IPL 2024: ನಾಯಕತ್ವ ತೊರೆದ ಎಂ.ಎಸ್.ಧೋನಿ; ಸಿಎಸ್ ಕೆ ತಂಡಕ್ಕೆ ಹೊಸ ಸಾರಥಿ
Team Udayavani, Mar 21, 2024, 3:55 PM IST
ಚೆನ್ನೈ: 17ನೇ ಸೀಸನ್ ನ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಒಂದೇ ದಿನ ಬಾಕಿಯಿದೆ. ಶುಕ್ರವಾರ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.
ಚೆನ್ನೈನಲ್ಲಿ ನಡೆಯಲಿರುವ 2024ರ ಐಪಿಎಲ್ ನ ಮೊದಲ ಪಂದ್ಯವನ್ನು ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಆದರೆ ಅದಕ್ಕೆ ಮೊದಲು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಶಾಕ್ ನೀಡಿದೆ. ಅದುವೇ ನಾಯಕತ್ವ ಬದಲಾವಣೆ.
ಹೌದು, ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ತಂಡದ ನಾಯಕತ್ವದ ಜವಾಬ್ದಾರಿಯಿಂದ ದೂರವಾಗಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಐಪಿಎಲ್ ಹ್ಯಾಂಡಲ್ ನಲ್ಲಿ ಅಧಿಕೃತವಾಗಿ ಪ್ರಕಟಿಸಲಾಗಿದೆ.
ಸಿಎಸ್ ಕೆ ತಂಡದ ಮುಂದಿನ ನಾಯಕನಾಗಿ ಯುವ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಅವರನ್ನು ನೇಮಿಸಲಾಗಿದೆ.
Presenting @ChennaiIPL‘s Captain – @Ruutu1331 🙌🙌#TATAIPL pic.twitter.com/vt77cWXyBI
— IndianPremierLeague (@IPL) March 21, 2024
ಕೆಲವು ದಿನಗಳ ಹಿಂದೆ ಧೋನಿ ಅವರು ತನ್ನ ಸಾಮಾಜಿಕ ಜಾಲತಾಣ ಖಾತೆಯಲ್ಲಿ ‘ಈ ಬಾರಿ ಹೊಸ ಜವಾಬ್ದಾರಿಗೆ ಎದುರು ನೋಡುತ್ತಿರುವುದಾಗಿ’ ಹೇಳಿದ್ದರು. ಅದು ನಾಯಕತ್ವ ಬದಲಾವಣೆ ಬಗ್ಗೆ ಎನ್ನುವುದು ಇದೀಗ ಖಚಿತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.