IPL 2024; ಈ ಬಾರಿಯ ಕೂಟಕ್ಕೆ ಹೊಸ ನಿಯಮಗಳನ್ನು ಪರಿಚಯಿಸಿದ ಬಿಸಿಸಿಐ

Team Udayavani, Mar 22, 2024, 5:58 PM IST

new rules of ipl 2024

ಚೆನ್ನೈ: 17ನೇ ಸೀಸನ್ ನ ಐಪಿಎಲ್ ಕೂಟವು ಇನ್ನು ಕೆಲವೇ ಕ್ಷಣಗಳಲ್ಲಿ ಚೆನ್ನೈನ ಎಂ.ಎ ಚಿದಂಬರಂ ಸ್ಟೇಡಿಯಂನಲ್ಲಿ ಆರಂಭವಾಗಲಿದೆ. ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.

ಪ್ರತಿಬಾರಿ ನವೀನತೆಯನ್ನು ಪರಿಚಯಿಸುವ ಬಿಸಿಸಿಐ ಈ ಬಾರಿಯೂ ಹೊಸತನಕ್ಕೆ ಮುಂದಾಗಿದೆ.

ಈ ಬಾರಿಯ ಕೂಟಕ್ಕೆ ಬಿಸಿಸಿಐ ಕೆಲವು ನಿಯಮ ಬದಲಾವಣೆ ಮಾಡಿದೆ. ಅದರಲ್ಲಿ ಪ್ರಮುಖವಾಗಿರುವುದು ಪ್ರತಿ ಓವರ್ ಗೆ ಎರಡು ಬೌನ್ಸರ್ ಎಸೆಯುವ ಅವಕಾಶ.

ಹೌದು, ಈ ಬಾರಿ ಐಪಿಎಲ್ ನಲ್ಲಿ ಎರಡು ಬೌನ್ಸರ್ ನಿಯಮ ಅಳವಡಿಸಲಾಗಿದೆ. ಇದುವರೆಗೆ ಟಿ20ಯಲ್ಲಿ ಪ್ರತಿ ಓವರ್ ಗೆ ಒಂದು ಬೌನ್ಸರ್ ಎಸೆಯಲು ಮಾತ್ರ ಅವಕಾಶವಿತ್ತು. ಎರಡನೇ ಬೌನ್ಸರ್ ಎಸೆದರೆ ಅದನ್ನು ನೋ ಬಾಲ್ ಎಂದು ಪರಿಗಣಿಸಲಾಗುತ್ತಿತ್ತು. ಈ ನಿಯಮವನ್ನು ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಯಶಸ್ವಿ ಪ್ರಯೋಗ ಮಾಡಲಾಗಿದೆ.

ಎರಡನೇ ಬೌನ್ಸರ್ ನಿಯಮದ ಜೊತೆಗೆ, ಐಪಿಎಲ್ 2024 ಸ್ಮಾರ್ಟ್ ರಿಪ್ಲೇ ಸಿಸ್ಟಮ್ ಪರಿಚಯ ಮಾಡಲಾಗುತ್ತಿದೆ. ಇದು ಅಂಪೈರಿಂಗ್ ನಿರ್ಧಾರಗಳನ್ನು ಉತ್ತಮಗೊಳಿಸಲು ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿಸುತ್ತದೆ. ಮೈದಾನದ ಸುತ್ತಲೂ ಇರುವ ಎಂಟು ಹೈ-ಸ್ಪೀಡ್ ಹಾಕ್-ಐ ಕ್ಯಾಮೆರಾಗಳಿಂದ ನಡೆಸಲ್ಪಡುವ ಈ ವ್ಯವಸ್ಥೆಯು ಟಿವಿ ಅಂಪೈರ್‌ಗೆ ಸಹಾಯ ಮಾಡಲು ನೈಜ-ಸಮಯದ ಚಿತ್ರಗಳನ್ನು ಒದಗಿಸುತ್ತದೆ. ತ್ವರಿತ ಮತ್ತು ಹೆಚ್ಚು ನಿಖರವಾದ ತೀರ್ಪುಗಳನ್ನು ಇದರಿಂದ ನೀಡಲಾಗುತ್ತಿದೆ.

ಕಳೆದ ಬಾರಿ ಐಪಿಎಲ್ ನಲ್ಲಿ ಪರಿಚಯಿಸಲಾಗಿದ್ದ ಇಂಪಾಕ್ಟ್ ಪ್ಲೇಯರ್ ನಿಯಮವನ್ನು ಈ ಬಾರಿಯೂ ಮುಂದುವರಿಸಲಾಗುತ್ತಿದೆ.

ಐಪಿಎಲ್ 2024ರ ಪಂದ್ಯಗಳಲ್ಲಿ ಸ್ಟಂಪಿಂಗ್‌ ಗೆ ಥರ್ಡ್ ಅಂಪೈರ್ ರೆಫರಲ್ ಕೋರಿದಾಗ ಕ್ಯಾಚ್ ಕೂಡಾ ಪರಿಶೀಲಿಸುವ ನಿಬಂಧನೆಯನ್ನು ಇರಿಸಿಕೊಳ್ಳಲು ಬಿಸಿಸಿಐ ನಿರ್ಧರಿಸಿದೆ. ಈ ತೀರ್ಪು ಐಸಿಸಿ ನಿಯಮಗಳಿಂದ ವಿರುದ್ದವಾಗಿದೆ. ಇತ್ತೀಚೆಗೆ ಬದಲಾದ ಐಸಿಸಿ ನಿಯಮದ ಪ್ರಕಾರ ಸ್ಟಂಪಿಂಗ್ ರೆಫರಲ್ ವೇಳೆ ಸ್ಟಂಪಿಂಗ್ ಮಾತ್ರ ಪರಿಶೀಲನೆ ಮಾಡಲಾಗುತ್ತದೆ.

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಕೆಲವೇ ದಿನಗಳ ಹಿಂದೆ ಜಾರಿಯಾದ ಸ್ಟಾಪ್ ಕ್ಲಾಕ್ ನಿಯಮವನ್ನು ಐಪಿಎಲ್ ನಲ್ಲಿ ಅಳವಡಿಸದೇ ಇರಲು ಬಿಸಿಸಿಐ ತೀರ್ಮಾನಿಸಿದೆ. ಈ ನಿಯಮದ ಪ್ರಕಾರ ಪ್ರತಿ ಓವರ್ ಮುಗಿದ ಬಳಿಕ ಒಂದು ನಿಮಿಷದೊಳಗೆ ಮತ್ತೊಂದು ಓವರ್ ಆರಂಭಿಸಬೇಕು.

ಟಾಪ್ ನ್ಯೂಸ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

1-syyy

Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್‌-ಗಂಭೀರ್‌ ಮನಸ್ತಾಪ ತೀವ್ರ?

PCB

PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ

1-foot

FIFA ಸೌಹಾರ್ದ ಫುಟ್‌ಬಾಲ್‌ ಪಂದ್ಯ: ಮಾಲ್ದೀವ್ಸ್‌  ವಿರುದ್ಧ ಭಾರತಕ್ಕೆ 11-1 ಗೆಲುವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.