![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 2, 2020, 7:01 PM IST
ಅಬುಧಾಬಿ : ಐಪಿಎಲ್ ನ 55 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಟಪಿಟಲ್ಸ್ ಹಾಗೂ ಆರ್ ಸಿಬಿ ತಂಡಗಳು ಸೆಣೆಸಾಟ ನಡೆಸಲಿವೆ. ಟಾಸ್ ಗೆದ್ದ ಡೆಲ್ಲಿ ಬಾಯ್ಸ್ ಬೌಲಿಂಗ್ ಆಯ್ದುಕೊಂಡಿದೆ.
ಈ ವರೆಗೆ ಐಪಿಎಲ್ ಪ್ರಶಸ್ತಿ ಜಯಿಸದ ಡೆಲ್ಲಿ ಮತ್ತು ಆರ್‌ಸಿಬಿ ತಂಡಗಳೆರಡೂ ಮೇಲ್ನೋಟಕ್ಕೆ ಬಲಿಷ್ಠವಾಗಿವೆ. ಆದರೆ ಅಸ್ಥಿರ ಪ್ರದರ್ಶನವೇ ಇತ್ತಂಡಗಳಿಗೆ ಮುಳುವಾಗಿದೆ. ಹೀಗಾಗಿ ಭವಿಷ್ಯ ನುಡಿಯುವುದು ಕಷ್ಟ. ಹಾಗೆಯೇ ಯಾರು ಮೇಲೆ ಬಂದರೆ ಹೆಚ್ಚಿನ ಲಾಭವಿದೆ ಎಂಬ ಲೆಕ್ಕಾಚಾರವೂ ಇಲ್ಲಿ ಕೆಲಸ ಮಾಡಬಹುದು!
ಆರ್ಸಿಬಿ ಮಧ್ಯಮ ಕ್ರಮಾಂಕ ದುರ್ಬಲ :
ಆರ್‌ಸಿಬಿಯ ಅಗ್ರ ಕ್ರಮಾಂಕದ ಬ್ಯಾಟಿಂಗ್ ಹೆಚ್ಚು ಬಲಿಷ್ಠ. ಪಡಿಕ್ಕಲ್ ಈ ಸರಣಿಯ ಹೀರೋ ಆಗಿದ್ದಾರೆ. ಇವರ ಜತೆಗಾರನಾಗಿ ಮತ್ತೆ ಫಿಂಚ್ ಕಣಕ್ಕಿಳಿಯಬಹುದು. ಆದರೆ ಮಿಡ್ಲ್ ಆರ್ಡರ್ ಗಟ್ಟಿ ಇಲ್ಲ. ನಾಯಕ ಕೊಹ್ಲಿ, ಎಬಿಡಿ ಈ ಪಂದ್ಯದಲ್ಲಿ ಸಿಡಿಯಲೇ ಬೇಕಿದೆ. ಇವರಿಬ್ಬರ ನಿರ್ಗಮನದ ಬಳಿಕ ಇನ್ನಿಂಗ್ಸ್ ಬೆಳೆಸಬಲ್ಲ ಆಟಗಾರರಿಲ್ಲ. ಗುರುಕೀರತ್ ಬದಲು ಪಾರ್ಥಿವ್ ಪಟೇಲ್ ಮೊದಲ ಅವಕಾಶ ಪಡೆದರೆ ಅಚ್ಚರಿ ಇಲ್ಲ. ಆರ್‌ಸಿಬಿ ಬೌಲಿಂಗ್ ಡೆಲ್ಲಿ ತಂಡದಷ್ಟು ಬಲಿಷ್ಠವಾಗಿಲ್ಲ ಎಂಬುದನ್ನು ಒಪ್ಪಲೇಬೇಕು.
ಡೆಲ್ಲಿಗೆ ಬ್ಯಾಟಿಂಗ್ ಚಿಂತೆ :
ಆರಂಭದಲ್ಲಿ ಡೆಲ್ಲಿ ತೋರಿದ ಪ್ರದರ್ಶನ ಕಂಡಾಗ ಕಪ್ ಗೆಲ್ಲುವ ಫೇವರಿಟ್ ತಂಡವಾಗಿ ಗೋಚರಿಸಿತ್ತು. ಆದರೆ ಅಂತಿಮ ಹಂತದಲ್ಲಿ ಸತತ ಸೋಲಿನಿಂದ ಕಂಗೆಟ್ಟು ಪ್ಲೇ ಆಫ್ಗೆ ತೇರ್ಗಡೆಯಾಗುವುದೇ ಕಷ್ಟ ಎಂಬ ಸ್ಥಿತಿಗೆ ತಲುಪಿದೆ. ಸ್ಫೋಟಕ ಬ್ಯಾಟಿಂಗ್ ನಡೆಸುತ್ತಿದ್ದ ಧವನ್, ನಾಯಕ ಅಯ್ಯರ್, ಮಾರ್ಕಸ್ ಸ್ಟೋಯಿನಿಸ್ ಈಗ ತೀವ್ರ ರನ್ ಬರಗಾಲದಲ್ಲಿದ್ದಾರೆ. ವಿಂಡೀಸ್ ಹಿಟ್ಟರ್ ಹೆಟ್‌ಮೈರ್, ಪಂತ್, ಪೃಥ್ವಿ ಶಾ ಇದುವರೆಗೆ ಒಂದೇ ಒಂದು “ಹಿಟ್ ಶೋ’ ನೀಡಿಲ್ಲ. ಇವರೆಲ್ಲ ನಿರ್ಣಾಯಕ ಪಂದ್ಯದಲ್ಲಿ ಮಿಂಚಿದರಷ್ಟೇ ತಂಡಕ್ಕೆ ಲಾಭ. ಬೌಲಿಂಗ್ ವಿಭಾಗ ರಬಾಡ, ನೋರ್ಜೆ ಮತ್ತು ಆರ್. ಅಶ್ವಿನ್ ಅವರನ್ನು ಅವಲಂಬಿಸಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ ಇಲೆವೆನ್): ಜೋಶ್ ಫಿಲಿಪ್, ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್ (ಕೀಪರ್), ವಾಷಿಂಗ್ಟನ್ ಸುಂದರ್, ಶಿವಮ್ ಡ್ಯೂಬ್, ಶಹಬಾಜ್ ಅಹ್ಮದ್, ಕ್ರಿಸ್ ಮೋರಿಸ್, ಇಸುರು ಉದಾನಾ, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಲ್.
ಡೆಲ್ಲಿ ಕ್ಯಾಟಪಿಟಲ್ಸ್ ( ಪ್ಲೇಯಿಂಗ್ ಇಲೆವೆನ್): ಶಿಖರ್ ಧವನ್, ಪೃಥ್ವಿ ಶಾ, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್ (ನಾಯಕ), ರಿಷಭ್ ಪಂತ್ (ಕೀಪರ್), ಮಾರ್ಕಸ್ ಸ್ಟೊಯಿನಿಸ್, ಡೇನಿಯಲ್ ಸ್ಯಾಮ್ಸ್, ಆಕ್ಸಾರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಗಿಸೊ ರಬಾಡಾ, ಅನ್ರಿಕ್ ನಾರ್ಟ್ಜೆ
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.