IPL 2025: ಪಂಜಾಬ್ ಕಿಂಗ್ಸ್ ಗೆ ಶ್ರೇಯಸ್ ಅಯ್ಯರ್ ನಾಯಕ
Team Udayavani, Jan 13, 2025, 12:15 PM IST
ಹೊಸದಿಲ್ಲಿ: ಶ್ರೇಯಸ್ ಅಯ್ಯರ್ ಅವರನ್ನು ಇಂಡಿಯನ್ ಪ್ರೀಮಿಯರ್ ಲೀಗ್ (IPL) 2025 ರ ಸೀಸನ್‌ಗಾಗಿ ಪಂಜಾಬ್ ಕಿಂಗ್ಸ್ (PBKS) ತಂಡದ ನಾಯಕರನ್ನಾಗಿ ಅಧಿಕೃತವಾಗಿ ನೇಮಿಸಲಾಗಿದೆ.
ಅಯ್ಯರ್ ಮತ್ತು ಪಿಬಿಕೆಎಸ್ ಕೋಚ್ ರಿಕಿ ಪಾಂಟಿಂಗ್ ಐಪಿಎಲ್ ಫ್ರಾಂಚೈಸಿಗೆ ನಾಯಕತ್ವದ ಜೋಡಿಯಾಗಿ ಮತ್ತೆ ಒಂದಾಗಲಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ (DC) ಯಲ್ಲಿ ಜೊತೆಯಾಗಿದ್ದ ಈ ಜೋಡಿ 2020 ರಲ್ಲಿ ತಂಡವನ್ನು ಮೊದಲ ಐಪಿಎಲ್ ಫೈನಲ್‌ಗೆ ಮುನ್ನಡೆಸಿದ್ದರು.
ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ಪಂಜಾಬ್ ಫ್ರಾಂಚೈಸಿಯು 26.75 ಕೋಟಿ ರೂ.ಗೆ ಅಯ್ಯರ್ ಅವರನ್ನು ಖರೀದಿ ಮಾಡಿತ್ತು. ಐಪಿಎಲ್ ಇತಿಹಾಸದಲ್ಲಿ ಅಯ್ಯರ್ ಎರಡನೇ ಅತ್ಯಂತ ದುಬಾರಿ ಆಟಗಾರರಾಗಿದ್ದಾರೆ.
ಶ್ರೇಯಸ್ ಅಯ್ಯರ್ 2024 ರ ಋತುವಿನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡವನ್ನು ತಮ್ಮ ಮೂರನೇ ಐಪಿಎಲ್ ಟ್ರೋಫಿಗೆ ಮುನ್ನಡೆಸಿದ್ದರು. ಆದರೆ ಐಪಿಎಲ್ 2025 ರ ಹರಾಜಿಗೆ ಮುಂಚಿತವಾಗಿ ಫ್ರಾಂಚೈಸಿಯಿಂದ ಬಿಡುಗಡೆ ಮಾಡಲಾಯಿತು. ಪ್ರಶಸ್ತಿಯನ್ನು ಗೆದ್ದ ನಂತರ ಫ್ರಾಂಚೈಸಿಯಿಂದ ಬಿಡುಗಡೆಯಾದ ಇತಿಹಾಸದಲ್ಲಿ ಮೊದಲ ಐಪಿಎಲ್ ವಿಜೇತ ನಾಯಕ ಇವರು.
2025 ರ ಐಪಿಎಲ್‌ನ ಮೊದಲ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಮುನ್ನಡೆಸುವ ಮೂಲಕ ಅಯ್ಯರ್ ಇತಿಹಾಸ ಸೃಷ್ಟಿಸುವ ಸಜ್ಜಾಗಿದ್ದಾರೆ. ಮೂರು ವಿಭಿನ್ನ ಐಪಿಎಲ್ ತಂಡಗಳನ್ನು ಮುನ್ನಡೆಸಿದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 2024 ರ ಐಪಿಎಲ್ ವಿಜೇತ ನಾಯಕ ಈ ಹಿಂದೆ ಡಿಸಿ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡಗಳನ್ನು ಮುನ್ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jammu Kashmir: ಸೋನ್ಮಾರ್ಗ್‌ನಲ್ಲಿ ಝಡ್-ಮೋರ್ಹ್ ಸುರಂಗವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ
ನಭದಲ್ಲಿ ಕಣ್ಣು-ನೆಲದಲ್ಲಿ ಕಾಲು: ಮೌನ ಕ್ರಾಂತಿ: ಭೂ ಸಾಮರ್ಥ್ಯ ವೃದ್ಧಿಸಿದ ಬಾಹ್ಯಾಕಾಶ ಶಕ್ತಿ
ಹತ್ಯೆಗೈಯಲು ಹೇಳಿದ್ದು ಪ್ರೇಯಸಿಯ ಪತಿಯನ್ನು, ಬಾಡಿಗೆ ಹಂತಕರು ಕೊಂದಿದ್ದು Taxi ಚಾಲಕನನ್ನು
Editorial: ಇಂಟರ್‌ನೆಟ್-ನೆಟ್‌ವರ್ಕ್ ಸುಧಾರಣೆಗೆ ಸರಕಾರ ಮುಂದಾಗಲಿ
Sanju Weds Geetha 2: ಜ.17ಕ್ಕೆ ಬರಲಿದೆ ಸಂಜು ವೆಡ್ಸ್ ಗೀತಾ-2
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.