ವಿಂಡೀಸ್ ವಿರುದ್ಧ 26 ರನ್ ಗಳಿಸಿದರೆ ಸಾಕು ಕೆ ಎಲ್ ರಾಹುಲ್ ಹೊಸ ದಾಖಲೆ
Team Udayavani, Dec 5, 2019, 1:20 PM IST
ಹೈದರಾಬಾದ್: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ ಟ್ವೆಂಟಿ ಪಂದ್ಯವಾಡಲು ಟೀಂ ಇಂಡಿಯಾ ಸಜ್ಜಾಗಿದೆ. ಹೈದರಾಬಾದ್ ನ ರಾಜೀವ್ ಗಾಂಧಿ ಸ್ಟೇಡಿಯಂ ನಲ್ಲಿ ನಡೆಯುವ ಮೊದಲ ಪಂದ್ಯದಲ್ಲಿ ಆರಂಭಿಕ ಆಟಗಾರ ಕೆ ಎಲ್ ರಾಹುಲ್ ಹೊಸ ದಾಖಲೆ ಬರೆಯಲು ಸಜ್ಜಾಗಿದ್ದಾರೆ.
ಕನ್ನಡಿಗ ಕೆ ಎಲ್ ರಾಹುಲ್ ಇನ್ನು 26 ರನ್ ಗಳಿಸಿದರೆ ಹೊಸ ದಾಖಲೆ ಬರೆಯಲಿದ್ದಾರೆ. ಅಂತಾರಾಷ್ಟ್ರೀಯ ಟಿ ಟ್ವೆಂಟಿಯಲ್ಲಿ ಒಂದು ಸಾವಿರ ರನ್ ಗಡಿ ದಾಟಲು ರಾಹುಲ್ ಗೆ ಇನ್ನು 26 ರನ್ ಅಗತ್ಯವಿದ್ದು, ಈ ಸಾಧನೆ ಮಾಡಿದ ಏಳನೆ ಭಾರತೀಯ ಎಂಬ ಸಾಧನೆ ರಾಹುಲ್ ಅವರದ್ದಾಗಲಿದೆ.
ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ರೋಹಿತ್ ಶರ್ಮಾ ಇದ್ದರೆ, ನಂತರ ವಿರಾಟ್ ಕೊಹ್ಲಿ, ಮಹೇಂದ್ರ ಸಿಂಗ್ ಧೋನಿ, ಸುರೇಶ್ ರೈನಾ, ಶಿಖರ್ ಧವನ್ ಮತ್ತು ಯುವರಾಜ್ ಸಿಂಗ್ ಇದ್ದಾರೆ.
ಮೊದಲ ಆಯ್ಕೆಯ ಆರಂಭಿಕ ಆಟಗಾರ ಶಿಖರ್ ಧವನ್ ಗಾಯಗೊಂಡ ಕಾರಣ ರಾಹುಲ್ ಆರಂಭಿಕನಾಗಿ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಲಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.