ಭಾರತಕ್ಕೆ ಇಂದಿನಿಂದ ತ್ರಿದಿನ ಅಭ್ಯಾಸ ಪಂದ್ಯ
ಟೆಸ್ಟ್ ಸರಣಿಗೆ ತಾಲೀಮು
Team Udayavani, Aug 17, 2019, 5:58 AM IST
ಕೂಲಿಜ್ (ಆ್ಯಂಟಿಗುವಾ): ವೆಸ್ಟ್ ಇಂಡೀಸ್ ವಿರುದ್ಧ ಈಗಾಗಲೇ ಟಿ20 ಮತ್ತು ಏಕದಿನ ಸರಣಿಗಳನ್ನು ಗೆದ್ದ ಭಾರತದ ಮುಂದಿನ ಗುರಿ ಟೆಸ್ಟ್ ಸರಣಿ. ಇದನ್ನೂ ವಶಪಡಿಸಿಕೊಂಡರೆ ವಿಂಡೀಸ್ ನೆಲದಲ್ಲಿ ಮೂರೂ ಪ್ರಕಾರಗಳ ಕ್ರಿಕೆಟ್‌ನಲ್ಲಿ ಮೊದಲ ಸಲ ಸರಣಿ ಗೆದ್ದ ಅಪರೂಪದ ದಾಖಲೆ ಭಾರತದ್ದಾಗಲಿದೆ.
ಹೀಗಾಗಿ ಶನಿವಾರದಿಂದ ಆರಂಭವಾಗಲಿರುವ ತ್ರಿದಿನ ಅಭ್ಯಾಸ ಪಂದ್ಯವನ್ನು ಕೊಹ್ಲಿ ಪಡೆ ಗಂಭೀರವಾಗಿಯೇ ತೆಗೆದುಕೊಳ್ಳಲಿದೆ. ಇದರಲ್ಲಿ ಭಾರತದ ಎದುರಾಳಿ ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ ಇಲೆವೆನ್.
ಟೆಸ್ಟ್ ತಂಡಕ್ಕೆ ಆಯ್ಕೆಯಾಗಿರುವ ಅಜಿಂಕ್ಯ ರಹಾನೆ, ಚೇತೇಶ್ವರ್ ಪೂಜಾರ, ಜಸ್‌ಪ್ರೀತ್ ಬುಮ್ರಾ ಅವರೆಲ್ಲ ಸಕಾಲದಲ್ಲಿ ತಂಡವನ್ನು ಸೇರಿಕೊಳ್ಳುವ ಕಾರಣ, ಭಾರತವಿಲ್ಲಿ ಬಲಿಷ್ಠ ಪಡೆಯನ್ನು ಕಣಕ್ಕಿಳಿಸುವುದು ಖಚಿತ.
ಟೆಸ್ಟ್ ತಂಡದ ಉಪನಾಯಕನಾ ಗಿರುವ ಅಜಿಂಕ್ಯ ರಹಾನೆ ವಿಶ್ವಕಪ್‌ಗೆ ಆಯ್ಕೆಯಾಗದ ಬೇಸರವನ್ನು ಹೊರಗೆಡಹಿದ್ದರು. ಆದರೆ ಇತ್ತೀಚೆಗೆ ಇಂಗ್ಲಿಷ್ ಕೌಂಟಿಯಲ್ಲಿ ಭರ್ಜರಿ ಪ್ರದ ರ್ಶನ ನೀಡಿದ್ದು, 7 ಇನ್ನಿಂಗ್ಸ್‌ಗಳಿಂದ 307 ರನ್ ಬಾರಿಸಿ ಗಮನ ಸೆಳೆದಿದ್ದಾರೆ.
ಕರ್ನಾಟಕದ ಆರಂಭಿಕರು
ಆರಂಭಿಕರಾಗಿ ಕರ್ನಾಟಕದ ಮಾಯಾಂಕ್ ಅಗರ್ವಾಲ್-ಕೆ.ಎಲ್. ರಾಹುಲ್ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚು, ಮೂಲತಃ ಮಧ್ಯಮ ಸರದಿಯ ಆಟಗಾರನಾಗಿರುವ ಹನುಮ ವಿಹಾರಿ ಅವರನ್ನೂ ಓಪನರ್ ಆಗಿ ಇಳಿಸಬಹುದು. ಹಾಗೆಯೇ ಇಬ್ಬರು ಕೀಪರ್‌ಗಳಲ್ಲಿ ಸಾಹಾ ಮೊದಲ ಆಯ್ಕೆಯಾಗುವ ಸಾಧ್ಯತೆ ಹೆಚ್ಚು.
ವೇಗದ ಬೌಲಿಂಗ್ ವಿಭಾಗದಲ್ಲಿ ಅನುಭವಿಗಳಾದ ಉಮೇಶ್ ಯಾದವ್, ಇಶಾಂತ್ ಶರ್ಮ, ಮೊಹಮ್ಮದ್ ಶಮಿ ಅವಕಾಶ ಪಡೆದಿದ್ದಾರೆ. ರವೀಂದ್ರ ಜಡೇಜ ಸ್ಪಿನ್ ಬೌಲಿಂಗ್ ಆಲ್‌ರೌಂಡರ್ ಆಗಿದ್ದು, ಆರ್. ಅಶ್ವಿನ್ ಮತ್ತು ಕುಲದೀಪ್ ಪ್ರಧಾನ ಸ್ಪಿನ್ನರ್‌ಗಳಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.