ಭಾರತ- ಆಸೀಸ್ ಮೊದಲ ಏಕದಿನ ಪಂದ್ಯ: ಟಾಸ್ ಗೆದ್ದ ಆಸೀಸ್ ಬ್ಯಾಟಿಂಗ್ : ಮಯಾಂಕ್ ಓಪನಿಂಗ್
Team Udayavani, Nov 27, 2020, 8:45 AM IST
ಸಿಡ್ನಿ: ಸುಮಾರು 288 ದಿನಗಳ ಬಳಿಕ ಭಾರತ ತಂಡ ಏಕದಿನ ಪಂದ್ಯಕ್ಕೆ ಸಜ್ಜಾಗಿದೆ. ಆತಿಥೇಯ ಆಸೀಸ್ ವಿರುದ್ಧ ಸಿಡ್ನಿ ಅಂಗಳದಲ್ಲಿ ಇಂದು ಮೊದಲ ಏಕದಿನ ಪಂದ್ಯ ಆರಂಭವಾಗಿದೆ. ಟಾಸ್ ಗೆದ್ದಆರೋನ್ ಫಿಂಚ್ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರ ಕೈಗೊಂಡಿದ್ದಾರೆ.
ಈ ಪಂದ್ಯದ ವಿಶೇಷವೆಂದರೆ ಭಾರತದ ಆಟಗಾರರು 1992ರ ಏಕದಿನ ವಿಶ್ವಕಪ್ ವೇಳೆ ಧರಿಸಿದಂತಹ “ನೇವಿ ಬ್ಲೂ’ ಬಣ್ಣದ ಜೆರ್ಸಿಯಲ್ಲಿ ಆಡಲಿಳಿಯುವುದು. ಆಸ್ಟ್ರೇಲಿಯದಲ್ಲೇ ನಡೆದ ಅಂದಿನ ವಿಶ್ವಕಪ್‌ನಲ್ಲಿ ಮೊದಲ ಸಲ ಬಣ್ಣದ ಉಡುಗೆಯನ್ನು ಪರಿಚಯಿಸಲಾಗಿತ್ತು. ಆದರೆ 9 ತಂಡಗಳು ಪಾಲ್ಗೊಂಡ ಅಂದಿನ ಕೂಟದಲ್ಲಿ ಭಾರತ 7ನೇ ಸ್ಥಾನಕ್ಕೆ ಕುಸಿದುದನ್ನು ಮರೆಯುವಂತಿಲ್ಲ!
ಕನ್ನಡಿಗ ಮಯಾಂಕ್ ಅಗರ್ವಾಲ್ ಅವರು ಶಿಖರ್ ಧವನ್ ಜೊತೆ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಕಳೆದ ಕಿವೀಸ್ ಸರಣಿಯಲ್ಲಿ ಕಳಪೆ ಪ್ರದರ್ಶನ ತೋರಿದ್ದ ಮಯಾಂಕ್ ಈ ಬಾರಿ ಉತ್ತಮ ಪ್ರದರ್ಶನ ನೀಡಿ ತಂಡದಲ್ಲಿ ಸ್ಥಾನ ಗಟ್ಟಿಗೊಳಿಸುವ ಯೋಜನೆಯಲ್ಲಿದ್ದಾರೆ.
ಭಾರತ: ಶಿಖರ್ ಧವನ್, ಮಾಯಾಂಕ್ ಅಗರ್ವಾಲ್, ವಿರಾಟ್ ಕೊಹ್ಲಿ (ನಾಯಕ), ಶ್ರೇಯಸ್ ಅಯ್ಯರ್, ಕೆ.ಎಲ್.ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ನವದೀಪ್ ಸೈನಿ, ಯಜುವೇಂದ್ರ ಚಹಲ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ.
ಆಸ್ಟ್ರೇಲಿಯ: ಆರನ್ ಫಿಂಚ್ (ನಾಯಕ), ಡೇವಿಡ್ ವಾರ್ನರ್, ಸ್ಟೀವನ್ ಸ್ಮಿತ್, ಮಾರ್ನಸ್ ಲಬುಶೇನ್, ಗ್ಲೆನ್ ಮ್ಯಾಕ್ಸ್ ವೆಲ್, ಮಾರ್ಕಸ್ ಸ್ಟೋಯಿನಿಸ್, ಅಲೆಕ್ಸ್ ಕ್ಯಾರಿ, ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಝಲ್‌ವುಡ್, ಆ್ಯಡಂ ಝಂಪ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ
CM Siddaramaiah: “ಕ್ರೀಡಾಪಟುಗಳಿಗೆ ಕೃಪಾಂಕ ನೀಡಲು ಚಿಂತನೆ’
MUST WATCH
ಹೊಸ ಸೇರ್ಪಡೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.