IPL 2025 ಮಾರ್ಚ್ 23 ರಿಂದ ಆರಂಭ: ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ
Team Udayavani, Jan 12, 2025, 4:56 PM IST
ಮುಂಬಯಿ: ಐಪಿಎಲ್(IPL) ಮಾರ್ಚ್ 23 ರಿಂದ ಪ್ರಾರಂಭವಾಗಲಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(BCCI) ಉಪಾಧ್ಯಕ್ಷ ರಾಜೀವ್ ಶುಕ್ಲಾ ರವಿವಾರ(ಜನವರಿ 12) ಖಚಿತಪಡಿಸಿದ್ದಾರೆ.
ಶುಕ್ಲಾ ಅವರು ಉದ್ಘಾಟನಾ ಪಂದ್ಯದ ದಿನಾಂಕವನ್ನು ದೃಢಪಡಿಸಿದ್ದಾರೆ, ಆದರೆ ಪ್ಲೇಆಫ್ ಅಥವಾ ಫೈನಲ್ ದಿನಾಂಕಗಳನ್ನು ಹೇಳಲಿಲ್ಲ. ಇಂದು ನಡೆದ ಬಿಸಿಸಿಐ ಸಭೆಯಲ್ಲಿ ನೂತನ ಖಜಾಂಚಿ ಮತ್ತು ಕಾರ್ಯದರ್ಶಿ ನೇಮಕಕ್ಕೆ ಸಂಬಂಧಿಸಿದಂತೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.
”ಬಿಸಿಸಿಐನ ನೂತನ ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ಮತ್ತು ಖಜಾಂಚಿಯಾಗಿ ಪ್ರಭತೇಜ್ ಸಿಂಗ್ ಭಾಟಿಯಾ ಬಿಸಿಸಿಐ ಆಯ್ಕೆಯಾಗಿದ್ದಾರೆ” ಎಂದು ತಿಳಿಸಿದರು.
ಮುಂದಿನ ಜವಾಬ್ದಾರಿಗಳ ಬಗ್ಗೆ ಚರ್ಚೆಗಳು ನಡೆದಿವೆ. ಮಹಿಳಾ ಪ್ರೀಮಿಯರ್ ಲೀಗ್ (WPL) ಸ್ಥಳದ ಬಗ್ಗೆ ಸ್ಪಷ್ಟತೆ ಬಹುತೇಕ ಅಂತಿಮಗೊಂಡಿದೆ ಎಂದು ತಿಳಿಸಿದರು.
ಹೆಚ್ಚುವರಿಯಾಗಿ, ಐಪಿಎಲ್ ಒಂದು ವರ್ಷದ ಅವಧಿಗೆ ಹೊಸ ಆಯುಕ್ತರ ನೇಮಕವನ್ನು ಪ್ರಕಟಿಸಿದೆ. ಜನವರಿ 18-19 ರಂದು ನಡೆಯಲಿರುವ ಮುಂದಿನ ಸಭೆಯು ಮುಂಬರುವ ಚಾಂಪಿಯನ್ಸ್ ಟ್ರೋಫಿಗೆ ತಂಡವನ್ನು ಅಂತಿಮಗೊಳಿಸುವುದರ ಮೇಲೆ ಕೇಂದ್ರೀಕರಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India: ಬಿಸಿಸಿಐ ಬಳಿ ಕೆಲವು ತಿಂಗಳ ಅವಕಾಶ ಕೇಳಿದ ರೋಹಿತ್: ಸಭೆಯಲ್ಲಿ ಏನಾಯ್ತು?
INDWvsIREW: ಜೆಮಿಮಾ ಚೊಚ್ಚಲ ಶತಕ: ದಾಖಲೆಯ ರನ್ ಪೇರಿಸಿದ ಭಾರತ ವನಿತೆಯರು
Champions Trophy: ಬಾಂಗ್ಲಾದೇಶ ತಂಡ ಪ್ರಕಟ; ಇಬ್ಬರು ಹಿರಿಯ ಆಟಗಾರರಿಗೆ ಇಲ್ಲ ಸ್ಥಾನ
Saikia: ಬಿಸಿಸಿಐ ಕಾರ್ಯದರ್ಶಿಯಾಗಿ ಮಾಜಿ ಅಸ್ಸಾಂ ಕ್ರಿಕೆಟರ್ ದೇವಜಿತ್ ಸೈಕಿಯಾ ನೇಮಕ
Champions Trophy: ಟೀಂ ಇಂಡಿಯಾಗೆ ಗಾಯದ ಸಂಕಷ್ಟ; ಪ್ರಮುಖ ಬೌಲರ್ ಕೂಟದಿಂದ ಔಟ್!
MUST WATCH
ಹೊಸ ಸೇರ್ಪಡೆ
Kudremukh National Park: ವನ್ಯಜೀವಿ ಬೇಟೆಗೆ ಯತ್ನ; ಆರೋಪಿ ಬಂಧನ
ಮೋಹ ಪರವಶ, ಅಧಿಕಾರ ಮದ, ಮತ್ಸರದ ರಾಜಕಾರಣ ಮಾಡೋರಿಗೆ ಸತ್ಯ ಅರ್ಥವಾಗಲ್ಲ: ಸಿ.ಟಿ.ರವಿ
Bengaluru: ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು; ಭುಗಿಲೆದ್ದ ಆಕ್ರೋಶ
Tulu Film: ರೂಪೇಶ್ ಶೆಟ್ರ ‘ಜೈ’ ಸಿನಿಮಾಗೆ ಬಂದ್ರು ಬಾಲಿವುಡ್ ಸೂಪರ್ ಸ್ಟಾರ್
ಮಕ್ಕಳ ಮೇಲೆ ಗದರದೇ, ಕೈ ಮಾಡದೆ ಶಿಸ್ತನ್ನು ಮೂಡಿಸುವುದು ಹೇಗೆ? ಇಲ್ಲಿದೆ ಕೆಲವು ಸಲಹೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.