ಆಯ್ಕೆಗಾರ ಹುದ್ದೆಗೆ ಇಂದು ಸಂದರ್ಶನ: ಪ್ರಸಾದ್,ಜೋಶಿ ಸಹಿತ ಐವರ ಆಯ್ಕೆ
Team Udayavani, Mar 4, 2020, 6:30 AM IST
ಹೊಸದಿಲ್ಲಿ/ಮುಂಬಯಿ: ಕರ್ನಾಟಕದ ವೆಂಕಟೇಶ್ ಪ್ರಸಾದ್ ಮತ್ತು ಸುನೀಲ್ ಜೋಶಿ ಸಹಿತ ಐವರು ಅಭ್ಯರ್ಥಿಗಳು ರಾಷ್ಟ್ರೀಯ ಆಯ್ಕೆಗಾರ ಹುದ್ದೆಗೆ ಸ್ಪರ್ಧೆಯಲ್ಲಿದ್ದಾರೆ. ಈ ಐವರು ಬುಧವಾರ ಮುಂಬಯಿಯಲ್ಲಿ ನಡೆಯುವ ಸಂದರ್ಶನದಲ್ಲಿ ಹಾಜರಾಗಲಿದ್ದಾರೆ. ಮಾಜಿ ವೇಗದ ಬೌಲರ್ ಅಜಿತ್ ಅಗರ್ಕರ್ ಹೆಸರನ್ನು ಹಠಾತ್ ಬೆಳವಣಿಗೆಯಲ್ಲಿ ಕಿರು ಪಟ್ಟಿಯಿಂದ ಬಿಸಿಸಿಐ ಸಲಹಾ ಸಮಿತಿ ಕೈ ಬಿಟ್ಟಿದ್ದು ಅಚ್ಚರಿ ಮೂಡಿಸಿತು.
ಮಾಜಿ ಸ್ಪಿನ್ನರ್‌ಗಳಾದ ಎಲ್.ಎಸ್. ಶಿವರಾಮಕೃಷ್ಣನ್, ರಾಜೇಶ್ ಚೌಹಾಣ್ ಮತ್ತು ಮಧ್ಯಮ ವೇಗಿ ಹರ್ವಿಂದರ್ ಸಿಂಗ್ ಅವರನ್ನು ಕೂಡ ಸಂದರ್ಶನಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ. ಸಂದರ್ಶನವು ಬೆಳಗ್ಗೆ 11 ಗಂಟೆಗೆ ಆರಂಭವಾಗಲಿದೆ.
ಮದನ್‌ಲಾಲ್, ಆರ್‌ಪಿ ಸಿಂಗ್ ಮತ್ತು ಸುಲಕ್ಷಣ ನಾೖಕ್ ಅವರನ್ನು ಒಳಗೊಂಡ ಕ್ರಿಕೆಟ್ ಸಲಹಾ ಸಮಿತಿಯು ಆಯ್ಕೆ ಸಮಿತಿಯಿಂದ ಹೊರಹೋಗುತ್ತಿರುವ ಎಂಎಸ್‌ಕೆ ಪ್ರಸಾದ್ ಮತ್ತು ಗಗನ್ ಖೋಡ ಅವರ ಜಾಗಕ್ಕೆ ಈ ಐವರು ಮಾಜಿ ಆಟಗಾರರನ್ನು ಅರ್ಜಿ ಪರಿಶೀಲಿಸಿ ಆಯ್ಕೆ ಮಾಡಿದೆ.
ಎರಡು ಹುದ್ದೆಗೆ 44 ಅರ್ಜಿಗಳು ಬಂದಿದ್ದವು. ಮಾಜಿ ವೇಗಿ ಅಜಿತ್ ಅಗರ್ಕರ್, ನಯನ್ ಮೊಂಗಿಯ ಕೂಡ ಅರ್ಜಿ ಸಲ್ಲಿಸಿದ್ದರು. ಆರಂಭದಿಂದಲೂ ಹುದ್ಧೆಗೆ ಅಗರ್ಕರ್ ಹೆಸರು ಮುಂಚೂಣಿಯಲ್ಲಿತ್ತು. ಅಂತಿಮ ಕ್ಷಣದಲ್ಲಿ ಅಗರ್ಕರ್ ಹೆಸರನ್ನು ವಲಯವಾರು ಕಾರಣಗಳಿಂದ ಕೈ ಬಿಡಲಾಗಿದೆ ಎಂದು ಸಲಹಾ ಸಮಿತಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
ಹೊಸಪೇಟೆ: ಸ್ಕ್ಯಾನ್ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.