ಐಪಿಎಲ್ ಫಾರ್ಮ್ ವಿಶ್ವಕಪ್‌ಗೆ ಮಾನದಂಡವಲ್ಲ: ಮೊಹಿಂದರ್
Team Udayavani, Feb 1, 2019, 12:30 AM IST
ಹೊಸದಿಲ್ಲಿ: ಐಪಿಎಲ್‌ನಲ್ಲಿ ಕಂಡುಬರುವ ಕ್ರಿಕೆಟಿಗರ ಫಾರ್ಮ್ ಏಕದಿನ ವಿಶ್ವಕಪ್ ಆಯ್ಕೆಗೆ ಮಾನದಂಡವಲ್ಲ ಎಂದು 1983ರ ವಿಶ್ವಕಪ್ ಹೀರೋ ಮೊಹಿಂದರ್ ಅಮರ್‌ನಾಥ್ ಹೇಳಿದ್ದಾರೆ.
“ವಿಶ್ವಕಪ್‌ಗ ಮುನ್ನ ಇಂಡಿಯನ್ ಪ್ರೀಮಿಯರ್ ಲೀಗ್ ನಡೆಯಲಿದೆ. ಈ ಲೀಗ್‌ನಲ್ಲಿ ಆಡುವ ಆಟಗಾರರ ಫಾರ್ಮ್ ಅನ್ನು ವಿಶ್ವಕಪ್ ತಂಡದ ಆಯ್ಕೆಯ ಸಂದರ್ಭದಲ್ಲಿ ಗಣನೆಗೆ ತೆಗೆದುಕೊಳ್ಳುವುದಿಲ್ಲ. ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಆಟಗಾರರ ಪ್ರದರ್ಶನದ ಆಧಾರದ ಮೇಲೆ ತಂಡವನ್ನು ಆಯ್ಕೆ ಮಾಡಲಾಗುತ್ತದೆ ಎಂಬುದನ್ನು ಅರಿಯಬೇಕು’ ಎಂದು ಅಮರ್‌ನಾಥ್ ಹೇಳಿದರು.
ಅಮೋಘ ಸಾಧನೆ
“ಆಸ್ಟ್ರೇಲಿಯ ನೆಲದಲ್ಲಿ ಭಾರತದ ಸಾಧನೆ ಅಮೋಘವಾಗಿತ್ತು. ಆದರೆ ನ್ಯೂಜಿಲ್ಯಾಂಡ್‌ನಲ್ಲಿ ಇದಕ್ಕಿಂತ ಮಿಗಿಲಾದ ಸಾಧನೆ ನಮ್ಮವರದ್ದಾಗಿದೆ. 2009ರಿಂದ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಏಕದಿನ ಪಂದ್ಯವನ್ನು ಜಯಿಸಿದ್ದೇ ಅಪರೂಪ. ಈಗ ಸರಣಿಯನ್ನೇ ವಶಪಡಿಸಿಕೊಂಡಿದೆ. ನಾಯಕ ವಿರಾಟ್ ಕೊಹ್ಲಿ ಅವರ ಉಪಸ್ಥಿತಿ, ಅವರ ನಡವಳಿಕೆ, ತಂಡವನ್ನು ಮುನ್ನಡೆಸುವ ರೀತಿ ಎಲ್ಲವೂ ಶ್ಲಾಘನೀಯ. ಒಟ್ಟಾರೆಯಾಗಿ ವಿಶ್ವಕಪ್‌ಗೆ ಇದು ಉತ್ತಮ ತಯಾರಿ. ಭಾರತ ಹೊಸ ಆಟಗಾರರನ್ನು ಕಣಕ್ಕಿಳಿಸುವ ಪ್ರಯತ್ನ ಮಾಡಿದೆ. ಅದರಲ್ಲಿ ಕೆಲವು ಆಟಗಾರರು ಉತ್ತಮ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ವಿಶ್ವಕಪ್‌ಗೆ ತಂಡವನ್ನು ಅಂತಿಮಗೊಳಿಸುವುದು ಆಯ್ಕೆಗಾರರಿಗೆ ತಲೆನೋವಾಗಲಿದೆ’ ಎಂದು ಅಮರ್‌ನಾಥ್ ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ
MUST WATCH
ಹೊಸ ಸೇರ್ಪಡೆ
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.