ಪ್ಯಾರಾಲಿಂಪಿಕ್ಸ್|ಭಾರತಕ್ಕೆ ಮೂರನೇ ಪದಕ| ಡಿಸ್ಕಸ್ ಥ್ರೋನಲ್ಲಿ ಕಂಚು ಗೆದ್ದ ವಿನೋದ್
Team Udayavani, Aug 29, 2021, 7:35 PM IST
ನವದೆಹಲಿ: ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮೂರನೇ ಪದಕ ಒಲಿದು ಬಂದಿದೆ. ಭಾರತದ ವಿನೋದ್ ಕುಮಾರ್ ಅವರು ಡಿಸ್ಕಸ್ ಥ್ರೋನಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.
ಟೋಕಿಯೊ ಪ್ಯಾರಾಲಿಂಪಿಕ್ಸ್‌ನ 5 ನೇ ದಿನದಲ್ಲಿ ಭಾರತದ ವಿನೋದ್ ಕುಮಾರ್ ಪುರುಷರ ಡಿಸ್ಕಸ್ ಎಸೆತದಲ್ಲಿ ಕಂಚಿನ ಪದಕ ಗೆದ್ದುಇತಿಹಾಸ ಬರೆದಿದ್ದಾರೆ.
ವಿನೋದ್ ಕುಮಾರ್ 19.91 ಮೀಟರ್ ಎಸೆತದಲ್ಲಿ ಏಷ್ಯನ್ ದಾಖಲೆ ಮುರಿದು ಡಿಸ್ಕಸ್ ಥ್ರೋನಲ್ಲಿ ಕಂಚಿನ ಪದಕ ಗೆದ್ದರು. ಮೂರು ಪದಕಗಳೊಂದಿಗೆ, ಭಾರತವು ಪ್ಯಾರಾಲಿಂಪಿಕ್ಸ್ ನಲ್ಲಿ ತಮ್ಮ ಅತ್ಯುತ್ತಮ ಸಾಧನೆ ಮಾಡಿದೆ. 2016 ರ ರಿಯೋ ಗೇಮ್ಸ್ ನಲ್ಲಿ ಭಾರತ ನಾಲ್ಕು ಪದಕಗಳನ್ನು ಗೆದ್ದಿತ್ತು.
ಭಾರತಕ್ಕೆ ಇಂದು ಶುಭ ಭಾನುವಾರವಾಗಿದ್ದು, ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಇದು ಭಾರತದ ಮೂರನೇ ಪದಕವಾಗಿದೆ. ಭಾರತದ ಟೇಬಲ್ ಟೆನಿಸ್ ತಾರೆ ಭಾವಿನಾ ಪಟೇಲ್ ಪ್ಯಾರಾಲಿಂಪಿಕ್ಸ್ ನಲ್ಲಿ ದೇಶದ ಖಾತೆ ತೆರೆದು ಮಹಿಳಾ ಟೇಬಲ್ ಟೆನಿಸ್ ಫೈನಲ್ ನಲ್ಲಿ ಬೆಳ್ಳಿ ಪದಕ ಪಡೆದಿದ್ದರು. ಹೈ ಜಂಪರ್ ನಿಶಾದ್ ಕುಮಾರ್ ಕೂಡ ಅಂತಿಮ ಸ್ಪರ್ಧೆಯಲ್ಲಿ ಬೆಳ್ಳಿ ಗೆದ್ದರು.
ವಿನೋದ್, ಮಾಜಿ ಬಿಎಸ್‌ಎಫ್ ಯೋಧ. ದುರದೃಷ್ಟಕರ ಎಂದರೆ ಅಪಘಾತಕ್ಕೊಳಗಾಗಿ ಅವರು ಒಂದು ದಶಕಕ್ಕೂ ಹೆಚ್ಚು ಕಾಲ ಪಾರ್ಶ್ವವಾಯುವಿಗೆ ತುತ್ತಾಗಿ ಮತ್ತು ಹಾಸಿಗೆಯಲ್ಲಿ ಮಲಗಿದ್ದರು. ವಿನೋದ್ ಅಂತಿಮವಾಗಿ ಹಲವಾರು ಸವಾಲುಗಳನ್ನು ಜಯಿಸಿ, ರಿಯೊ 2016 ರಲ್ಲಿ ಭಾರತೀಯ ಪ್ಯಾರಾಲಿಂಪಿಯನ್‌ಗಳಿಂದ ಸ್ಫೂರ್ತಿ ಪಡೆದ ಅವರು ಕ್ರೀಡೆ ತರಬೇತಿ ಪಡೆದಯಲು ಆರಂಭಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Mangaluru: ಪಂಪ್‌ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು
Ullal: ತೊಕ್ಕೊಟ್ಟು-ಮುಡಿಪು ರಸ್ತೆಗೆ ತೇಪೆ ಕಾಮಗಾರಿ
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.