ಐಪಿಎಲ್ ಫಿಕ್ಸಿಂಗ್ ನೋಟಿಸ್ ಜಾರಿ: ಖಚಿತಪಡಿಸಿದ ನ್ಯಾಯಾಲಯ
Team Udayavani, Apr 4, 2019, 6:00 AM IST
ಹೊಸದಿಲ್ಲಿ: 2013ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಆರೋಪಿಗಳಾಗಿರುವ ಭಾರತ ಕ್ರಿಕೆಟ್ ತಂಡದ ಮಾಜಿ ವೇಗಿ ಎಸ್. ಶ್ರೀಶಾಂತ್, ಅಂಕಿತ್ ಚವಾಣ್, ಅಜಿತ್ ಚಾಂಡೀಲ ಸೇರಿದಂತೆ ಎಲ್ಲ 36 ಆರೋಪಿಗಳಿಗೆ ನೋಟಿಸ್ ಜಾರಿಯಾಗಿತ್ತು ಎನ್ನುವುದನ್ನು ದಿಲ್ಲಿ ಉಚ್ಚ ನ್ಯಾಯಾಲಯ ಖಚಿತ ಪಡಿಸಿಕೊಂಡಿದೆ.
ಇದಕ್ಕೆ ಸಂಬಂಧಿಸಿದಂತೆ ದಿಲ್ಲಿ ಪೊಲೀಸರ ಪರವಾಗಿ ಹಾಜರಾದ ವಕೀಲ ದಯನ್ ಕೃಷ್ಣನ್ ಪ್ರತಿಕ್ರಿಯಿಸಿ, “ಎಲ್ಲರಿಗೂ ನೋಟಿಸ್ ನೀಡ ಲಾಗಿದೆ, ಈ ಹಿಂದೆ ಅವರ ಪರ ವಕೀಲರು ವಿಚಾರಣೆಗೂ ಹಾಜರಾಗಿದ್ದರು’ ಎಂದು ತಿಳಿಸಿದ್ದಾರೆ.
2013ರ ಐಪಿಎಲ್ ಫಿಕ್ಸಿಂಗ್ ಪ್ರಕರಣದಲ್ಲಿ 36 ಮಂದಿ ಆರೋಪಿಗಳಾಗಿದ್ದರು. ಈ ಪ್ರಕರಣದ ವಿಚಾರಣೆ ದಿಲ್ಲಿಯ ಸ್ಥಳೀಯ ವಿಶೇಷ ನ್ಯಾಯಾಲಯದಲ್ಲಿ ನಡೆದು, ಅಷ್ಟೂ ಮಂದಿಯನ್ನು ಖುಲಾಸೆಗೊಳಿಸಲಾಗಿತ್ತು. ಅದರ ವಿರುದ್ಧ ದಿಲ್ಲಿ ಪೊಲೀಸರು ಉಚ್ಚ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
FIP Padel: ಭಾರತದ ಮೊದಲ ಎಫ್ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
MUST WATCH
ಹೊಸ ಸೇರ್ಪಡೆ
Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
FIP Padel: ಭಾರತದ ಮೊದಲ ಎಫ್ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.