‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್


Team Udayavani, Sep 19, 2024, 5:21 PM IST

INDvsBAN: Ashwin, Jadeja prop up slumping India; A local boy scored a century

ಚೆನ್ನೈ: ಪ್ರವಾಸಿ ಬಾಂಗ್ಲಾದೇಶ ವಿರುದ್ದ ಟೆಸ್ಟ್‌ ಸರಣಿಯ (Test series) ಮೊದಲ ಪಂದ್ಯದ ಮೊದಲ ಇನ್ನಿಂಗ್ಸ್‌ ನಲ್ಲಿ ಭಾರತ ಉತ್ತಮ ಹಿಡಿತ ಸಾಧಿಸಿದೆ. ಮೊದಲ ದಿನದಾಟದ ಅಂತ್ಯಕ್ಕೆ ಭಾರತವು ಆರು ವಿಕೆಟ್‌ ನಷ್ಟಕ್ಕೆ 339 ರನ್‌ ಪೇರಿಸಿದೆ.

ಒಂದು ಹಂತದಲ್ಲಿ 144 ರನ್‌ ಗೆ ಆರು ವಿಕೆಟ್‌ ಕಳೆದುಕೊಂಡಿದ್ದ ಭಾರತಕ್ಕೆ ಲೋಕಲ್‌ ಬಾಯ್‌ ಅಶ್ವಿನ್‌ (Ravichandran Ashwin) ಮತ್ತು ರವೀಂದ್ರ ಜಡೇಜಾ (Ravidra Jadeja) ಆಸರೆಯಾದರು. ಅವರಿಬ್ಬರು ಮುರಿಯದ ಏಳನೇ ವಿಕೆಟ್‌ ಗೆ 195 ರನ್‌ ಜೊತೆಯಾಟವಾಡಿದರು.

ಎಂ.ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದ ಬಾಂಗ್ಲಾದೇಶ ನಾಯಕ ನಜ್ಮುಲ್‌ ಹುಸೇನ್‌ ಶಾಂಟೋ ಅವರು ಮೊದಲು ಭಾರತವನ್ನು ಬ್ಯಾಟಿಂಗ್‌ ಗೆ ಆಹ್ವಾನಿಸಿದರು.

ಮೊದಲು ಬ್ಯಾಟಿಂಗ್‌ ಆರಂಭಿಸಿದ ಟೀಂ ಇಂಡಿಯಾ ಆರಂಭದಲ್ಲಿಯೇ ಸತತ ವಿಕೆಟ್‌ ಕಳೆದುಕೊಂಡು ಸಂಕಷ್ಟ ಅನುಭವಿಸಿತು. ನಾಯಕ ರೋಹಿತ್‌ ಶರ್ಮಾ 6 ರನ್‌ ಗಳಿಸಿದರೆ, ಶುಭಮನ್‌ ಗಿಲ್‌ 0, ವಿರಾಟ್‌ ಕೊಹ್ಲಿ 6 ರನ್‌ ಮಾಡಿ ಪೆವಿಲಿಯನ್‌ ಸೇರಿದರು. ಆದರೆ ಯಶಸ್ವಿ ಜೈಸ್ವಾಲ್‌, ರಿಷಭ್‌ ಪಂತ್‌ ಮತ್ತು ರವಿ ಅಶ್ವಿನ್‌ ತಂಡದವನ್ನು ಭಾರೀ ಕುಸಿತದಿಂದ ಪಾರು ಮಾಡಿದರು.

ಒಂದೆಡೆ ವಿಕೆಟ್‌ ಉರುಳಿತ್ತದ್ದರು ಗಟ್ಟಿಯಾಗಿ ನಿಂತ ಯಶಸ್ವಿ ಜೈಸ್ವಾಲ್‌ 56 ರನ್‌ ಗಳಿಸಿದರು. ಅಪಘಾತದ ಬಳಿಕ ಮೊದಲ ಬಾರಿ ಟೆಸ್ಟ್‌ ಆಡುತ್ತಿರುವ ರಿಷಭ್‌ ಪಂತ್‌ 39 ರನ್‌ ಮಾಡಿದರು. ಅವರು ಮತ್ತು ಜೈಸ್ವಾಲ್‌ ನಾಲ್ಕನೇ ವಿಕೆಟ್‌ ಗೆ 62 ರನ್‌ ಜೊತೆಯಾಟವಾಡಿದರು. ಮಧ್ಯಮ ಕ್ರಮಾಂಕದಲ್ಲಿ ಬಂದ ಕೆಎಲ್‌ ರಾಹುಲ್‌ 16 ರನ್‌ ಮಾತ್ರ ಮಾಡಿದರು.

ತಂಡವು 144 ರನ್‌ ಗಳಿಗೆ ಆರು ವಿಕೆಟ್‌ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ಜೊತೆಯಾದ ಅಶ್ವಿನ್-ಜಡೇಜಾ ಭಾರತವನ್ನು ಸುಸ್ಥಿತಿಗೆ ತಂದರು. ತವರಿನ ಅಂಗಳದಲ್ಲಿ ಆಡುತ್ತಿರುವ ಅಶ್ವಿನ್‌ ಅಮೋಘ ಶತಕ ಬಾರಿಸಿ ಮಿಂಚಿದರು. 112 ಎಸೆತ ಎದುರಿಸಿದ ಅಶ್ವಿನ್‌ ಹತ್ತು ಬೌಂಡರಿ ಮತ್ತು ಎರಡು ಸಿಕ್ಸರ್‌ ನೆರವಿನಿಂದ 102 ರನ್‌ ಮಾಡಿದರು. ಇದು ಟೆಸ್ಟ್‌ ನಲ್ಲಿ ಅಶ್ವಿನ್‌ ಅವರ ಆರು ಶತಕವಾಗಿದೆ. ಚೆನ್ನೈನಲ್ಲಿ ಎರಡನೇ ಶತಕ.

ಅಶ್ವಿನ್‌ ಗೆ ಜೊತೆಯಾದ ರವೀಂದ್ರ ಜಡೇಜಾ 117 ಎಸೆತಗಳಲ್ಲಿ ಅಜೇಯ 86 ರನ್‌ ಗಳಿಸಿದರು.

ಹಸನ್‌ ಮಹಮೂದ್‌ ಆರಂಭಿಕ ನಾಲ್ಕು ವಿಕೆಟ್‌ ಕಿತ್ತು ಮಿಂಚಿದರು. ನಹೀದ್‌ ರಾಣಾ ಮತ್ತು ಮೆಹದಿ ಹಸನ್‌ ತಲಾ ಒಂದು ವಿಕೆಟ್‌ ಕಿತ್ತರು.

ಟಾಪ್ ನ್ಯೂಸ್

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.