IPL 2024; ಸಿಎಸ್‌ಕೆ ಆರಂಭಿಕ ಪಂದ್ಯಗಳಿಗೆ ಲಂಕಾ ವೇಗಿ ಅಲಭ್ಯ?
Team Udayavani, Mar 17, 2024, 10:43 AM IST
ಚೆನ್ನೈ: ಐಪಿಎಲ್ 17ನೇ ಸೀಸನ್ ಆರಂಭಕ್ಕಿನ್ನು ಒಂದು ವಾರವಷ್ಟೇ ಬಾಕಿ ಉಳಿದಿದೆ. ಈ ಮಧ್ಯೆ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಗೆ ಆಘಾತಕಾರಿ ಸಂಗತಿಯೊಂದು ಎದುರಾಗಿದೆ. ತಂಡದ ಪ್ರಮುಖ ವೇಗಿ, ಶ್ರೀಲಂಕಾದ ಮತೀಶ ಪತಿರಾಣ ತೊಡೆನೋವಿಗೆ ತುತ್ತಾಗಿದ್ದು, ಆರಂಭಿಕ ಕೆಲವು ಪಂದ್ಯಗಳಿಂದ ಹೊರಗುಳಿಯುವ ಸಾಧ್ಯತೆಯಿದೆ.
ಮಾರ್ಚ್ 6ರಂದು ಸಿಲ್ಹೆಟ್ ನಲ್ಲಿ ನಡೆದಿದ್ದ ಬಾಂಗ್ಲಾದೇಶ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಮತೀಶ ಪತಿರಾಣ ಗಾಯಕ್ಕೀಡಗಿದ್ದರು. ಅಲ್ಲಿಂದ ಪತಿರಾಣ ಯಾವುದೇ ಪಂದ್ಯಗಳನ್ನು ಆಡಿಲ್ಲ. ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಇನ್ನೂ 4-5 ವಾರಗಳು ಬೇಕಾಗಬಹುದು ಎಂದು ತಂಡದ ಮೂಲಗಳು ತಿಳಿಸಿವೆ.
ಕಳೆದ ಬಾರಿ ಎಂ.ಎಸ್.ಧೋನಿ ನಾಯಕತ್ವದ ಚೆನ್ನೈ, ದಾಖಲೆಯ ಐದನೇ ಪ್ರಶಸ್ತಿ ಗೆಲ್ಲುವಲ್ಲಿ ಪತಿರಾಣ ಪ್ರಮುಖ ಪಾತ್ರ ವಹಿಸಿದ್ದರು. ಆಡಿದ 12 ಪಂದ್ಯಗಳನ್ನು ಅವರು 19 ವಿಕೆಟ್‌ಗಳನ್ನು ಉರುಳಿಸಿದ್ದರು.
ಮಾರ್ಚ್ 22ರಂದು ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಆಡಲಿದೆ. ಈ ಪಂದ್ಯವು ಚೆನ್ನೈನಲ್ಲಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.