INDvsBAN: ಭಾರತ ವಿರುದ್ದದ ಟೆಸ್ಟ್ ಸರಣಿಗೆ ತಂಡ ಪ್ರಕಟಿಸಿದ ಬಾಂಗ್ಲಾದೇಶ
Team Udayavani, Sep 12, 2024, 4:38 PM IST
ಢಾಕಾ: ಪಾಕಿಸ್ತಾನ ವಿರುದ್ದ ಟೆಸ್ಟ್ ಸರಣಿಯನ್ನು ಅವರದೇ ನೆಲದಲ್ಲಿ ಗೆದ್ದು ಇತಿಹಾಸ ನಿರ್ಮಿಸಿದ ಉತ್ಸಾಹದಲ್ಲಿರುವ ಬಾಂಗ್ಲಾದೇಶವು (Bangladesh) ಇದೀಗ ಭಾರತ ಪ್ರವಾಸಕ್ಕೆ ಅಣಿಯಾಗಿದೆ. ಭಾರತದ ವಿರುದ್ದ ಟೆಸ್ಟ್ ಸರಣಿಗೆ 16 ಜನರ ತಂಡವನ್ನು ಪ್ರಕಟಿಸಲಾಗಿದೆ.
ಬಾಂಗ್ಲಾದೇಶವು ಭಾರತದ ವಿರುದ್ದ ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಮೊದಲ ಪಂದ್ಯವು ಸೆ.19ರಂದು ಚೆನ್ನೈನಲ್ಲಿ ಆರಂಭವಾಗಲಿದೆ. ಎರಡನೇ ಪಂದ್ಯವು ಸೆ.27ರಿಂದ ಕಾನ್ಪುರದಲ್ಲಿ ನಡೆಯಲಿದೆ.
ಇದುವರೆಗೆ ಭಾರತದಲ್ಲಿ ಬಾಂಗ್ಲಾ ಆಡಿರುವ ಎಲ್ಲಾ ಮೂರು ಟೆಸ್ಟ್ ಪಂದ್ಯಗಳಲ್ಲಿ ಸೋಲು ಕಂಡಿದೆ.
ಪಾಕಿಸ್ತಾನ ವಿರುದ್ದದ ಸರಣಿಯಲ್ಲಿ ಗಾಯಗೊಂಡಿದ್ದ ವೇಗಿ ಶೊರಿಫುಲ್ ಇಸ್ಲಾಂ ಅವರು ಭಾರತ ಪ್ರವಾಸದಿಂದ ಹೊರಬಿದ್ದಿದ್ದಾರೆ.
ಭಾರತವು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ ಮತ್ತು ಐಸಿಸಿಯ ಅಧಿಕೃತ ಟೆಸ್ಟ್ ಶ್ರೇಯಾಂಕದಲ್ಲಿ ಎರಡನೇ ಸ್ಥಾನದಲ್ಲಿದೆ. ಬಾಂಗ್ಲಾದೇಶವು ಒಂಬತ್ತನೇ ಸ್ಥಾನದಲ್ಲಿದೆ.
ಬಾಂಗ್ಲಾ ಟೆಸ್ಟ್ ತಂಡ
ನಜ್ಮುಲ್ ಹೊಸೈನ್ ಶಾಂಟೊ (ನಾಯಕ), ಮಹಮ್ಮದುಲ್ ಹಸನ್ ಜಾಯ್, ಝಾಕಿರ್ ಹಸನ್, ಶದ್ಮಾನ್ ಇಸ್ಲಾಂ, ಮೊಮಿನುಲ್ ಹಕ್, ಮುಶ್ಫಿಕರ್ ರಹೀಮ್, ಶಕೀಬ್ ಅಲ್ ಹಸನ್, ಲಿಟ್ಟನ್ ಕುಮಾರ್ ದಾಸ್, ಮೆಹಿದಿ ಹಸನ್ ಮಿರಾಜ್, ತೈಜುಲ್ ಇಸ್ಲಾಂ, ನಯೀಮ್ ಹಸನ್, ನಹಿದ್ ರಾಣಾ, ಹಸನ್ ಮಹಮ್ಮದ್, ಹಸನ್ ಮಹಮ್ಮದ್, ಸೈಯದ್ ಖಲೀದ್ ಅಹ್ಮದ್, ಜಾಕರ್ ಅಲಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Rey Mysterio Sr: ಖ್ಯಾತ ರೆಸ್ಲರ್ ರೇ ಮಿಸ್ಟೀರಿಯೊ ಸೀನಿಯರ್ ಇನ್ನಿಲ್ಲ
WPL 2025: ವನಿತಾ ಪ್ರೀಮಿಯರ್ ಲೀಗ್ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.