ಭಾರತ-ಲಂಕಾ ಮೊದಲ ಏಕದಿನ: ಟಾಸ್ ಗೆದ್ದ ಲಂಕಾ, ಭಾರತ ತಂಡದಲ್ಲಿ ಇಬ್ಬರು ಪದಾರ್ಪಣೆ
Team Udayavani, Jul 18, 2021, 2:29 PM IST
ಕೊಲಂಬೋ: ಬಹುನಿರೀಕ್ಷಿತ ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯ ಇಂದು ಆರಂಭವಾಗಿದೆ. ಇಲ್ಲಿನ ಆರ್.ಪ್ರೇಮದಾಸ ಸ್ಟೇಡಿಯಂನಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ.
ರಾಷ್ಟ್ರೀಯ ತಂಡದ ನಾಯಕನಾಗಿ ಶಿಖರ್ ಧವನ್ ಮೊದಲ ಬಾರಿಗೆ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ವಿರಾಟ್ ಕೊಹ್ಲಿ ನೇತೃತ್ವದ ಪ್ರಮುಖ ತಂಡ ಇಂಗ್ಲೆಂಡ್ ಪ್ರವಾಸದಲ್ಲಿರುವ ಕಾರಣ ಭಾರತ ಮೀಸಲು ಪಡೆಯನ್ನು ಲಂಕಾಗೆ ಕಳುಹಿಸಿದೆ. ಯುವ ಆಟಗಾರರ ಪಡೆಯನ್ನು ಹೊಂದಿರುವ ಧವನ್ ಗೆ ಟಿ20 ವಿಶ್ವಕಪ್ ಗೆ ಮೊದಲು ನಡೆಯುವ ಕೊನೆಯ ಅಂತಾರಾಷ್ಟ್ರೀಯ ಪ್ರವಾಸವಾದ ಕಾರಣ ಲಂಕಾ ಸರಣಿ ಹೊಸ ಚಾಲೆಂಜ್ ಆಗಿದೆ.
ಇದನ್ನೂ ಓದಿ:ವಿಡಿಯೋ: ಗಾಯಗೊಂಡ ಆಟಗಾರನನ್ನು ಔಟ್ ಮಾಡದೆ ಕ್ರೀಡಾ ಸ್ಪೂರ್ತಿ ಮೆರೆದ ಜೋ ರೂಟ್ ಪಡೆ
ಇಂದಿನ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಮತ್ತು ಇಶಾನ್ ಕಿಶನ್ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಐಪಿಎಲ್ ನಲ್ಲಿ ಸದ್ದು ಮಾಡಿದ್ದ ಇವರು ಅಂತಾರಾಷ್ಟ್ರೀಯ ಟಿ20 ಪಂದ್ಯವಾಡಿದ್ದರು. ಇಂದು ಮೊದಲ ಬಾರಿಗೆ ಏಕದಿನ ಪಂದ್ಯವಾಡುತ್ತಿದ್ದಾರೆ.
ಭಾರತ ತಂಡದಲ್ಲಿ ವಿಕೆಟ್ ಕೀಪಿಂಗ್ ಯಾರು ಮಾಡುತ್ತಾರೆ ಎನ್ನುವ ಕುತೂಹಲಕ್ಕೆ ತೆರೆಬಿದ್ದಿದೆ. ಇಶಾನ್ ಕಿಶನ್ ವಿಕೆಟ್ ಕೀಪಿಂಗ್ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಸಂಜು ಸ್ಯಾಮ್ಸನ್ ಕೂಡಾ ರೇಸ್ ನಲ್ಲಿದ್ದರು.
ತಂಡಗಳು:
ಭಾರತ: ಶಿಖರ್ ಧವನ್ (ನಾ), ಪೃಥ್ವಿ ಶಾ, ಮನೀಶ್ ಪಾಂಡೆ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್(ವಿ.ಕೀ), ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ದೀಪಕ್ ಚಹರ್.
ಶ್ರೀಲಂಕಾ: ಅವಿಷ್ಕಾ ಫರ್ನಾಂಡೊ, ಮಿನೋದ್ ಭನುಕಾ (ವಿ.ಕಿ), , ಧನಂಜಯ ಡಿ ಸಿಲ್ವಾ, ಭಾನುಕಾ ರಾಜಪಕ್ಸೆ, ಚರಿತ ಅಸಲಂಕಾ, ವಾನಿಂದು ಹಸರಂಗ, ದಾಸುನ್ ಶನಕಾ (ನಾ), ಚಮಿಕಾ ಕರುಣರತ್ನ, ಇಸಿರು ಉದಾನ, ದುಷ್ಮಂತ ಚಮೀರ, ಲಕ್ಷನ್ ಸಂದಕನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.