Women’s T20 World Cup; ಟಿ20 ವಿಶ್ವಕಪ್‌ಗೆ ಹೊರಟು ನಿಂತ ವನಿತೆಯರು


Team Udayavani, Sep 25, 2024, 7:12 AM IST

india team left to women’s t20 world cup 2024

ಮುಂಬಯಿ: “ಇದೊಂದು ಪ್ರಬಲ ತಂಡ. ನಾವೆಲ್ಲ ಜತೆಗೂಡಿ ಕಳೆದ ಅನೇಕ ಸಮಯದಿಂದ ಆಡುತ್ತ ಬಂದಿದ್ದೇವೆ. ಟಿ20 ವಿಶ್ವಕಪ್‌ ಪಂದ್ಯಾವಳಿಗೆ ನಮ್ಮ ತಂಡ ಸರ್ವವಿಧದಲ್ಲೂ ಸಜ್ಜುಗೊಂಡಿದೆ. ಈ ಸಲ ಭಾರತವನ್ನು ಚಾಂಪಿಯನ್‌ ಪಟ್ಟಕ್ಕೇರಿಸುವುದು ನಮ್ಮೆಲ್ಲರ ಗುರಿ ಆಗಿದೆ’ ಎಂಬುದಾಗಿ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಹೇಳಿದ್ದಾರೆ.

ಭಾರತ ತಂಡ ವಿಶ್ವಕಪ್‌ಗೆ ತೆರಳುವ ಮುನ್ನ ಮುಂಬಯಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು. ಕೋಚ್‌ ಅಮೋಲ್‌ ಮುಜುಮ್ದಾರ್‌, ಆಯ್ಕೆ ಸಮಿತಿ ಅಧ್ಯಕ್ಷೆ ನೀತು ಡೇವಿಡ್‌ ಕೂಡ ಉಪಸ್ಥಿತರಿದ್ದರು.

ಭಾರತ ಈವರೆಗೆ ಟಿ20 ವಿಶ್ವಕಪ್‌ ಗೆದ್ದಿಲ್ಲ. 2009ರಲ್ಲಿ ಟಿ20 ವಿಶ್ವಕಪ್‌ ಮೊದ ಲ್ಗೊಂಡ ಬಳಿಕ ಒಮ್ಮೆಯಷ್ಟೇ ಫೈನಲ್‌ ತಲುಪಿದೆ. 2020ರ ಈ ಪ್ರಶಸ್ತಿ ಸಮರದಲ್ಲಿ ಆಸ್ಟ್ರೇಲಿಯಕ್ಕೆ ಶರಣಾಗಿತ್ತು. 2017ರ ಏಕದಿನ ವಿಶ್ವಕಪ್‌ ಫೈನಲ್‌ನಲ್ಲೂ ಭಾರತ ಪರಾಭವಗೊಂಡಿತ್ತು. ಈ ಎರಡೂ ಸಂದರ್ಭಗಳಲ್ಲಿ ಹರ್ಮನ್‌ಪ್ರೀತ್‌ ಅವರೇ ನಾಯಕಿಯಾಗಿದ್ದರು. ಕಳೆದ ಏಷ್ಯಾ ಕಪ್‌ ಫೈನಲ್‌ನಲ್ಲೂ ಭಾರತದ ವನಿತೆಯರಿಗೆ ಅದೃಷ್ಟ ಕೈಕೊಟ್ಟಿತ್ತು.

“ಕಳೆದ ಏಷ್ಯಾ ಕಪ್‌ ಪಂದ್ಯಾವಳಿಯಲ್ಲಿ ನಾವು ಅತ್ಯುತ್ತಮ ಪ್ರದರ್ಶನ ನೀಡಿದ್ದೆವು. ಆದರೆ ಆ ಒಂದು ದಿನದಂದು ಮಾತ್ರ ನಮ್ಮ ಯೋಜನೆಯಂತೆ ಯಾವುದೂ ಸಾಗಲಿಲ್ಲ. ನಾನು 19 ವರ್ಷದಿಂದ ಅದೆಷ್ಟೋ ವಿಶ್ವಕಪ್‌ ಆಡಿದ್ದೇನೆ. ಈಗಲೂ ಅದೇ ಉತ್ಸಾಹದಲ್ಲಿದ್ದೇನೆ’ ಎಂದು 35 ವರ್ಷದ ಹರ್ಮನ್‌ಪ್ರೀತ್‌ ಹೇಳಿದರು.

“ಈ ಪಂದ್ಯಾವಳಿಯಲ್ಲಿ ಆಸ್ಟ್ರೇಲಿಯ ಮತ್ತು ಇಂಗ್ಲೆಂಡ್‌ ತಂಡಗಳು ಭಾರೀ ಸವಾಲಾಗಿ ಪರಿಣಮಿಸುವ ಸಾಧ್ಯತೆ ಇದೆ. ಆದರೆ ನಾವು ಯಾವ ತಂಡವನ್ನೂ ಮಣಿಸಬಲ್ಲೆವು. ಆಸ್ಟ್ರೇಲಿಯಕ್ಕೂ ತಿಳಿದಿದೆ, ತಮ್ಮನ್ನು ಸೋಲಿಸುವುದಿದ್ದರೆ ಭಾರತ ಮಾತ್ರ ಎಂದು…’ ಎಂಬುದಾಗಿ ಹರ್ಮನ್‌ಪ್ರೀತ್‌ ಅಭಿಪ್ರಾಯಪಟ್ಟರು. ಭಾರತ ತನ್ನ ಮೊದಲ ಪಂದ್ಯವನ್ನು ಅ. 4ರಂದು ನ್ಯೂಜಿಲ್ಯಾಂಡ್‌ ವಿರುದ್ಧ ಆಡಲಿದೆ.

ಧ್ಯೇಯಗೀತೆ ಬಿಡುಗಡೆ

ವನಿತಾ ಟಿ20 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯ ಧ್ಯೇಯಗೀತೆ ಬಿಡುಗಡೆಗೊಂಡಿದೆ. “ವಾಟ್‌ ಎವರ್‌ ಇಟ್‌ ಟೇಕ್ಸ್‌…’ ಎನ್ನುವ ಸಾಲಿನೊಂದಿಗೆ ಇದು ಆರಂಭವಾಗುತ್ತದೆ. ಮೈಕಿ ಮೆಕ್‌ಕ್ಲಿಯರಿ ಸಂಗೀತ ಸಂಯೋಜಿಸಿರುವ ಈ ಹಾಡನ್ನು ಆಲ್‌ ಗರ್ಲ್ ಪಾಪ್‌ ಗ್ರೂಪ್‌ನ “ವಿಶ್‌’ ತಂಡದವರು ಹಾಡಿದ್ದಾರೆ. ಪಾಪ್‌ ಶೈಲಿಯ ಈ ಹಾಡು ಈಗಾಗಲೇ ವೈರಲ್‌ ಆಗಿದೆ. ಇದನ್ನು ಡೌನ್‌ಲೋಡ್‌ ಮಾಡುವ ಅವಕಾಶವನ್ನೂ ಕಲ್ಪಿಸಲಾಗಿದೆ.

ಟಾಪ್ ನ್ಯೂಸ್

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ

1-qweeqw

Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!

1-qweewqe

TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ

1-ewewqe

Deve Gowda; ನನಗೀಗ ವಯಸ್ಸು 92.. ಮೊಮ್ಮಗ ಗೆದ್ದ ನಂತರ ಮನೆಯಲ್ಲಿ ಮಲಗುವುದಿಲ್ಲ..

KL Rahul and Athiya Shetty to welcome their first child in 2025

Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್‌ – ಅಥಿಯಾ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KL Rahul and Athiya Shetty to welcome their first child in 2025

Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್‌ – ಅಥಿಯಾ ಶೆಟ್ಟಿ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್‌ ಡೆಲ್ಲಿ

Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್‌ ಡೆಲ್ಲಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ

Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ

POlice

Kasaragod: ರೈಲುಗಾಡಿಗೆ ಕಲ್ಲು ತೂರಾಟ; ಪ್ರಯಾಣಿಕನಿಗೆ ಗಾಯ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

de

Malpe ಸೀವಾಕ್‌ ಸಮುದ್ರತೀರದಲ್ಲಿ ಮೃತದೇಹ ಪತ್ತೆ

sand

Bramavara: ಬೆಣ್ಣೆಕುದ್ರು; ಮರಳು ಅಕ್ರಮ ಸಾಗಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.