ವಿಶ್ವಕಪ್ ಶೂಟಿಂಗ್ : ಬೆಳ್ಳಿ ಗೆದ್ದ ಸ್ವಪ್ನಿಲ್ ಕುಸಾಲೆ
Team Udayavani, Jun 3, 2022, 6:16 AM IST
ಬಾಕು (ಆಜರ್‌ಬೈಜಾನ್): ಇಲ್ಲಿ ನಡೆಯುತ್ತಿರುವ ಐಎಸ್‌ಎಸ್‌ಎಫ್ ವಿಶ್ವಕಪ್ ಶೂಟಿಂಗ್‌ನಲ್ಲಿ ಭಾರತದ ಸ್ವಪ್ನಿಲ್ ಕುಸಾಲೆ ಮೊದಲ ಪದಕ ಗೆದ್ದ ಸಾಧನೆಗೈದಿದ್ದಾರೆ. ಪುರು ಷರ 50 ಮೀ. ರೈಫಲ್ 3ಪಿ ವಿಭಾಗದಲ್ಲಿ ಅವರು ಬೆಳ್ಳಿ ಪದಕ ಜಯಿಸಿದರು.
ಚಿನ್ನದ ಪದಕ ಸ್ಪರ್ಧೆಯಲ್ಲಿ ಸ್ವಪ್ನಿಲ್ ಕುಸಾಲೆ ರಿಯೋ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ, ಉಕ್ರೇನಿನ ಸೆರಿಯ್ ಕುಲಿಶ್ ವಿರುದ್ಧ ಪರಾಭವಗೊಂಡರು. ಇದು ಐಎಸ್‌ಎಸ್‌ಎಫ್ ವಿಶ್ವಕಪ್‌ನಲ್ಲಿ ಸ್ವಪ್ನಿಲ್ ಗೆದ್ದ ಮೊದಲ ವೈಯಕ್ತಿಕ ಪದಕ. ಕುಲಿಶ್ 411 ಅಂಕ ಗಳಿಸಿದರೆ, ಸ್ವಪ್ನಿಲ್ 409.1 ಅಂಕ ಸಂಪಾದಿಸಿದರು. ಫಿನ್ಲಂಡಿನ ಅಲೆಕ್ಸಿ ಕಂಚು ಜಯಿಸಿದರು (407.8).
ಇದಕ್ಕೂ ಮೊದಲಿನ ಅರ್ಹತಾ ಸುತ್ತಿನ ಸ್ಪರ್ಧೆಯಿಂದಲೂ ಕುಲಿಶ್ ಮತ್ತು ಸ್ವಪ್ನಿಲ್ ಒಂದು-ಎರಡನೇ ಸ್ಥಾನ ವನ್ನೇ ಕಾಯ್ದುಕೊಂಡು ಬಂದಿದ್ದರು. ಭಾರತದ 12 ಸದಸ್ಯರ ತಂಡ ಒಂದು ಚಿನ್ನ, ಒಂದು ಬೆಳ್ಳಿ ಪದಕದೊಂದಿಗೆ 5ನೇ ಸ್ಥಾನದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
MUST WATCH
ಹೊಸ ಸೇರ್ಪಡೆ
Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.