ಮಂದನಾ, ಮಿಥಾಲಿ ಬ್ಯಾಟಿಂಗ್ ಸಾಹಸ: ಸರಣಿ ಗೆದ್ದ ವನಿತೆಯರು


Team Udayavani, Jan 29, 2019, 7:56 AM IST

smruthi.jpg

ಮೌಂಟ್ ಮೌಂಗನುಯಿ: ಭಾರತದ ಮಹಿಳೆಯರ ಕ್ರಿಕೆಟ್ ತಂಡ ಪುರುಷರ ತಂಡದಂತೆ ಕಿವೀಸ್ ನೆಲದಲ್ಲಿ ಸರಣಿ ಗೆದ್ದ ಸಾಹಸ ಮಾಡಿದೆ. ನ್ಯೂಜಿಲ್ಯಾಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಎಂಟು ವಿಕೆಟ್ ಗಳ ಭರ್ಜರಿ ಜಯ ಸಾಧಸಿದೆ. 

ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿದ ಮಿಥಾಲಿ ರಾಜ್ ನೇತೃತ್ವದ ಭಾರತೀಯ ತಂಡ ನ್ಯೂಜಿಲ್ಯಾಂಡ್ ತಂಡವನ್ನು 161 ರನ್ ಗಳಿಗೆ ಆಲ್ ಔಟ್ ಮಾಡಿತು. ಕಿವೀಸ್ ನಾಯಕಿ ಆಮಿ ಸ್ಯಾಟ್ಟರ್ ವೇಟ್ 71 ರನ್ ಗಳಿಸಿ ತಂಡದ ಪರ ಗರಿಷ್ಠ ರನ್ ಗಳಿಸಿದರು. ಬೇರೆ ಯಾವುದೇ ಅಟಗಾರರು ಬೌಲರ್ ಗಳ ಎದುರು ಕ್ರೀಸ್ ಕಚ್ಚಿ ನಿಲ್ಲಲು ಪರದಾಡಿದರು. ಭಾರತದ ಪರ ಅನುಭವಿ ಬೌಲರ್ ಜೂಲನ್ ಗೋಸ್ವಾಮಿ ಮೂರು ವಿಕೆಟ್ ಪಡೆದರೆ, ಏಕ್ತಾ ಬಿಶ್ಟ್, ದೀಪ್ತಿ ಶರ್ಮಾ, ಪೂನಂ ಯಾದವ್ ತಲಾ ಎರಡು ವಿಕೆಟ್ ಪಡೆದರು. 

ಮತ್ತೆ ಮಿಂಚಿದ ಮಂದನಾ, ಸಾಥ್ ನೀಡಿದ ಮಿಥಾಲಿ: ಕಿವೀಸ್ ನಿಡಿದ 162 ರನ್ ಗಳ ಗುರಿ ಬೆನ್ನಟ್ಟಿದ ಭಾರತ ಎರಡನೇ ಓವರ್ ನಲ್ಲಿಯೇ ಆಘಾತ ಅನುಬವಿಸಿತು. ಕಳೆದ ಪಂದ್ಯದಲ್ಲಿ ಅರ್ಧ ಶತಕ ಬಾರಿಸಿದ್ದ ಜೆಮಿಮಾ ರೋಡ್ರಿಗಸ್ ಶೂನ್ಯಕ್ಕೆ ಔಟಾದರು. ಎಂಟು ರನ್ ಗಳಿಸಿದ ದೀಪ್ತಿ ಶರ್ಮಾ ಔಟಾದಾಗ ತಂಡ ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ತಂಡದ ಮೊತ್ತ ಎರಡು ವಿಕೆಟ್ ನಷ್ಟಕ್ಕೆ 15 ರನ್. 


ನಂತರ ಜೊತೆಗೂಡಿದ ಸ್ಮೃತಿ ಮಂದನಾ ಮತ್ತು ನಾಯಕಿ ಮಿಥಾಲಿ ರಾಜ್ ಮುರಿಯದ 151 ರನ್ ಜೊತೆಯಾಟ ನಡೆಸಿ ತಂಡಕ್ಕೆ ಜಯ ಒದಗಿಸಿದರು. ಕಳೆದ ಪಂದ್ಯದಲ್ಲಿ ಶತಕ ಬಾರಿಸಿದ್ದ ಸ್ಮೃತಿ ಮಂದನಾ ಈ ಪಂದ್ಯದಲ್ಲೂ ಅದ್ಭುತ ಆಟವಾಡಿದರು. 83 ಎಸೆತ ಎದುರಿಸಿದ ಮಂದನಾ ಅಜೇಯ 90 ರನ್ ಗಳಿಸಿದರು. ಇವರಿಗೆ ಉತ್ತಮ ಸಾಥ್ ನೀಡಿದ ನಾಯಕಿ ಮಿಥಾಲಿ 63 ರನ್ ಗಳಿಸಿ ಅಜೇಯವಾಗುಳಿದರು.

ಟಾಪ್ ನ್ಯೂಸ್

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

GPS-hori

New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್‌’!

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

Frud

Police Nabs: 930 “ಡಿಜಿಟಲ್‌ ಅರೆಸ್ಟ್‌’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweewqe

Novak Djokovic; ಆಹಾರದಲ್ಲಿ ವಿಷ: ಜೊಕೋ ಆಘಾತಕಾರಿ ಹೇಳಿಕೆ

PCB

Champions Trophy ಸ್ಥಳಾಂತರ ಸುದ್ದಿಯನ್ನು ತಳ್ಳಿಹಾಕಿದ ಪಿಸಿಬಿ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

1-saaai

Malaysia Open Badminton: ಸಾತ್ವಿಕ್‌-ಚಿರಾಗ್‌ ಜೋಡಿ ಸೆಮಿಗೆ

1-man

Gael Monfils;  35ನೇ ಎಟಿಪಿ ಫೈನಲ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

GPS-hori

New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.