ನ್ಯಾಯಾಂಗ ನಿಂದನೆ: ನನ್ನತಪ್ಪಿಲ್ಲ ಎಂದ ಅನುರಾಗ್
Team Udayavani, Jul 9, 2017, 3:40 AM IST
ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯಕ್ಕೆ ಮಾಹಿತಿ ನೀಡಿರುವ ಬಿಸಿಸಿಐ ಪದಚ್ಯುತ ಅಧ್ಯಕ್ಷ ಅನುರಾಗ್ ಠಾಕೂರ್ ಇದರಲ್ಲಿ ತಮ್ಮ ತಪ್ಪಿಲ್ಲ ಎಂದು ಸಾಬೀತು ಪಡಿಸಲು ಹೆಣಗಿದ್ದಾರೆ. 2016ರಲ್ಲಿ ಸರ್ವೋಚ್ಚ ನ್ಯಾಯಾಲಯ ಬಿಸಿಸಿಐಗೆ ಆಡಳಿತಾತ್ಮಕ ಸುಧಾರಣೆ ಘೋಷಿಸಿತ್ತು.
ಅನಂತರ ಅನುರಾಗ್ ಠಾಕೂರ್, ಐಸಿಸಿ ಮುಖ್ಯಸ್ಥ ಶಶಾಂಕ್ ಮನೋಹರ್ ತೆರಳಿ ನ್ಯಾಯಪೀಠದ ಆದೇಶ ಪಾಲನೆ ಮಾಡಿದರೆ ಬಿಸಿಸಿಐ ಅಮಾನ್ಯ ಮಾಡಬೇಕಾಗುತ್ತದೆ ಎಂಬ ಪತ್ರ ಕೊಡುವಂತೆ ಕೇಳಿದ್ದರು. ಇದರಿಂದ ನ್ಯಾಯಪೀಠ ಕೆಂಡಾಮಂಡಲವಾಗಿತ್ತು.
ಈ ಬಗ್ಗೆ ನ್ಯಾಯಪೀಠಕ್ಕೆ ಮಾಹಿತಿ ನೀಡಿರುವ ಅನುರಾಗ್, 2016ರಲ್ಲಿ ಸ್ವತಃ ಶಶಾಂಕ್ ಮನೋಹರ್ ಅವರೇ ಈ ಬಗ್ಗೆ
ನನಗೆ ಟಿಪ್ಪಣಿ ನೀಡಿದ್ದರು. ಹೀಗೆ ಕೇಳುವುದರಲ್ಲಿ ತಪ್ಪಿಲ್ಲವೆಂದೂ ಹೇಳಿದ್ದರು. ಈ ಬಗ್ಗೆ ಕೆಲ ಇ-ಮೇಲ್ ವಿವರವನ್ನೂ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.