ವಿಂಡೀಸ್ ವಿರುದ್ಧದ ಟಿ20 ಸರಣಿ: ಟ್ರಿನಿಡಾಡ್ಗೆ ಆಗಮಿಸಿದ ರೋಹಿತ್ ಪಡೆ
Team Udayavani, Jul 26, 2022, 11:57 PM IST
ಪೋರ್ಟ್ ಆಫ್ ಸ್ಪೇನ್: ವೆಸ್ಟ್ ಇಂಡೀಸ್ ವಿರುದ್ಧ 5 ಪಂದ್ಯಗಳ ಟಿ20 ಸರಣಿಯಲ್ಲಿ ಪಾಲ್ಗೊಳ್ಳಲು ರೋಹಿತ್ ಶರ್ಮ ಬಳಗ ಮಂಗಳವಾರ ಟ್ರಿನಿಡಾಡ್ಗೆ ಬಂದಿಳಿಯಿತು.
ತಂಡದ ಪ್ರಮುಖರಾದ ದಿನೇಶ್ ಕಾರ್ತಿಕ್, ರಿಷಭ್ ಪಂತ್, ಆರ್. ಅಶ್ವಿನ್, ಭುವನೇಶ್ವರ್ ಕುಮಾರ್, ಕುಲದೀಪ್ ಯಾದವ್ ಕೂಡ ಆಗಮಿಸಿದ್ದಾರೆ. ಇದರ ವೀಡಿಯೋ ಒಂದನ್ನು ಬಿಸಿಸಿಐ ತನ್ನ ಟ್ವಿಟರ್ನಲ್ಲಿ ಅಪ್ಲೋಡ್ ಮಾಡಿದೆ. ಶುಕ್ರವಾರದಿಂದ ಟಿ20 ಸರಣಿ ಆರಂಭವಾಗಲಿದೆ. ಮೊದಲ 3 ಪಂದ್ಯ ವೆಸ್ಟ್ ಇಂಡೀಸ್ನಲ್ಲಿ, ಕೊನೆಯ 2 ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ.
ಪ್ರಸಕ್ತ ಸಾಗುತ್ತಿರುವ ಏಕದಿನ ಸರಣಿಗಾಗಿ ರೋಹಿತ್ ಶರ್ಮ ಸೇರಿದಂತೆ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿ ಶಿಖರ್ ಧವನ್ಗೆ ನಾಯಕತ್ವ ವಹಿಸಲಾಗಿತ್ತು.
ಟಿ20 ತಂಡ: ರೋಹಿತ್ ಶರ್ಮ (ನಾಯಕ), ಇಶಾನ್ ಕಿಶನ್, ಕೆ.ಎಲ್. ರಾಹುಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ರವೀಂದ್ರ ಜಡೇಜ, ಆರ್. ಅಶ್ವಿನ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಆವೇಶ್ ಖಾನ್, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ರವಿ ಬಿಷ್ಣೋಯಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.