ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದ ಭಾರತದ ಆಟಗಾರರು: ಸ್ಮಿತ್ ಶತಕ ಸಂಭ್ರಮ
Team Udayavani, Jan 19, 2020, 5:05 PM IST
ಬೆಂಗಳೂರು: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಏಕದಿನ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿದೆ. ಆದರೆ ನಿರ್ಣಾಯಕ ಪಂದ್ಯವಾಡಲು ಕಣಕ್ಕಿಳಿದ ಟೀಂ ಇಂಡಿಯಾ ಆಟಗಾರರು ಕಪ್ಪು ಪಟ್ಟಿ ಧರಿಸಿ ಆಡುತ್ತಿದ್ದಾರೆ.
ಭಾರತ ಕಂಡ ಅಪರೂಪದ ಆಲ್ ರೌಂಡರ್ ಬಾಪು ನಾಡಕರ್ಣಿ ಅವರು ಶನಿವಾರ ನಿಧನ ಹೊಂದಿದ್ದರು. ಇಳಿವಯಸ್ಸಿನವರಾಗಿದ್ದ ಬಾಪು ನಾಡಕರ್ಣಿಯವರು ವಯೋ ಸಹಜ ಖಾಯಿಲೆಯಿಂದ ನಿನ್ನೆ ಅಸುನೀಗಿದ್ದರು.
ಬಾಪು ನಾಡಕರ್ಣಿಯವರ ಸಂತಾಪ ಸೂಚಿಸುವ ನಿಟ್ಟಿನಲ್ಲಿ ಇಂದಿನ ಪಂದ್ಯದಲ್ಲಿ ಟೀ ಇಂಡಿಯಾ ಆಟಗಾರರು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಆಡಿದರು.
ಸ್ಮಿತ್ ಶತಕ ಸಂಭ್ರಮ
ಕಳೆದ ಪಂದ್ಯದಲ್ಲಿ ಭಾರತೀಯ ಬೌಲರ್ ಗಳನ್ನು ಕಾಡಿದ್ದ ಸ್ಮಿತ್ ಇಂದೂ ತಮ್ಮ ಬ್ಯಾಟಿಂಗ್ ಪರಾಕ್ರಮ ಮುಂದುವರಿಸಿದರು. ಮಾರ್ನಸ್ ಲಬುಶೇನ್ ಜೊತೆ ಶತಕದ ಜೊತೆಯಾಟ ಆಡಿದರು. ಭರ್ಜರಿ ಬ್ಯಾಟಿಂಗ್ ನಡೆಸಿದ ಸ್ಟೀವ್ ಏಕದಿನ ಬಾಳ್ವೆಯ ಒಂಬತ್ತನೇ ಶತಕ ಬಾರಿಸಿದರು.
132 ಎಸೆತ ಎದುರಿಸಿದ ಸ್ಮಿತ್ 135 ರನ್ ಗಳಿಸಿದರು. 2017ರ ಜನವರಿಯ ನಂತರ ಸ್ಮಿತ್ ಬಾರಿಸಿದ ಮೊದಲ ಏಕದಿನ ಶತಕವಿದು.
ಆಸ್ಟ್ರೇಲಿಯಾ ನಿಗದಿತ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 286 ರನ್ ಗಳಿಸಿತು. ಭಾರತದ ಪರ ಮೊಹಮ್ಮದ್ ಶಮಿ 4 ವಿಕೆಟ್ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ಹೊಸ ಸೇರ್ಪಡೆ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.