
ಭಾರತ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ: ಸೆಹವಾಗ್
Team Udayavani, Apr 22, 2018, 12:33 PM IST

ಕೋಲ್ಕತಾ: ಭಾರತ ಮುಂದಿನ ವರ್ಷದ ಏಕದಿನ ವಿಶ್ವಕಪ್ ಕ್ರಿಕೆಟ್ ಗೆಲ್ಲುವ ನೆಚ್ಚಿನ ತಂಡ ಎಂಬುದಾಗಿ ಮಾಜಿ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹವಾಗ್ ಅಭಿಪ್ರಾಯಪಟ್ಟಿದ್ದಾರೆ.
ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗಗಳೆರಡರಲ್ಲೂ ಬಲಿಷ್ಠವಾಗಿದೆ. ಇದರಿಂದ ಭಾರತಕ್ಕೆ 3ನೇ ಸಲ ವಿಶ್ವಕಪ್ ಗೆಲ್ಲಲು ಸಹಕಾರಿಯಾಗಲಿದೆ ಎಂದು ಸೆಹವಾಗ್ ಹೇಳಿದರು. ಜತೆಗೆ ಇದೇ ವರ್ಷ ಆಸ್ಟ್ರೇಲಿಯ ಪ್ರವಾಸದ ವೇಳೆ ಭಾರತ ಟೆಸ್ಟ್ ಸರಣಿಯನ್ನೂ ಜಯಿಸಲಿದೆ ಎಂದರು.
“ವಿದೇಶದಲ್ಲಿ ಟೆಸ್ಟ್ ಸರಣಿ ಗೆಲ್ಲುವಷ್ಟು ಸಾಮರ್ಥ್ಯವನ್ನು ಭಾರತ ತಂಡ ಹೊಂದಿದೆ. ಮೊನ್ನೆ ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಈ ಅವಕಾಶ ಸ್ವಲ್ಪದರಲ್ಲೇ ಕೈತಪ್ಪಿತು. ಆದರೆ ಆಸ್ಟ್ರೇಲಿಯದಲ್ಲಿ ಹೀಗಾಗಲು ಸಾಧ್ಯವೇ ಇಲ್ಲ’ ಎಂಬುದು ಸೆಹವಾಗ್ ಅವರ ಖಚಿತ ಧ್ವನಿಯಾಗಿತ್ತು.
“ನಮ್ಮ ಕಾಲದಲ್ಲಿ ಶ್ರೀನಾಥ್, ಜಹೀರ್ ಖಾನ್, ಅಜಿತ್ ಅಗರ್ಕರ್, ಆಶಿಷ್ ನೆಹ್ರಾ ವೇಗದ ಬೌಲಿಂಗ್ ವಿಭಾಗವನ್ನು ಮುನ್ನಡೆಸುತ್ತಿದ್ದರು. ಆದರೆ ಇವರು ಒಟ್ಟಾಗಿ ಆಡಿದ್ದೇ ಅಪರೂಪ. ಒಬ್ಬರಲ್ಲ ಒಬ್ಬರು ಗಾಯಾಳಾಗಿ ಹೊರಗುಳಿಯುತ್ತಿದ್ದರು. ಆದರೆ ಈಗಿನ ಬೌಲಿಂಗ್ ವಿಭಾಗ ಯಾವುದೇ ಪರಿಸ್ಥಿತಿಯನ್ನೂ ನಿಭಾಯಿಸುವಷ್ಟು ಸಶಕ್ತವಾಗಿದೆ’ ಎಂದರು.
“ಆಸ್ಟ್ರೇಲಿಯ ತಂಡದಲ್ಲಿ ಡೇವಿಡ್ ವಾರ್ನರ್, ಸ್ಟೀವನ್ ಸ್ಮಿತ್ ಇಲ್ಲ ಎಂಬುದೊಂದು ಪ್ರಶ್ನೆಯಲ್ಲ. ಇವರ ಉಪಸ್ಥಿತಿಯಲ್ಲೂ ಭಾರತಕ್ಕೆ ಗೆಲ್ಲುವ ಸಾಮರ್ಥ್ಯವಿದೆ’ ಎಂಬುದಾಗಿ ಸೆಹವಾಗ್ ಹೇಳಿದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!

WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ

R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
MUST WATCH
ಹೊಸ ಸೇರ್ಪಡೆ

Puttur: ಬಸ್ – ಬೈಕ್ ಅಪಘಾತ; ಸವಾರ ಸಾವು

Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ

BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.