ಐಪಿಎಲ್‌ಗೆ ಬಂತು ಸ್ಟಾರ್ ಕಳೆ : ಕೊಹ್ಲಿ, ಜಡೇಜ ಇಂದು ಕಣಕ್ಕೆ
Team Udayavani, Apr 13, 2017, 11:34 PM IST
ಬೆಂಗಳೂರು/ರಾಜ್‌ಕೋಟ್: ಪ್ರಮುಖ ಆಟಗಾರರಿಲ್ಲದೆ ಸೊರಗಿದ್ದ 10ನೇ ಐಪಿಎಲ್‌ಗೆ ಶುಕ್ರವಾರದಿಂದ ಸ್ಟಾರ್ ಕಳೆ ಲಭಿಸಲಿದೆ. ಕ್ರಿಕೆಟ್ ಹೀರೋಗಳಾದ ವಿರಾಟ್ ಕೊಹ್ಲಿ ಮತ್ತು ರವೀಂದ್ರ ಜಡೇಜ ಈ ಐಪಿಎಲ್‌ನಲ್ಲಿ ಮೊದಲ ಸಲ ಕಣಕ್ಕಿಳಿಯಲಿದ್ದಾರೆಂಬ ಸಿಹಿ ಸುದ್ದಿ ಬಿತ್ತರಗೊಂಡಿದೆ. ವಿರಾಟ್ ಕೊಹ್ಲಿ ಶುಕ್ರವಾರ ಬೆಂಗಳೂರಿನಲ್ಲಿ ನಡೆಯುವ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ತಂಡವನ್ನು ಮುನ್ನಡೆಸಿದರೆ, ಆತ್ತ ಪುಣೆ ಎದು ರಿನ ರಾಜ್‌ಕೋಟ್ ಪಂದ್ಯದಲ್ಲಿ ರವೀಂದ್ರ ಜಡೇಜ ಗುಜರಾತ್ ತಂಡವನ್ನು ಪ್ರತಿನಿಧಿಸಲಿದ್ದಾರೆ.
ಆಸ್ಟ್ರೇಲಿಯ ವಿರುದ್ಧದ ಟೆಸ್ಟ್ ಸರಣಿ ವೇಳೆ ಭುಜದ ಗಾಯಕ್ಕೆ ಸಿಲುಕಿದ್ದ ವಿರಾಟ್ ಕೊಹ್ಲಿ ವಿಶ್ರಾಂತಿಯಲ್ಲಿದ್ದರು. ಇವರ ಗೈರಲ್ಲಿ ಶೇನ್ ವಾಟ್ಸನ್ ಆರ್‌ಸಿಬಿ ತಂಡವನ್ನು ಮುನ್ನಡೆಸಿದ್ದರು. 3 ಪಂದ್ಯಗಳನ್ನಾಡಿರುವ ಬೆಂಗಳೂರು ತಂಡ ಕೇವಲ ಒಂದರಲ್ಲಷ್ಟೇ ಜಯ ಕಂಡಿತ್ತು. ವಿರಾಟ್ ಕೊಹ್ಲಿ ಚೇತರಿಸಿಕೊಂಡ ಸುದ್ದಿಯನ್ನು ಬಿಸಿಸಿಐ ಅಧಿಕೃತವಾಗಿ ಪ್ರಕಟಿಸಿದೆ. ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು ಬಿಸಿಸಿಐ ವೈದ್ಯರು ಬುಧವಾರ ಖಚಿತಪಡಿಸಿದ್ದಾರೆ. ಅವರು ಎ. 14ರ ಮುಂಬೈ ಇಂಡಿಯನ್ಸ್ ಎದುರಿನ ಪಂದ್ಯಕ್ಕೆ ಲಭ್ಯರಿರುತ್ತಾರೆ ಎಂದೂ ಪ್ರಕಟನೆಯಲ್ಲಿ ತಿಳಿಸಲಾಗಿದೆ.
ವಿಶ್ರಾಂತಿ ಮುಗಿಸಿದ ಜಡೇಜ
2016-17ನೇ ಸರಣಿಯ ಎಲ್ಲ ಟೆಸ್ಟ್ ಪಂದ್ಯಗಳನ್ನಾಡಿ, ಆಸ್ಟ್ರೇಲಿಯ ವಿರುದ್ದ ಸರಣಿಸ್ರೇಷ್ಠ ಗೌರವಕ್ಕೂ ಪಾತ್ರರಾಗಿದ್ದ ರವೀಂದ್ರ ಜಡೇಜ ಅವರಿಗೆ 2 ವಾರಗಳ ವಿಶ್ರಾಂತಿ ನೀಡಲಾಗಿತ್ತು. ಹೀಗಾಗಿ ಅವರು 10ನೇ ಐಪಿಎಲ್‌ನಲ್ಲಿ ಈವರೆಗೆ ಕಾಣಿಸಿಕೊಂಡಿರಲಿಲ್ಲ. ಈ ಅವಧಿಯಲ್ಲಿ 2 ಪಂದ್ಯಗಳನ್ನಾಡಿದ ಸುರೇಶ್ ರೈನಾ ನೇತೃತ್ವದ ಗುಜರಾತ್ ಲಯನ್ಸ್ ಎರಡ ರಲ್ಲೂ ಹೀನಾಯವಾಗಿ ಸೋತಿತ್ತು. ಕೆಕೆಆರ್ ಹಾಗೂ ಹೈದರಾಬಾದ್ ವಿರುದ್ಧದ ಈ 2 ಪಂದ್ಯಗಳಲ್ಲಿ ಗುಜರಾತ್‌ಗೆ ಕೀಳಲು ಸಾಧ್ಯವಾದದ್ದು ಒಂದೇ ವಿಕೆಟ್ ಎಂಬುದು ರೈನಾ ಪಡೆಯ ದುರಂತವನ್ನು ಸಾರುತ್ತದೆ. ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜ ಆಗಮನದಿಂದ ತಂಡದ ಅದೃಷ್ಟ ಬದಲಾಗಬಹುದೆಂಬ ನಂಬಿಕೆ ಗುಜರಾತ್ ಲಯನ್ಸ್ ಅಭಿಮಾನಿಗಳದ್ದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
Team Indiaಕ್ಕೆ ಆಸೀಸ್ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು
ICC ಇಂದು ಸಭೆ: ಚಾಂಪಿಯನ್ಸ್ ಟ್ರೋಫಿ; ಹೈಬ್ರಿಡ್ ಮಾದರಿಗೆ ಮತದಾನ?
Test; ದಕ್ಷಿಣ ಆಫ್ರಿಕಾ ಎದುರು ನಿಕೃಷ್ಟ ಮೊತ್ತಕ್ಕೆ ಶ್ರೀಲಂಕಾ ಆಲೌಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Sandalwood: ತೆರೆಮೇಲೆ ʼಅನಾಥʼನ ಕನಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.