ರಾಜಸ್ಥಾನ್ – ಆರ್ ಸಿಬಿ ಮುಖಾಮುಖಿ ; ಟಾಸ್ ಗೆದ್ದ ಸ್ಮಿತ್ ಪಡೆ ಬ್ಯಾಟಿಂಗ್ ಆಯ್ಕೆ
Team Udayavani, Oct 17, 2020, 3:00 PM IST
ದುಬೈ : ರಾಜಸ್ಥಾನ್ ರಾಯಲ್ಸ್ ಹಾಗೂ ಆರ್ ಸಿಬಿ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ಸ್ಮಿತ್ ಪಡೆ ಬ್ಯಾಟಿಂಗ್ ಆಯ್ದುಕೊಂಡಿದೆ.
ಇದುವರೆಗೆ 8 ಪಂದ್ಯವನ್ನಾಡಿದ ರಾಜಸ್ಥಾನ್ ರಾಯಲ್ಸ್ 3 ಪಂದ್ಯದಲ್ಲಿ ಮೇಲುಗೈ ಸಾಧಿಸಿ,5 ಪಂದ್ಯದಲ್ಲಿ ಮುಗ್ಗರಿಸಿದೆ. ಸದ್ಯ ರಾಜಸ್ಥಾನ್ ಅಂಕ ಪಟ್ಟಿಯಲ್ಲಿ 6 ಅಂಕದೊಂದಿಗೆ 7 ನೇ ಸ್ಥಾನದಲ್ಲಿದೆ. ಇತ್ತ ಆರ್ ಸಿಬಿ ತಂಡ ಈ ಬಾರಿ ಉತ್ತಮ ಆರಂಭವನ್ನು ಪಡೆದುಕೊಂಡಿದ್ದು ಇದುವರೆಗೆ ಆಡಿದ 8 ಪಂದ್ಯದಲ್ಲಿ 5 ರಲ್ಲಿ ಗೆಲುವು ಸಾಧಿಸಿ, 3 ಪಂದ್ಯದಲ್ಲಿ ಮುಗ್ಗರಿಸಿ, ಸದ್ಯ 10 ಅಂಕದೊಂದಿಗೆ 3 ನೇ ಸ್ಥಾನದೊಂದಿಗೆ ಭದ್ರವಾಗಿ ನಿಂತಿದೆ.
ಆರ್ ಸಿಬಿ ಕಳೆದ ಪಂದ್ಯದ ಪ್ರಯೋಗ ಸಲ್ಲದು :
ಪಂಜಾಬ್ ವಿರುದ್ಧ ಎಬಿಡಿ ವಿಲಿಯರ್ ಅವರನ್ನು ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗಿಗೆ ಇಳಿಸಿದ ಕಾರಣದಿಂದಲೇ ಪಂದ್ಯ ಸೋಲಬೇಕಾಯಿತು ಎನ್ನುವುದು ಹಲವರ ಅಭಿಪ್ರಾಯವಾಗಿದೆ. ಅದರಂತೆ ಕೊಹ್ಲಿ ಈ ಪಂದ್ಯದಲ್ಲಿಯೂ ಪ್ರಯೋಗಕ್ಕೆ ಮುಂದಾದರೆ ತಂಡಕ್ಕೆ ಹಿನ್ನೆಡೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಮಾರಿಸ್ ಕಳೆದ ಪಂದ್ಯದಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ಮಿಂಚಿ ತನ್ನ ಆಲ್‌ರೌಂಡರ್ ಪ್ರದರ್ಶನ ತೋರುವಲ್ಲಿ ಯಶಸ್ಸು ಕಂಡಿದ್ದಾರೆ. ಆದ್ದರಿಂದ ಇವರ ಮೇಲೆ ತಂಡ ಹೆಚ್ಚು ನಿರೀಕ್ಷೆ ಇಟ್ಟಿದೆ.
ಪಡಿಕ್ಕಲ್ ಮತ್ತು ಫಿಂಚ್ ಈ ಪಂದ್ಯದ ಮೂಲಕ ಮತ್ತೆ ಬ್ಯಾಟಿಂಗ್ ಫಾರ್ಮ್ ಗೆ ಮರಳಬೇಕಾದ ಅನಿವಾರ್ಯತೆ ಇದೆ. ನಾಯಕ ವಿರಾಟ್ ಮಾತ್ರ ಏಕಾಂಗಿಯಾಗಿ ಹೋರಾಡುತ್ತಿದ್ದು ಉಳಿದವರಿಂದ ನಿರೀಕ್ಷಿತ ಪ್ರದರ್ಶನ ಕಂಡುಬರುತಿಲ್ಲ. ಕಳೆದ ಪಂದ್ಯದ ಸೋಲನ್ನು ಸವಾಲಾಗಿ ಸ್ವೀಕರಿಸಿ ಮತ್ತೆ ಗೆಲುವಿನ ಹಳಿ ಏರಲಿ ಎನ್ನುವುದು ಆರ್‌ಸಿಬಿ ಅಭಿಮಾನಿಗಳ ಆಶಯವಾಗಿದೆ.
ರಾಜಸ್ಥಾನ್ ಸ್ಟಾರ್ ಆಟಗಾರರು ಮಿಂಚುತ್ತಿಲ್ಲ :
ರಾಜಸ್ಥಾನ ತಂಡ ಸ್ಟಾರ್ ಆಟಗಾರರಿಂದಲೇ ಕೂಡಿದ್ದರೂ ಯಾರೊಬ್ಬರು ನಿರೀಕ್ಷಿತ ಪ್ರದರ್ಶನ ತೋರುತ್ತಿಲ್ಲ ಆರಂಭದಲ್ಲಿ ಸತತ ಗೆಲುವಿನೊಂದಿಗೆ ಅಪಾಯಕಾರಿಯಾಗಿ ಗೊಚರಿಸಿದ ರಾಜಸ್ಥಾನ ನಂತರದಲ್ಲಿ ಇದೇ ಪ್ರದರ್ಶನ ತೋರುವಲ್ಲಿ ಎಡವುತ್ತಿದೆ. ನಾಯಕ ಸ್ಟೀವನ್ ಸ್ಮಿತ್, ಜಾಸ್ ಬಟ್ಲರ್, ಕೇರಳದ ಸ್ಟಂಪರ್ ಸಂಜು ಸ್ಯಾಮ್ಸನ್, ರಾಬಿನ್ ಉತ್ತಪ್ಪ ಪ್ರತೀ ಪಂದ್ಯದಲ್ಲಿಯೂ ಬ್ಯಾಟಿಂಗ್ ಬರ ಅನುಭವಿಸುತ್ತಿರುವುದು ತಂಡದ ಸೋಲಿಗೆ ಪ್ರಮುಖ ಕಾರಣ. ಮಧ್ಯಮ ಕ್ರಮಾಂಕದಲ್ಲಿ ರಿಯಾನ್ ಪರಾಗ್, ಆಲ್‌ರೌಂಡರ್ ರಾಹುಲ್ ತೆವಾತಿಯಾ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸುತ್ತಿರುವುದರಿಂದ ತಂಡ 150ರ ಗಡಿ ದಾಟುವಲ್ಲಿ ಯಶಸ್ವಿಯಾಗುತ್ತಿದೆ. ಬೌಲಿಂಗ್‌ನಲ್ಲಿ ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ಹೊರತು ಪಡಿಸಿ ಮತ್ತಯಾರು ಘಾತಕ ಸ್ಪೆಲ್ ನಡೆಸುತ್ತಿಲ್ಲ.
ರಾಜಸ್ಥಾನ್ ರಾಯಲ್ಸ್ (ಪ್ಲೇಯಿಂಗ್ ಇಲೆವೆನ್): ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್ (ಕೀಪರ್), ಸ್ಟೀವನ್ ಸ್ಮಿತ್ (ನಾಯಕ), ಸಂಜು ಸ್ಯಾಮ್ಸನ್, ರಾಬಿನ್ ಉತ್ತಪ್ಪ, ರಿಯಾನ್ ಪರಾಗ್, ರಾಹುಲ್ ತೇವಟಿಯಾ, ಜೋಫ್ರಾ ಆರ್ಚರ್, ಶ್ರೇಯಾಸ್ ಗೋಪಾಲ್, ಜಯದೇವ್ ಉನಾದ್ಕಟ್, ಕಾರ್ತಿಕ್ ತ್ಯಾಗಿ.
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ ಇಲೆವೆನ್): ಆರನ್ ಫಿಂಚ್, ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್ (ಕೀಪರ್), ಗುರ್ಕೀರತ್ ಸಿಂಗ್ ಮನ್, ವಾಷಿಂಗ್ಟನ್ ಸುಂದರ್, ಕ್ರಿಸ್ ಮೋರಿಸ್, ಶಹಬಾಜ್ ಅಹ್ಮದ್, ಇಸುರು ಉದಾನಾ, ನವದೀಪ್ ಸೈನಿ, ಯುಜ್ವೇಂದ್ರ ಚಹಲ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
M Chinnaswamy Stadium; ಶಾಂತಾ ಹೆಸರಿಡಲು ಸಮಸ್ಯೆಯೇನಿದೆ? ಕೆಎಸ್‌ಸಿಎ ತಾರತಮ್ಯವೇಕೆ?
PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್ ಸ್ಟೋರಿ
INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.