Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ
Team Udayavani, Jan 10, 2025, 4:17 PM IST
ಮುಂಬೈ: ಟೀಂ ಇಂಡಿಯಾ ಪರ ಆಡಿದ್ದ, ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಮಿಂಚಿದ್ದ ವೇಗದ ಬೌಲರ್ ವರುಣ್ ಆರೋನ್ (Varun Aaron) ಅವರು ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಸಾಮಾಜಿಕ ಜಾಲತಾಣ ಬಳಸಿ ವರುಣ್ ಆರೋನ್ ಅವರು ಶುಕ್ರವಾರ (ಜ.10) ವಿದಾಯ ಘೋಷಣೆ ಮಾಡಿದ್ದಾರೆ.
ಅವರು ತಮ್ಮ ವೃತ್ತಿಜೀವನದುದ್ದಕ್ಕೂ ಬೆಂಬಲ ನೀಡಿದ ದೇವರು, ಅವರ ಕುಟುಂಬ, ಸ್ನೇಹಿತರು ಮತ್ತು ತರಬೇತುದಾರರಿಗೆ ಧನ್ಯವಾದ ಹೇಳುವ ಸಂದೇಶವನ್ನು ಒಳಗೊಂಡ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ.
ಕಳೆದ ವರ್ಷ ಜಾರ್ಖಂಡ್ ಮತ್ತು ರಾಜಸ್ಥಾನ ನಡುವಿನ ರಣಜಿ ಟ್ರೋಫಿ ಪಂದ್ಯದ ನಂತರ ಆರೋನ್ ಅವರು ರೆಡ್-ಬಾಲ್ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದರು.
ವರುಣ್ ಆರೋನ್ 2010-11ರ ವಿಜಯ್ ಹಜಾರೆ ಟ್ರೋಫಿ ಫೈನಲ್ ಪಂದ್ಯದಲ್ಲಿ ಗುಜರಾತ್ ವಿರುದ್ಧ 153 ಕಿಮೀ ವೇಗದಲ್ಲಿ ಬೌಲಿಂಗ್ ಮಾಡುವ ಮೂಲಕ ಗಮನ ಸೆಳೆದರು.
ನಂತರ 2011 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ ವರುಣ್ ವೃತ್ತಿಜೀವನದುದ್ದಕ್ಕೂ ಆರು ವಿಭಿನ್ನ ಐಪಿಎಲ್ ತಂಡಗಳ ಭಾಗವಾಗಿದ್ದಾರೆ. ಆರೋನ್ 52 ಐಪಿಎಲ್ ಪಂದ್ಯಗಳಲ್ಲಿ 33.66 ಸರಾಸರಿಯಲ್ಲಿ 44 ವಿಕೆಟ್‌ಗಳನ್ನು ಕಬಳಿಸಿದ್ದಾರೆ.
ಆದರೆ ಪದೇ ಪದೇ ಗಾಯಗಳಿಂದ ಬಳಲುತ್ತಿದ್ದ ಕಾರಣ ವರುಣ್ ಆರೋನ್ ಅವರ ಅಂತಾರಾಷ್ಟ್ರೀಯ ವೃತ್ತಿಜೀವನವು ಕೇವಲ 18 ಪಂದ್ಯಗಳಿಗೆ ಸೀಮಿತವಾಯಿತು. ಅದರಲ್ಲಿ ಅವರು 29 ವಿಕೆಟ್‌ಗಳನ್ನು ಗಳಿಸಿದ್ದಾರೆ. ಅವರು 9 ಏಕದಿನ ಮತ್ತು 9 ಟೆಸ್ಟ್ ಪಂದ್ಯಗಳಲ್ಲಿ ಭಾರತೀಯ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿದ್ದಾರೆ. ಕ್ರಮವಾಗಿ 11 ಮತ್ತು 18 ವಿಕೆಟ್‌ಗಳನ್ನು ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shivamogga; ಕಾರು ಹಳ್ಳಕ್ಕೆ ಉರುಳಿ ಮೂವರಿಗೆ ಗಾಯ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.