INDvsNZ: ಪುಣೆಯಲ್ಲಿ ಸ್ಪಿನ್ ಬಲೆಗೆ ಬಿದ್ದ ಭಾರತ; 12 ವರ್ಷಗಳ ಬಳಿಕ ತವರಲ್ಲಿ ಸರಣಿ ಸೋಲು
Team Udayavani, Oct 26, 2024, 3:55 PM IST
ಪುಣೆ: ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ದ ತಾನೇ ತೋಡಿದ ಸ್ಪಿನ್ ಖೆಡ್ಡಾಗೆ ಬಿದ್ದ ಭಾರತ ತಂಡವು (Team India) 12 ವರ್ಷಗಳ ಬಳಿಕ ತವರಿನಲ್ಲಿ ಟೆಸ್ಟ್ ಸರಣಿ ಸೋತಿದೆ. ಪುಣೆ ಟೆಸ್ಟ್ (Pune Test) ಪಂದ್ಯವನ್ನು 114 ರನ್ ಅಂತರದಿಂದ ಕಳೆದುಕೊಂಡ ರೋಹಿತ್ ಪಡೆಯು ಒಂದು ಪಂದ್ಯ ಬಾಕಿ ಉಳಿದಿರುವಂತೆ ಸರಣಿ ಸೋಲು ಕಂಡಿದೆ.
ಮೊದಲ ಇನ್ನಿಂಗ್ಸ್ ನಲ್ಲಿ 103 ರನ್ ಮುನ್ನಡೆಯೊಂದಿಗೆ ಬ್ಯಾಟಿಂಗ್ ಆರಂಭಿಸಿದ್ದ ನ್ಯೂಜಿಲ್ಯಾಂಡ್ ಎರಡನೇ ಇನ್ನಿಂಗ್ಸ್ ನಲ್ಲಿ 255 ರನ್ ಪೇರಿಸಿತು. ಈ ಮೂಲಕ ಭಾರತಕ್ಕೆ 359 ರನ್ ಗುರಿ ನೀಡಿತ್ತು. ಆದರೆ ಮತ್ತೊಮ್ಮೆ ಅಗ್ರ ಕ್ರಮಾಂಕದ ಬ್ಯಾಟರ್ ಗಳ ವೈಫಲ್ಯದ ಕಾರಣದಿಂದ ಭಾರತವು 245 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ಇದರೊಂದಿಗೆ ಕಿವೀಸ್ 114 ರನ್ ಅಂತರದಿಂದ ಪಂದ್ಯ ಗೆದ್ದು ಮೊದಲ ಬಾರಿಗೆ ಭಾರತದ ನೆಲದಲ್ಲಿ ಟೆಸ್ಟ್ ಸರಣಿ ಜಯಿಸಿತು.
ಮೊದಲ ಇನ್ನಿಂಗ್ಸ್ ನಲ್ಲಿ ಏಳು ವಿಕೆಟ್ ಗಳೊಂದಿಗೆ ಭಾರತವನ್ನು ಕಾಡಿದ್ದ ಸ್ಪಿನ್ನರ್ ಮಿಚೆಲ್ ಸ್ಯಾಂಟ್ನರ್ ಮತ್ತೊಮ್ಮೆ ಭಾರತಕ್ಕೆ ದುಸ್ವಪ್ನವಾದರು. ಮತ್ತೆ ಆರು ವಿಕೆಟ್ ಕಿತ್ತು ನ್ಯೂಜಿಲ್ಯಾಂಡ್ ಗೆಲುವಿನ ರೂವಾರಿಯಾದರು.
ಭಾರತದ ಪರ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಮತ್ತು ಆಲ್ ರೌಂಡರ್ ರವೀಂದ್ರ ಜಡೇಜಾ ತಕ್ಕಮಟ್ಟಿಗೆ ತಂಡವನ್ನು ಆಧರಿಸಿದರು. ವೇಗವಾಗಿ ಬ್ಯಾಟಿಂಗ್ ನಡೆಸಿದ ಜೈಸ್ವಾಲ್ 65 ಎಸೆತಗಳಲ್ಲಿ 77 ರನ್ ಮಾಡಿದರೆ, ಕೊನೆಯಲ್ಲಿ ಜಡೇಜಾ 42 ರನ್ ಗಳಿಸಿದರು. ಉಳಿದಂತೆ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರಿಷಭ್ ಪಂತ್, ಸರ್ಫರಾಜ್ ಖಾನ್ ನಿರಾಸೆ ಮೂಡಿಸಿದರು.
ಸತತ 18 ಸರಣಿ ಜಯದ ಓಟ ಅಂತ್ಯ
ಭಾರತ ತವರಲ್ಲಿ ಕೊನೆಯ ಸಲ ಸರಣಿ ಕಳೆದುಕೊಂಡದ್ದು 2012-13ರಲ್ಲಿ, ಇಂಗ್ಲೆಂಡ್ ವಿರುದ್ಧ ಸೋತಿತ್ತು. ಅನಂತರ ತವರಿನಲ್ಲಿ ಸತತ 18 ಸರಣಿಗಳಲ್ಲಿ ಗೆದ್ದು ಅಜೇಯ ದಾಖಲೆ ಕಾಯ್ದುಕೊಂಡು ಬಂದಿದೆ. ಈಗ ಆ ಅಜೇಯ ಓಟ ಅಂತ್ಯವಾಗಿದೆ.
ಕಿವೀಸ್ ಗೆ ಚೊಚ್ಚಲ ಟೆಸ್ಟ್ ಸರಣಿ ಜಯ
ನ್ಯೂಜಿಲ್ಯಾಂಡ್ 1955-56ರಲ್ಲಿ ಭಾರತದಲ್ಲಿ ಆಡಲಾರಂಭಿಸಿದ ಬಳಿಕ ಟೆಸ್ಟ್ ಸರಣಿ ಜಯಿಸಿದ್ದಿಲ್ಲ. ಇದೇ ಮೊದಲ ಬಾರಿಗೆ ಸರಣಿ ಜಯಿಸಿದೆ. ವಿಶೇಷವೆಂದರೆ ಇದುವರೆಗೆ ಕಿವೀಸ್ ಕೇವಲ 3 ಬಾರಿ ಭಾರತದಲ್ಲಿ ಟೆಸ್ಟ್ ಪಂದ್ಯಗಳನ್ನು ಗೆದ್ದುಕೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್
BGT 2024: ಮೊದಲ ಪಂದ್ಯಕ್ಕೆ ನಮ್ಮ ಆಡುವ ಬಳಗ ಅಂತಿಮವಾಗಿದೆ ಎಂದ ನಾಯಕ ಬುಮ್ರಾ
BGT 2025: ಶುಕ್ರವಾರದಿಂದ ಟೆಸ್ಟ್ ಸರಣಿ ಆರಂಭ: ಇಲ್ಲಿದೆ ಎಲ್ಲಾ ಪಂದ್ಯಗಳ ವೇಳಾಪಟ್ಟಿ, ಸಮಯ
Hardik Pandya: ಟಿ20 ಆಲ್‌ರೌಂಡರ್… ಹಾರ್ದಿಕ್ ಪಾಂಡ್ಯ ನಂ.1
China Masters 2024: ಥಾಯ್ಲೆಂಡ್‌ನ ಬುಸಾನನ್ ವಿರುದ್ಧ 20ನೇ ಗೆಲುವು ಸಾಧಿಸಿದ ಸಿಂಧು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.