ಭಾರತೀಯ ಆ್ಯತ್ಲೆಟಿಕ್ಸ್‌ ನ ಉನ್ನತ ನಿರ್ವಹಣೆ ನಿರ್ದೇಶಕ ವೋಲ್ಕರ್‌ ಹೆರ್ಮಾನ್‌ ರಾಜೀನಾಮೆ

Team Udayavani, Nov 22, 2020, 10:29 PM IST

Volker

ಹೊಸದಿಲ್ಲಿ: ಭಾರತೀಯ ಆ್ಯತ್ಲೆಟಿಕ್ಸ್‌ ಫೆಡರೇಶನ್‌ (ಎಎಫ್ಐ)ನ ಉನ್ನತ ನಿರ್ವಹಣೆ ನಿರ್ದೇಶಕ ವೋಲ್ಕರ್‌ ಹೆರ್ಮಾನ್‌ ಅವರು ಹಠಾತ್‌ ತನ್ನ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರ ಜತೆಗಿನ ಒಪ್ಪಂದವನ್ನು ಕ್ರೀಡಾ ಸಚಿವಾಲಯ 2024ರ ಒಲಿಂಪಿಕ್ಸ್‌ವರೆಗೆ ವಿಸ್ತರಿಸಿತ್ತು. ಆದರೆ ಹುದ್ದೆಯ ಜತೆ ತಾನಾಗಿ ನಿರೀಕ್ಷೆ ಮಾಡಿಕೊಂಡಿದ್ದ ಗುರಿ ತಲುಪಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಹೆರ್ಮಾನ್‌ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಹೆರ್ಮಾನ್‌ ಕೆಲವು ವಾರಗಳ ಹಿಂದೆ ರಾಜೀನಾಮೆ ನೀಡಿರುವುದನ್ನು ಎಎಫ್ಐ ಮೂಲಗಳು ದೃಢಪಡಿಸಿದ್ದು ಯಾವುದೇ ನಿರ್ದಿಷ್ಟ ಕಾರಣ ನೀಡಿಲ್ಲವೆಂದು ತಿಳಿಸಿದೆ. ಜರ್ಮನಿಯ ಹೆರ್ಮಾನ್‌ ಅವರನ್ನು ಜೂನ್‌ 2019ರಂದು ಈ ಹುದ್ದೆಗೆ ನೇಮಕ ಮಾಡಲಾಗಿತ್ತು. ಈಗ ಮುಂದೂಡಲ್ಪಟ್ಟ 2021ರ ಟೋಕಿಯೊ ಒಲಿಂಪಿಕ್ಸ್‌ವರೆಗೆ ಅವರ ಒಪ್ಪಂದದ ಅವಧಿ ಇತ್ತು. ಕಳೆದ ಸೆಪ್ಟಂಬರ್‌ನಲ್ಲಿ ಕ್ರೀಡಾ ಸಚಿವಾಲಯ ಅವರ ಒಪ್ಪಂದವನ್ನು 2024ರ ಒಲಿಂಪಿಕ್ಸ್‌ವರೆಗೆ ವಿಸ್ತರಿಸಿತ್ತು. ಆದರೆ ಈ ಹೊಸ ಒಪ್ಪಂದಕ್ಕೆ ಅವರು ಸಹಿ ಹಾಕಿಲ್ಲವೆಂದು ಎಎಫ್ಐ ಮೂಲಗಳು ತಿಳಿಸಿವೆ.

ನಿರ್ದೇಶಕ ಹುದ್ದೆಯ ಜತೆ ಕೆಲವೊಂದು ನಿರೀಕ್ಷೆಗಳನ್ನು ಸ್ವಯಂ ಆಗಿ ಇಟ್ಟುಕೊಂಡಿದ್ದೆ. ಆದರೆ ಈ ನಿರೀಕ್ಷೆ ಸಾಧಿಸಲು ಕಷ್ಟ ಎಂದೆನಿಸಿ ಮೂರು ವಾರಗಳ ಹಿಂದೆ ಹುದ್ದೆಗೆ ರಾಜೀನಾಮೆ ನೀಡಿದೆ ಎಂದು ಹೆರ್ಮಾನ್‌ ತನ್ನ ಫೇಸ್‌ಬುಕ್‌ ಪುಟದಲ್ಲಿ ಬರೆದುಕೊಂಡಿದ್ದಾರೆ. ಹೆರ್ಮಾನ್‌ ಅವರು ಕಳೆದ ಒಂದೂವರೆ ವರ್ಷಗಳ ಕಾಲ ನಿರ್ದೇಶಕ ಹುದ್ದೆಯಲ್ಲಿ ಆ್ಯತ್ಲೀಟ್‌ಗಳಿಗೆ ಮಾರ್ಗದರ್ಶನ ನೀಡಿದ್ದರು.

ಕ್ರೀಡೆಯ ಉನ್ನತ ನಿರ್ವಹಣೆ
ಯಲ್ಲಿ ಕೆಲಸ ಮಾಡಲು ಉನ್ನತ ಮಟ್ಟದ ನಿರೀಕ್ಷೆಗಳು ಬೇಕಾಗುತ್ತವೆೆ. ಒಂದೇ ಗುರಿ ಯೊಂದಿಗೆ ನಾವೆಲ್ಲ ಕೆಲಸ ಮಾಡಬೇಕಾ ಗುತ್ತದೆ. ಕ್ರೀಡೆಗೆ ಸಂಬಂಧಿಸಿದ ಎಲ್ಲರೂ ಒಂದೇ ಚಿತ್ತದಿಂದ ಕೆಲಸ ಮಾಡಿದರೆ ಯಶಸ್ಸು ಸಾಧಿಸಬಹುದು. ಭಾರತೀಯ ಆ್ಯತ್ಲೀಟ್‌ಗಳಿಗೆ ಭವಿಷ್ಯದಲ್ಲಿ ಒಳ್ಳೆಯ ಭವಿಷ್ಯವಿದೆ ಎಂದವರು ಹೇಳಿದ್ದಾರೆ.

ಹೆರ್ಮಾನ್‌ ಅವರು ಉನ್ನತ ನಿರ್ವಹಣೆ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿದ ಎರಡನೇ ವ್ಯಕ್ತಿಯಾಗಿದ್ದಾರೆ. ಈ ಹಿಂದೆ ರಿಯೋ ಒಲಿಂಪಿಕ್ಸ್‌ ಮೊದಲು 2015ರ ಅಕ್ಟೋಬರ್‌ನಲ್ಲಿ ಅಮೆರಿಕದ ಡೆರಿಕ್‌ ಬೂಸೆ ಅವರು ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿದ್ದರು. ಆದರೆ ಏಳು ತಿಂಗಳು ಹುದ್ದೆಯಲ್ಲಿದ್ದ ಬಳಿಕ ರಾಜೀನಾಮೆ ಸಲ್ಲಿಸಿದ್ದರು.

ಟಾಪ್ ನ್ಯೂಸ್

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ

WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ

Pro Kabaddi: ಒಂದಂಕದಿಂದ ಸೋತ ಬೆಂಗಳೂರು ಬುಲ್ಸ್‌

Pro Kabaddi: ಒಂದಂಕದಿಂದ ಸೋತ ಬೆಂಗಳೂರು ಬುಲ್ಸ್‌

MUDA CASE: ಮುಖ್ಯಮಂತ್ರಿ ಭಾವಮೈದನ ವಿಚಾರಣೆ

MUDA CASE: ಮುಖ್ಯಮಂತ್ರಿ ಭಾವಮೈದನ ವಿಚಾರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ

WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ

WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.