ವಿಶ್ವಕಪ್ ಆಯ್ಕೆಗೆ ಐಪಿಎಲ್ ನಿರ್ಣಾಯಕ: ಬಿಸಿಸಿಐ
Team Udayavani, Mar 20, 2019, 12:30 AM IST
ಹೊಸದಿಲ್ಲಿ: ಭಾರತದ ಕ್ರಿಕೆಟ್ ಜಾತ್ರೆ ಎಂದೇ ಪರಿಗಣಿಸಲ್ಪಟ್ಟಿರುವ ಐಪಿಎಲ್‌ಗೆ ಕ್ಷಣಗಣನೆ ಆರಂಭವಾಗಿದೆ. ಇತ್ತ ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಹಾಗೂ ಆಯ್ಕೆ ಸಮಿತಿ ಐಪಿಎಲ್ ಮೇಲೆ ಕಣ್ಣಿಟ್ಟಿದ್ದು, ವಿಶ್ವಕಪ್ ತಂಡದ ಆಯ್ಕೆಗೆ ಐಪಿಎಲ್ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ತಿಳಿಸಿದೆ. ಏಕದಿನ ವಿಶ್ವಕಪ್ ಕೂಡ ಸನಿಹದಲ್ಲಿರುವುದರಿಂದ ಆಯ್ಕೆ ಸಮಿತಿ ಬಲಿಷ್ಠ ಭಾರತ ತಂಡವನ್ನು ರಚಿಸುವ ಯೋಜನೆಯಲ್ಲಿದೆ. ಹೀಗಾಗಿ ವಿಶ್ವಕಪ್‌ಗ್ೂ ಮುನ್ನ ನಡೆಯುವ ಈ ಬಹುದೊಡ್ಡ ಲೀಗ್‌ನಲ್ಲಿ ಉತ್ತಮ ಪ್ರದರ್ಶನ ನೀಡುವ ಆಟಗಾರರ ಮೇಲೆ ಬಿಸಿಸಿಐ ಗಮನ ಹರಿಸಲಿದೆ.
ವಿಶ್ವಕಪ್‌ಗೆ ತಂಡ ಆಯ್ಕೆ ಮಾಡುವ ಸಂದರ್ಭ ಎಂ.ಎಸ್.ಕೆ. ಪ್ರಸಾದ್ ಹಾಗೂ ಅವರ ತಂಡ 12ನೇ ಆವೃತ್ತಿಯ ಐಪಿಎಲ್‌ನ ಮೊದಲ ತಿಂಗಳ ಪಂದ್ಯಗಳನ್ನು ಗಂಭೀರವಾಗಿ ಪರಿಗಣಿಸಲಿದೆ. ಇಲ್ಲಿ ಆಟಗಾರರು ನೀಡುವ ಪ್ರದರ್ಶನ ಮೇಲೆ ತಂಡ ರಚನೆ ಮಾಡಲಿದ್ದಾರೆ ಎಂಬ ವಿಷಯವನ್ನು ಬಿಸಿಸಿಐ ಅಧಿಕಾರಿಗಳು ಹೇಳಿದ್ದಾರೆ.
4 ಆಟಗಾರರ ಪೈಪೋಟಿ
“ಕಳೆದ ಆಸ್ಟ್ರೇಲಿಯ ವಿರುದ್ಧದ ಏಕದಿನ ಟೂರ್ನಿಯ ವೇಳೆ ತಂಡದಲ್ಲಿ ಬಹಳಷ್ಟು ಪ್ರಯೋಗಗಳನ್ನು ಮಾಡಲಾಗಿದೆ. 4ನೇ ಕ್ರಮಾಂಕದ ಆಟಗಾರ ಯಾರು ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಇದಕ್ಕಾಗಿ 4 ಆಟಗಾರರು ಪೈಪೋಟಿ ನಡೆಸುತ್ತಿದ್ದು, ಐಪಿಎಲ್‌ನಲ್ಲಿ ಆಟಗಾರರು ನೀಡುವ ಪ್ರದರ್ಶನದ ಮೇಲೆ ಈ ಸ್ಥಾನಕ್ಕೆ ಆಟಗಾರರನ್ನು ಆಯ್ಕೆ ಮಾಡಿಕೊಳ್ಳಬಹುದು. ಆಸ್ಟ್ರೇಲಿಯ ವಿರುದ್ಧದ ಸರಣಿಯಲ್ಲಿ ವಿಶ್ವಕಪ್ ತಂಡ ನಿರ್ಧರಿಸಬಹುದು ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ ಆ ಸರಣಿಯಿಂದ ಯಾವುದೇ ಪ್ರಯೋಜನವಾಗಲಿಲ್ಲ, ಬದಲಾಗಿ ಇನ್ನಷ್ಟು ಸಮಸ್ಯೆಗಳಿಗೆ ಕಾರಣವಾಗಿದೆ.
ವಿಶ್ವಕಪ್ ತಂಡಕ್ಕೆ ನಾಲ್ವರು ಬ್ಯಾಟ್ಸ್‌ಮನ್, ಒಬ್ಬರು ಅಥವಾ ಇಬ್ಬರು ಆಲ್‌ರೌಂಡರ್, 5 ಅಥವಾ 6 ಬೌಲರ್‌ಗಳನ್ನು ಆಯ್ಕೆ ಸಮಿತಿ ಆಯ್ಕೆ ಮಾಡಿಕೊಳ್ಳಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.