಆಟಗಾರರಾಗಿ ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹಮದ್ ಮತ್ತು ಆವೇಶ್ ಖಾನ್ ಸ್ಥಾನ ಪಡೆದಿದ್ದಾರೆ.
ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ಕೀಪರ್), ಸಂಜು ಸ್ಯಾಮ್ಸನ್ (ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶ್ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್. ಸಿರಾಜ್.
ಮೀಸಲು – ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹಮದ್ ಮತ್ತು ಅವೇಶ್ ಖಾನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
ಅಖಿಲ ಭಾರತ ಅಂತರ್ ವಿ.ವಿ.ವೇಟ್‌ಲಿಫ್ಟಿಂಗ್:ಮಂಗಳೂರು ವಿವಿ ರನ್ನರ್ ಅಪ್
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.