Asia Cup 2023 ಇಂದು ಭಾರತ-ಪಾಕ್ ಕಲಹ; ಹೀಗಿರಬಹುದು ಟೀಂ ಇಂಡಿಯಾದ ಆಡುವ ಬಳಗ
Team Udayavani, Sep 2, 2023, 1:20 PM IST
ಪಲ್ಲೆಕೆಲೆ: ಏಷ್ಯಾಕಪ್ ನ ಬಹುನಿರೀಕ್ಷಿತ ಭಾರತ- ಪಾಕಿಸ್ತಾನ ಪಂದ್ಯ ಇಂದು ನಡೆಯಲಿದೆ. ಶ್ರೀಲಂಕಾದ ಪಲ್ಲೆಕೆಲೆಯಲ್ಲಿ ನಡೆಯಲಿರುವ ಬಿ ಗ್ರೂಪ್ ನ ಪಂದ್ಯದಲ್ಲಿ ಇಂದು ರೋಹಿತ್ ಮತ್ತು ಬಾಬರ್ ಪಡೆಗಳು ಮುಖಾಮುಖಿಯಾಗುತ್ತಿದೆ.
ಕಳೆದ ವರ್ಷದ ಟಿ20 ವಿಶ್ವಕಪ್ ನ ಮೆಲ್ಬರ್ನ್ ಪಂದ್ಯದ ಬಳಿಕ ಇದೇ ಮೊದಲ ಬಾರಿಗೆ ಉಭಯ ತಂಡಗಳು ಮುಖಾಮುಖಿಯಾಗುತ್ತಿದೆ.
ಹಲವು ತಿಂಗಳ ಬಳಿಕ ಮೊದಲ ಬಾರಿಗೆ ರೋಹಿತ್ ಶರ್ಮಾ ನೇತೃತ್ವದ ತಂಡವು ಪೂರ್ಣ ಸಾಮರ್ಥ್ಯದ ತಂಡವನ್ನು ಹೊಂದಿದೆ. ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಮುಂಚಿತವಾಗಿ ತಮ್ಮನ್ನು ತಾವು ಸಿದ್ಧಪಡಿಸಿಕೊಳ್ಳಲು ಭಾರತ ತಂಡವು ಬೆಂಗಳೂರಿನ ಹೊರವಲಯದ ಆಲೂರಿನಲ್ಲಿ ಶಿಬಿರ ನಡೆಸಿತ್ತು. ಮತ್ತೊಂದೆಡೆ, ಏಷ್ಯಾಕಪ್ ಕೂಟದ ಆರಂಭಿಕ ಪಂದ್ಯದಲ್ಲಿ ಬಾಬರ್ ಅಜಮ್ ನೇತೃತ್ವದ ತಂಡ ನೇಪಾಳವನ್ನು 238 ರನ್‌ಗಳಿಂದ ಸೋಲಿಸಿ ಶುಭಾರಂಭ ಮಾಡಿದೆ.
ಇದನ್ನೂ ಓದಿ:Puttur: ಮಳೆ ಬರಲಿ, ಬರ ದೂರ ಇರಲಿ… ಕುಸಿದ ನೀರಿನ ಹರಿವಿನ ಪ್ರಮಾಣ, ಬರದ ಛಾಯೆ
ಶ್ರೇಯಸ್ ಅಯ್ಯರ್ ಮತ್ತು ಜಸ್ಪ್ರೀತ್ ಬುಮ್ರಾ ಅವರಂತಹ ಆಟಗಾರರು ಭಾರತ ತಂಡಕ್ಕೆ ಮರಳಿದ್ದು, ಬಲ ತುಂಬಿದ್ದಾರೆ. ಆದರೆ ಕೆಎಲ್ ರಾಹುಲ್ ಏಷ್ಯಾಕಪ್ ನ ಮೊದಲ ಎರಡು ಪಂದ್ಯಗಳನ್ನು ಕಳೆದುಕೊಳ್ಳಲಿದ್ದಾರೆ.
ಹೀಗಿರಬಹುದು ಆಡುವ ಬಳಗ
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿ.ಕೀ), ಹಾರ್ದಿಕ್ ಪಾಂಡ್ಯ (ಉ.ನಾ), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಝ್, ಮೊಹಮ್ಮದ್ ಶಮಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.