ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ
Team Udayavani, Nov 11, 2017, 7:45 AM IST
ಹೊಸದಿಲ್ಲಿ: ಶ್ರೀಲಂಕಾ ವಿರುದ್ಧ ನಡೆಯಲಿರುವ ಮೊದಲೆರಡು ಟೆಸ್ಟ್ ಪಂದ್ಯಗಳಿಗೆ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರಿಗೆ ವಿಶ್ರಾಂತಿ ನೀಡಲಾಗಿದೆ.
ಆರಂಭದಲ್ಲಿ ಅವರು ತಂಡಕ್ಕೆ ಆಯ್ಕೆಯಾಗಿದ್ದರು. ಆದರೆ “ಭಾರೀ ಕೆಲಸದ ಒತ್ತಡ’ದ ಕಾರಣದಿಂದ ಅವರಿಗೆ ವಿಶ್ರಾಂತಿ ನೀಡಲಾಗಿದೆ ಎಂದು ಬಿಸಿಸಿಐ ತಿಳಿಸಿದೆ. ಪಾಂಡ್ಯ ಅವರ ಬದಲಿಗೆ ಆಯ್ಕೆಗಾರರು ಯಾರನ್ನೂ ಹೆಸರಿಸಿಲ್ಲ,
ತಿರುವನಂತಪುರದಲ್ಲಿ ನಡೆದ ನಿರ್ಣಾಯಕ ಟ್ವೆಂಟಿ20 ಪಂದ್ಯದ ವೇಳೆ ತನ್ನದೇ ಬೌಲಿಂಗ್ ವೇಳೆ ಎದುರಾಳಿ ಬ್ಯಾಟ್ಸ್‌ಮನ್ ಬಲವಾಗಿ ಹೊಡೆದ ಚೆಂಡನ್ನು ತಡೆಯುವ ವೇಳೆ ಪಾಂಡ್ಯ ಅವರ ಕೈಗೆ ಚೆಂಡು ಬಡಿದಿತ್ತು. ಈ ನೋವಿನಿಂದ ಅವರು ಓವರನ್ನು ಪೂರ್ತಿ ಮಾಡಿರಲಿಲ್ಲ.
ಭಾರತೀಯ ತಂಡ ವ್ಯವಸ್ಥಾಪಕರ ಜತೆ ಚರ್ಚಿಸಿದ ಬಳಿಕ ರಾಷ್ಟ್ರೀಯ ಆಯ್ಕೆ ಸಮಿತಿಯು ಶ್ರೀಲಂಕಾ ವಿರುದ್ಧದ ಆರಂಭದ ಎರಡು ಟೆಸ್ಟ್ ಪಂದ್ಯಗಳಿಗೆ ಪಾಂಡ್ಯ ಅವರಿಗೆ ವಿಶ್ರಾಂತಿ ನೀಡಲು ನಿರ್ಧರಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
Uppinangady: ನೇಜಿಕಾರ್ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.