ಭಾರತದ ವನಿತಾ ಕಂಪೌಂಡ್‌ ಆರ್ಚರಿ ತಂಡವೀಗ ನಂ.1


Team Udayavani, Jul 28, 2018, 6:00 AM IST

21.jpg

ಕೋಲ್ಕತಾ: ಜಕಾರ್ತಾ ಏಶ್ಯನ್‌ ಗೇಮ್ಸ್‌ಗೆ ಅಣಿಯಾಗಿರುವ ಭಾರತದ ವನಿತಾ ಕಂಪೌಂಡ್‌ ಬಿಲ್ಗಾರಿಕಾ ತಂಡವೀಗ ಹೊಸ ಇತಿಹಾಸ ನಿರ್ಮಿಸಿದೆ. ಇದೇ ಮೊದಲ ಬಾರಿಗೆ ವಿಶ್ವದ ನಂಬರ್‌ ವನ್‌ ತಂಡವೆಂಬ ಹಿರಿಮೆಗೆ ಪಾತ್ರವಾಗಿದೆ. 5ನೇ ಸ್ಥಾನದಿಂದ ಅಗ್ರಸ್ಥಾನಕ್ಕೆ ಗುರುವಾರ ರಾತ್ರಿ ಬಿಡುಗಡೆಗೊಂಡ ನೂತನ ಆರ್ಚರಿ ರ್‍ಯಾಂಕಿಂಗ್‌ನಲ್ಲಿ ಭಾರತದ ವನಿತಾ ಕಂಪೌಂಡ್‌ ಆರ್ಚರಿ ತಂಡ ಒಟ್ಟು 342.6 ಅಂಕಗಳೊಂದಿಗೆ 5ನೇ ಸ್ಥಾನದಿಂದ ಅಗ್ರಸ್ಥಾನಕ್ಕೆ ನೆಗೆದಿದೆ. ದ್ವಿತೀಯ ಸ್ಥಾನದಲ್ಲಿರುವ ಚೈನೀಸ್‌ ತೈಪೆಗಿಂತ 6 ಅಂಕಗಳ ಮುನ್ನಡೆ ಕಾಯ್ದುಕೊಂಡಿದೆ.

ವಿ. ಜ್ಯೋತಿ ಸುರೇಖಾ, ತಿೃಷಾ ದೇಬ್‌, ಪಿ. ಲಿಲಿ ಚಾನು, ಮುಸ್ಕಾನ್‌ ಕಿರಾರ್‌, ದಿವ್ಯಾ ದಯಾಳ್‌ ಹಾಗೂ ಮಧುಮಿತಾ ಅವರನ್ನೊಳಗೊಂಡ ಭಾರತ ಕಳೆದ 4 ವಿಶ್ವಕಪ್‌ ಹಂತದ ಸ್ಪರ್ಧೆಗಳಲ್ಲಿ 2 ಪದಕ ಗೆದ್ದ ಸಾಧನೆ ಮಾಡಿತ್ತು. ಅಂಟಾಲ್ಯಾ ಮತ್ತು ಬರ್ಲಿನ್‌ ಸ್ಪರ್ಧೆಗಳೆರಡರಲ್ಲೂ ಬೆಳ್ಳಿ ಪದಕ ಜಯಿಸಿತ್ತು. ಜ್ಯೋತಿ ಸುರೇಖಾ ಮತ್ತು ಮುಸ್ಕಾನ್‌ ಕಿರಾರ್‌ ಈ ಎರಡೂ ಪದಕ ವಿಜೇತ ಭಾರತೀಯ ತಂಡದ ಸದಸ್ಯರಾಗಿದ್ದರು. ಅಂಟಾಲ್ಯಾದಲ್ಲಿ ದಿವ್ಯಾ ದಯಾಳ್‌ ಹಾಗೂ ಬರ್ಲಿನ್‌ನಲ್ಲಿ ತಿೃಷಾ ದೇಬ್‌ ಭಾರತ ತಂಡದ ತೃತೀಯ ಸದಸ್ಯರಾಗಿದ್ದರು. ಅಮೆರಿಕದ ಸಾಲ್ಟ್ಲೇಕ್‌ ಸಿಟಿಯಲ್ಲಿ ನಡೆದ 3ನೇ ಹಂತದ ಸ್ಪರ್ಧೆಗೆ ಆರ್ಚರಿ ಅಸೋಸಿಯೇಶನ್‌ ಆಫ್ ಇಂಡಿಯಾ (ಎಎಐ) ಅರ್ಜಿ ಸಲ್ಲಿಸಿಲ್ಲ. 

ಕೋಚ್‌ ತೇಜ ಸಂತಸ
“ಕೊನೆಗೂ ನಾವಿದನ್ನು ಸಾಧಿಸಿದೆವು. ದೇವರ ದಯೆಯಿಂದ ನಮ್ಮ ತಂಡವೀಗ ವಿಶ್ವದ ಅಗ್ರಸ್ಥಾನಕ್ಕೆ ನೆಗೆದಿದೆ. ಎಲ್ಲ ಸಾಧಕಿಯರಿಗೂ ಅಭಿನಂದನೆಗಳು. ಬೇಸರವೆಂದರೆ, ಕಂಪೌಂಡ್‌ ಆರ್ಚರಿ ಸ್ಪರ್ಧೆಯನ್ನು ಒಲಿಂಪಿಕ್ಸ್‌ನಲ್ಲಿ ಅಳವಡಿಸದಿರುವುದು…’ ಎಂಬುದಾಗಿ ಭಾರತ ತಂಡದ ಕೋಚ್‌ ಜೀವನ್‌ಜೋತ್‌ ಸಿಂಗ್‌ ತೇಜ ಪ್ರತಿಕ್ರಿಯಿಸಿದ್ದಾರೆ.

ಸುರೇಖಾ-ಅಭಿಷೇಕ್‌ ನಂ.5
ಕಂಪೌಂಡ್‌ ಮಿಶ್ರ ತಂಡ ರ್‍ಯಾಂಕಿಂಗ್‌ನಲ್ಲಿ ಜ್ಯೋತಿ ಸುರೇಖಾ-ಅಭಿಷೇಕ್‌ ವರ್ಮ 5ನೇ ಸ್ಥಾನ ಉಳಿಸಿಕೊಂಡಿದ್ದಾರೆ. ಈ ಜೋಡಿ ಸೆ. 29-30ರಂದು ಟರ್ಕಿಯಲ್ಲಿ ನಡೆಯುವ ಕಂಪೌಂಡ್‌ ಮಿಕ್ಸೆಡ್‌ ಟೀಮ್‌ ಸ್ಪರ್ಧೆಗೆ ಅರ್ಹತೆ ಪಡೆದಿದೆ. ಇದೇ ವೇಳೆ ರಿಕರ್ವ್‌ ಮಿಶ್ರ ತಂಡ 7ನೇ ರ್‍ಯಾಂಕಿಂಗ್‌ ಕಾಯ್ದುಕೊಂಡಿದೆ.  ವನಿತಾ ರಿಕರ್ವ್‌ ತಂಡ 8ನೇ ಸ್ಥಾನದಲ್ಲೇ ಮುಂದುವರಿದರೆ, ಪುರುಷರ ರಿಕರ್ವ್‌ ತಂಡ 12ನೇ ಸ್ಥಾನಕ್ಕೆ ಜಾರಿದೆ. ಕಳೆದ ವರ್ಷ ಮೆಕ್ಸಿಕೊದಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ವನಿತಾ ರಿಕರ್ವ್‌ ತಂಡ ಬೆಳ್ಳಿ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು. 2014ರ ಏಶ್ಯಾಡ್‌ನ‌ ಕಂಪೌಂಡ್‌ ಟೀಮ್‌ ಆರ್ಚರಿ ಸ್ಪರ್ಧೆಯಲ್ಲಿ ಭಾರತದ ಪುರುಷರ ತಂಡ ಚಿನ್ನ ಹಾಗೂ ವನಿತಾ ತಂಡ ಕಂಚಿನ ಪದಕ ಜಯಿಸಿತ್ತು.

ಟಾಪ್ ನ್ಯೂಸ್

Mumbai: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!

Mumbai: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!

Kollywood:‌ ಲೇಡಿ ಸೂಪರ್‌ ಸ್ಟಾರ್‌ ದಂಪತಿ ವಿರುದ್ಧ ಸಿಡಿದೆದ್ದ ಧನುಷ್; ಕೇಸ್‌ ದಾಖಲು

Kollywood:‌ ಲೇಡಿ ಸೂಪರ್‌ ಸ್ಟಾರ್‌ ದಂಪತಿ ವಿರುದ್ಧ ಸಿಡಿದೆದ್ದ ಧನುಷ್; ಕೇಸ್‌ ದಾಖಲು

75752

Max Movie: ಅಂತೂ ಬಂದೇ ಬಿಡ್ತು ʼಮ್ಯಾಕ್ಸ್‌ʼ ರಿಲೀಸ್‌ ಡೇಟ್..‌ ಫ್ಯಾನ್ಸ್‌ ಖುಷ್

Revanna

Congress ಸರಕಾರ 2018 ರಲ್ಲಿ ಜಿ.ಟಿ.ದೇವೇಗೌಡರನ್ನು ಬಂಧಿಸಲು ಮುಂದಾಗಿತ್ತು: ರೇವಣ್ಣ ಬಾಂಬ್

Mangaluru: ಸ್ಪ್ಯಾಮ್ ಕರೆ ಪತ್ತೆಗೆ ಎಐ ತಂತ್ರಜ್ಞಾನ ಬಳಕೆ; ಏರ್‌ಟೆಲ್ ನಿಂದ ಹೊಸ ವ್ಯವಸ್ಥೆ

Mangaluru: Spam Call ಪತ್ತೆಗೆ ಎಐ ತಂತ್ರಜ್ಞಾನ ಬಳಕೆ… ಏರ್‌ಟೆಲ್ ನಿಂದ ಹೊಸ ವ್ಯವಸ್ಥೆ

BBK11: ಮಂಜುಗೆ ʼಥೂ..ʼ ಎಂದು ಉಗಿದ ಮೋಕ್ಷಿತಾ; ದೊಡ್ಮನೆಯಲ್ಲಿ ಜೋರಾಯಿತು ಯೋಗ್ಯತೆ ಮಾತು

BBK11: ಮಂಜುಗೆ ʼಥೂ..ʼ ಎಂದು ಉಗಿದ ಮೋಕ್ಷಿತಾ; ದೊಡ್ಮನೆಯಲ್ಲಿ ಜೋರಾಯಿತು ಯೋಗ್ಯತೆ ಮಾತು

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

1-bumm

Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ

IPl-RCb

IPL Auction: ಆರ್‌ಸಿಬಿ ಫ್ರಾಂಚೈಸಿಯಿಂದ ಬಹಳ ಯೋಚಿಸಿ ಸಂತುಲಿತ ತಂಡ

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Hockey

Hockey: ಇಂದಿನಿಂದ ಜೂ. ಏಷ್ಯಾ ಕಪ್‌ ಹಾಕಿ; ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

13-

Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ

Mumbai: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!

Mumbai: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!

1-reeeeeeeeee

CSI ದಕ್ಷಿಣ ಪ್ರಾಂತ್ಯದ ಸಭಾಪಾಲಕರಾಗಿದ್ದ ರೆವರೆಂಡ್ ಜಾನ್ ಬೆನೆಡಿಕ್ಟ್ ನಿಧನ

Kollywood:‌ ಲೇಡಿ ಸೂಪರ್‌ ಸ್ಟಾರ್‌ ದಂಪತಿ ವಿರುದ್ಧ ಸಿಡಿದೆದ್ದ ಧನುಷ್; ಕೇಸ್‌ ದಾಖಲು

Kollywood:‌ ಲೇಡಿ ಸೂಪರ್‌ ಸ್ಟಾರ್‌ ದಂಪತಿ ವಿರುದ್ಧ ಸಿಡಿದೆದ್ದ ಧನುಷ್; ಕೇಸ್‌ ದಾಖಲು

12-sagara

Sagara: ವಿದ್ಯುತ್ ಟ್ರಾನ್ಸ್‌ ಫಾರ್ಮರ್‌ಗೆ ನೇಣು ಬಿಗಿದು ಯುವಕ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.