ಮಾ.26ರಿಂದ ಮೇ 29ರವರೆಗೆ ಐಪಿಎಲ್ ಹಬ್ಬ
ಮುಂಬೈ, ಪುಣೆಯಲ್ಲಿ ಲೀಗ್, ಅಹ್ಮದಾಬಾದ್‌ನಲ್ಲಿ ಫೈನಲ್
Team Udayavani, Feb 25, 2022, 7:00 AM IST
ಹೊಸದಿಲ್ಲಿ: 15ನೇ ಆವೃತ್ತಿ ಐಪಿಎಲ್ ಯಾವಾಗ ಆರಂಭವಾಗುವುದೆಂಬ ಕುತೂಹಲಕ್ಕೆ ಕಡೆಗೂ ತೆರೆಬಿದ್ದಿದೆ.
ಈ ಕೂಟ ಮಾ.26ರಂದು ಮುಂಬಯಿಯಲ್ಲಿ ಆರಂಭವಾಗಿ ಮೇ 29ಕ್ಕೆ ಮುಕ್ತಾಯವಾಗಲಿದೆ. ಕೂಟದ ಆರಂಭದಲ್ಲಿ ಮೈದಾನ ಸಾಮರ್ಥ್ಯದ ಶೇ.40 ಪ್ರೇಕ್ಷಕರಿಗೆ ಅವಕಾಶ ಮಾಡಿಕೊಡಲಾಗುತ್ತದೆ. ಸದ್ಯದ ಮಟ್ಟಿಗೆ ಇದೊಂದು ಆಶಾದಾಯಕ ಬೆಳವಣಿಗೆ.
ಗುರುವಾರ ನಡೆದ ಐಪಿಎಲ್ ಆಡಳಿತ ಮಂಡಳಿ ಸಭೆಯ ಬಳಿಕ ಮುಖ್ಯಸ್ಥ ಬ್ರಿಜೇಶ್ ಪಟೇಲ್ ಈ ಘೋಷಣೆ ಮಾಡಿದ್ದಾರೆ. ಈ ಬಾರಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳ ಸೇರ್ಪಡೆಯೊಂದಿಗೆ ಒಟ್ಟು ತಂಡಗಳ ಸಂಖ್ಯೆ 10ಕ್ಕೇರಿದೆ. ಹಾಗಾಗಿ ಬೃಹತ್ ಕೂಟವೆನಿಸಿಕೊಳ್ಳಲಿದೆ.
ತಂಡಗಳ ಸಂಖ್ಯೆ ಹೆಚ್ಚಿರುವುದರಿಂದ ಪಂದ್ಯಗಳ ಸಂಖ್ಯೆ 60ರಿಂದ 74ಕ್ಕೇರಲಿದೆ. ಹಾಗಾಗಿ ಈ ಪಂದ್ಯಗಳನ್ನು ಮುಂಬಯಿ ಹಾಗೂ ಪುಣೆಯ ನಡುವೆ ಹಂಚಲಾಗುತ್ತದೆ. ಮುಂಬಯಿಯ ವಾಂಖೇಡೆ, ಬ್ರೆಬೋರ್ನ್ ಹಾಗೂ ಡಿವೈ ಪಾಟೀಲ್ ಮೈದಾನಗಳಲ್ಲಿ ಬಹುತೇಕ ಪಂದ್ಯಗಳು ನಡೆಯುತ್ತವೆ. ಬಾಕಿ ಪಂದ್ಯಗಳು ಪುಣೆಯಲ್ಲಿ ನಡೆಯಲಿವೆ.
ಪ್ರೇಕ್ಷಕರಿಗೆ ಪ್ರವೇಶ:
ಮಹಾರಾಷ್ಟ್ರ ಸರಕಾರ ಯಾವ ನಿಯಮಗಳನ್ನು ಹಾಕಲಿದೆ ಎನ್ನುವುದನ್ನು ನೋಡಿಕೊಂಡು ಮೈದಾನದಲ್ಲಿ ಪ್ರೇಕ್ಷಕರಿಗೆ ಪ್ರವೇಶ ನೀಡಲಾಗುತ್ತದೆ. ಒಂದು ವೇಳೆ ಕೊರೊನಾ ಪ್ರಕರಣಗಳ ಸಂಖ್ಯೆ ಕುಸಿದರೆ, ಪರಿಸ್ಥಿತಿ ನಿಯಂತ್ರಣಕ್ಕೆ ಬಂದರೆ ಕೂಟದ ಅಂತ್ಯದಲ್ಲಿ ಪ್ರೇಕ್ಷಕರಿಗೆ ಪೂರ್ಣ ಪ್ರಮಾಣದಲ್ಲಿ ಪ್ರವೇಶ ನೀಡಲಾಗುತ್ತದೆ ಎಂದು ಮೂಲಗಳು ಹೇಳಿವೆ.
ಅಹ್ಮದಾಬಾದ್‌ನಲ್ಲಿ ಫೈನಲ್ :
ಐಪಿಎಲ್‌ನ ಪ್ಲೇ ಆಫ್ ಪಂದ್ಯಗಳು ಎಲ್ಲಿ ನಡೆಯಲಿದೆ ಎನ್ನುವುದು ಇನ್ನೂ ಖಚಿತವಾಗಿಲ್ಲ. ಆದರೆ ಅಂತಿಮ ಫೈನಲ್ ಪಂದ್ಯ ಅಹ್ಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ನಡೆಯಲಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.