4ನೇ ಟಿ20: ದಕ್ಷಿಣ ಆಫ್ರಿಕಾಕ್ಕೆ 51 ರನ್ ಸೋಲು
ಶೆಫಾಲಿ ಮಿಂಚಿನಾಟ; ಭಾರತಕ್ಕೆ ಸರಣಿ
Team Udayavani, Oct 2, 2019, 8:05 PM IST
ಸೂರತ್: ಹದಿನೈದರ ಹರೆಯದಲ್ಲೇ ಟೀಮ್ ಇಂಡಿಯಾಗೆ ಪದಾರ್ಪಣೆ ಮಾಡಿ ಭಾರತದ ಪರ ಆಡಿದ ಅತ್ಯಂತ ಕಿರಿಯ ವಯಸ್ಸಿನ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಶೆಫಾಲಿ ವರ್ಮಾ ತಮ್ಮ ಮೊದಲ ಪಂದ್ಯದಲ್ಲಿ ಶೂನ್ಯಕ್ಕೆ ಔಟ್ ಆಗಿದ್ದರು. ಆದರೆ, ಮಂಗಳವಾರ ರಾತ್ರಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ 4ನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿದ ಶೆಫಾಲಿ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ 17 ಓವರ್‌ಗಳಲ್ಲಿ 4 ವಿಕೆಟಿಗೆ 140 ರನ್ ಪೇರಿಸಿ ಸವಾಲಿನ ಮೊತ್ತ ದಾಖಲಿಸಿತು. ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಶೆಫಾಲಿ 33 ಎಸೆತಗಳಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್ ಒಳಗೊಂಡ 46 ರನ್ ಗಳಿಸಿ ಅರ್ಧಶತಕದಿಂದ ವಂಚಿತರಾದರು.
ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ ಮಹಿಳಾ ತಂಡ 17 ಓವರ್‌ಗಳಲ್ಲಿ 7 ವಿಕೆಟಿಗೆ 89 ರನ್‌ಗಳಿಸಲಷ್ಟೆ ಶಕ್ತವಾಗಿ 51 ರನ್‌ಗಳ ಹೀನಾಯ ಸೋಲುಂಡಿತ್ತು. ಭಾರತದ ಪರ ಅನುಭವಿ ಲೆಗ್ ಸ್ಪಿನ್ನರ್ ಪೂನಮ್ ಯಾದವ್ 13 ರನ್ನಿಗೆ 3 ವಿಕೆಟ್ ಪಡೆದು ಯಶಸ್ವಿ ಬೌಲರ್ ಎನಿಸಿದರು. ರಾಧಾ ಯಾದವ್ 16 ರನ್ನಿಗೆ 2 ವಿಕೆಟ್ ಕಿತ್ತು ಅವರಿಗೆ ಉತ್ತಮ ಸಾಥ್ ನೀಡಿದರು.
ಈ ಜಯದೊಂದಿಗೆ ದಕ್ಷಿಣ ಆಫ್ರಿಕಾ ವಿರುದ್ಧದ 5 ಪಂದ್ಯಗಳ ಟಿ20 ಕ್ರಿಕೆಟ್ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ವಶಪಡಿಸಿಕೊಂಡಿದೆ. ಸರಣಿಯ 2ನೇ ಮತ್ತು 3ನೇ ಪಂದ್ಯಗಳು ಮಳೆಯಿಂದಾಗಿ ಒಂದು ಎಸೆತ ಕಾಣದೆ ರದ್ದಾಗಿದ್ದವು. ಸರಣಿಯ ಕೊನೆಯ ಪಂದ್ಯ ಶುಕ್ರವಾರ (ಅ. 4) ಸೂರತ್‌ನಲ್ಲಿ ನಡೆಯಲಿದೆ.
ಟಿ20 ಕ್ರಿಕೆಟ್ ಸರಣಿ ಬಳಿಕ ವಡೋದರದಲ್ಲಿ 3 ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿ ನಡೆಯಲಿದೆ.
ಸಂಕ್ಷಿಪ್ತ ಸ್ಕೋರ್
ಭಾರತ : 17 ಓವರ್‌ಗಳಲ್ಲಿ 140/4 (ಶೆಫಾಲಿ ವರ್ಮಾ 46, ಜೆಮಿಮಾ ರೋಡ್ರಿಗಸ್ 33, ನ್ಯಾಡಿನಿ ಡಿ’ಕ್ಲಾರ್ಕ್ 22ಕ್ಕೆ 2).
ದಕ್ಷಿಣ ಆಫ್ರಿಕಾ: 17 ಓವರ್‌ಳಲ್ಲಿ 89/7 (ಎಲ್ ವೊಲ್ವಾರ್ಡ್ 23, ಪೂನಮ್ ಯಾದವ್ 13ಕ್ಕೆ 3) ಪಂದ್ಯ ಶ್ರೇಷ್ಠೆ: ಪೂನಮ್ ಯಾದವ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australia: ಪರ್ತ್‌ಗೆ ಆಗಮಿಸಿದ ರೋಹಿತ್ ಶರ್ಮ
Pro Kabaddi League: ಬೆಂಗಾಲ್ ವಾರಿಯರ್ ಮೇಲೆ ಪುಣೇರಿ ಪಲ್ಟಾನ್ ಸವಾರಿ
RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.